Karnataka, Mangalore, Uttara Kannada Rains Weather Live News Updates ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರ ಮತ್ತು ಗ್ರಾಮಾಂತರದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ಕರಾವಳಿ ಭಾಗದ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೂ ಭಾರಿ ಮಳೆಯಾಗಲಿದೆ.
ಉತ್ತರ ಒಳನಾಡಿನಲ್ಲಿ ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಕಲ್ಬುರ್ಗಿ, ಹಾವೇರಿ, ಗದಗ, ದಕ್ಷಿಣ ಒಳನಾಡಿನಲ್ಲಿ ರಾಮನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲೂ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರ್ನಾಟಕದ 7 ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಭಾರತದ ಹವಾಮಾನ ಇಲಾಖೆ (IMD) ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 6ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ.
ಇಂದಿನಿಂದ 4 ದಿನಗಳ ಕಾಲ ಅಂದರೆ ಆಗಸ್ಟ್ 6ರವರೆಗೆ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ (ಆ. 3) ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
Karnataka | Severe water-logging inundating parts of a highway due to heavy rainfall in Bhatkal town in Uttara Kannada district pic.twitter.com/dK2nEhMIfP
— ANI (@ANI) August 2, 2022
ಕೋಲಾರ: ಕೋಲಾರದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೋಲಾರ ತಾಲ್ಲೂಕು ಕೋಡಿಕಣ್ಣೂರು ಬಳಿ ರಭಸವಾಗಿ ಹರಿಯುತ್ತಿರುವ ರಾಜಾಕಾಲುವೆಯಲ್ಲಿ ಯವಕ ಕೊಚ್ಚಿಹೋಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಕಳೆದ ಮೂರು ಗಂಟೆಗಳಿಂದ ಯುವಕನ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ.
ಕೋಲಾರ: ಮಳೆಯ ನೀರಿನಲ್ಲಿ ಮೀನು ಹಿಡಿಯಲು ಹೋಗಿ ಯುವಕ ಕೊಚ್ವಿಹೋಗಿರುವ ಘಟನೆ ಕೋಲಾರ ತಾಲ್ಲೂಕು ಕೋಡಿಕಣ್ಣೂರು ಬಳಿ ನಡೆದಿದೆ. ಕೊಚ್ಚಿಹೋದ ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹರಿಯುವ ನೀರಿನಲ್ಲಿ ಇಳಿಯದಂತೆ ಅಗ್ನಿಶಾಮಕ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕೋಲಾರ: ಮಳೆಯ ನೀರಿನಲ್ಲಿ ಮೀನು ಹಿಡಿಯಲು ಹೋಗಿ ಯುವಕ ಕೊಚ್ವಿಹೋಗಿರುವ ಘಟನೆ ಕೋಲಾರ ತಾಲ್ಲೂಕು ಕೋಡಿಕಣ್ಣೂರು ಬಳಿ ನಡೆದಿದೆ. ಕೊಚ್ಚಿಹೋದ ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹರಿಯುವ ನೀರಿನಲ್ಲಿ ಇಳಿಯದಂತೆ ಅಗ್ನಿಶಾಮಕ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹಾವೇರಿ: ಕುಮುದ್ವತಿ ನದಿಗೆ ನೀರಿನ ಪ್ರಮಾಣ ಹೆಚ್ಚುತ್ತಿದ್ದು, ಎಲಿವಾಳ-ಚಪ್ಪರದಹಳ್ಳಿ ಗ್ರಾಮದ ನಡುವಿನ ಸೇತುವೆ ಮೇಲಿನ ಸಂಚಾರ ಬಂದ್ ಆಗಿದೆ. ಸೇತುವೆ ಮೇಲೆ ಭರಪೂರ ನೀರು ತುಂಬಿ ಹರಿತಿರೋದ್ರಿಂದ ಸೇತುವೆ ಮೇಲಿನ ಸಂಚಾರ ಬಂದ್ ಆಗಿದೆ. ಜಿಲ್ಲೆಯಲ್ಲಿ ಮಳೆರಾಯ ಸಂಪೂರ್ಣ ಬಿಡುವು ನೀಡಿದ್ರೂ ಮಲೆನಾಡು ಭಾಗದಲ್ಲಿ ಮಳೆ ಬೀಳ್ತಿರೋದ್ರಿಂದ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಸಾವು ನೋವು ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಭಟ್ಕಳಕ್ಕೆ ತೆರಳಿದ್ದು, ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಸಿಎಂ ಪರಿಶೀಲನೆ ಮಾಡಲಿದ್ದಾರೆ. ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ಭೇಟಿ ಸಿಎಂ ನೀಡುವ ಸಾಧ್ಯತೆಯಿದೆ.
ವಿಜಯಪುರ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ತಾಳಿಕೋಟೆ ಪಟ್ಟಣದ ಬಳಿಯ ಡೋಣಿ ನದಿ ಮೈದುಂಬಿ ಹರಿಯುತ್ತಿದೆ. ಡೋಣಿ ನದಿಯ ಹಳೆಯ ಕೆಳ ಸೇತುವೆ ಮುಳುಗಡೆಯಾಗಿದ್ದು, ಮನಗೂಳಿ ದೇವಾಪೂರ ರಾಜ್ಯ ಹೆದ್ದಾರಿ 61ರಲ್ಲಿ ಸಂಚಾರ ಬಂದ್ ಆಗಿದೆ.
ತುಮಕೂರು: ನಗರದ 35ನೇ ವಾರ್ಡ್ನಲ್ಲಿ ಭಾರಿ ಮಳೆಗೆ 6 ವಿದ್ಯುತ್ ಕಂಬಗಳು ಉರುಳಿ ಬಿದಿದ್ದು, ವಿದ್ಯುತ್ ಸಂಪರ್ಕ ಸ್ಥಗಿತವಾಗಿದೆ. ಬೃಹತ್ ಆಲದ ಮರ ಉರುಳಿಬಿದ್ದು 1 ಕಾರು, 2 ಬೈಕ್, ಮನೆ ಜಖಂ ಆಗಿದೆ.
ಯಾದಗಿರಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಅಪಾರ ಹಾನಿ ಉಂಟಾಗಿದೆ. ಸುರಪುರ ತಾಲೂಕಿನ ಯಕ್ತಾಪುರ ಗ್ರಾಮದಲ್ಲಿ ಜಮೀನು ಜಲಾವೃತವಾಗಿದ್ದು, ಅಪಾರ ಪ್ರಮಾಣದ ಹತ್ತಿ ಸೇರಿದಂತೆ ಇತರೆ ಬೆಳೆ ಹಾನಿಯಾಗಿದೆ.
ಹಾಸನ: ಭಾರಿ ಮಳೆಗೆ ಹಾಸನ ಜಿಲ್ಲೆಯ ಜನ ತತ್ತರಿಸಿದ್ದು, ಸಾವಿರಾರು ವರ್ಷ ಇತಿಹಾಸವಿರೋ ಶ್ರವಣಬೆಳಗೊಳ ಕೋಟೆ ಕುಸಿತವಾಗಿದೆ. ವಿಶ್ವ ವಿಖ್ಯಾತ ಗೊಮ್ಮಟೇಶ್ವರ ಮೂರ್ತಿ ಸುತ್ತಲೂ ಕೋಟೆ ಕಟ್ಟಿದ್ದು, ಭಾರಿ ಮಳೆಗೆ ಕೋಟೆಯ ಕಲ್ಲುಗಳು ಉರುಳಿ ಬಿದ್ದಿವೆ. ಬೆಟ್ಟಕ್ಕೆ ಹತ್ತುವ ದಾರಿ ಮಧ್ಯೆ ಭಾರಿ ಗಾತ್ರದ ಬಂಡೆಗಳು ಉರುಳಿದ್ದು, ಬೆಟ್ಟದ ತಪ್ಪಲು ಜನ ಆತಂಕಗೊಂಡಿದ್ದಾರೆ. ಮೆಟ್ಟಿಲುಗಳ ಮೇಲೆ ದೊಡ್ಡ ದೊಡ್ಡ ಕಲ್ಲುಗಳು ಬಿದ್ದಿರುವುದರಿಂದ ಬೆಟ್ಟ ಹತ್ತಲು ನಿರ್ಬಂಧಿಸಲಾಗಿದೆ.
ಮಡಿಕೇರಿ: ಭಾರಿ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿರುವಂತಹ ಘಟನೆ ಸುಳ್ಯ ತಾಲೂಕಿನ ಅರಂಬೂರ್ ಗ್ರಾಮದ ಬಳಿ ನಡೆದಿದೆ. ಮಡಿಕೇರಿ-ಮಾಣಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪಯಸ್ವಿನಿ ನದಿ ಉಕ್ಕಿ ಹರಿದ ಹಿನ್ನೆಲೆ ಭಾರಿ ಪ್ರವಾಹ ಉಂಟಾಗಿದೆ.
ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಭಾರಿ ಮಳೆ ಅವಾಂತರ ಹಿನ್ನೆಲೆ ಸಾಯಿ ಲೇಔಟ್ ಜಲಾವೃತವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಸಚಿವ ಭೈರತಿ ಬಸವರಾಜ್ ಪರಿಶೀಲನೆ ಮಾಡಿದರು. ಜೊತೆಗೆ ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕೋಲಾರ: ಜಿಲ್ಲೆಯಲ್ಲಿ ರಾತ್ರಿ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಹನುಮಂತರಾಯನದಿನ್ನೆ ಗ್ರಾಮದಲ್ಲಿ ಮನೆ ಗೋಡೆ ಕುಸಿದಿದೆ. ಗ್ರಾಮದ ಮುನಿಲಕ್ಷ್ಮಮ್ಮ ಎಂಬುವರಿಗೆ ಸೇರಿದ ಮನೆ ಕುಸಿತವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಕಲಬುರಗಿ: ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರಿ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ಚಿಂಚೋಳಿ-ದೇಗಲಮಡಿ ಮಾರ್ಗದ ಸೇತುವೆ ಮುಳುಗಡೆಯಾಗಿದ್ದು, ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು ಜಲಾವೃತವಾಗಿದೆ.
ಬೆಂಗಳೂರು: ಸಾಯಿ ಲೇಔಟ್ನಲ್ಲಿ ನೀರು ತುಂಬಿರುವ ಹಿನ್ನೆಲೆಯಲ್ಲಿ ಮೂಕ ಪ್ರಾಣಿಗಳು ಪರದಾಡುವಂತ್ತಾಗಿದ್ದು, ನಾಯಿಗಳು ನೀರಿನಲ್ಲಿ ಓಡಾಡುತ್ತಿವೆ. ರಾತ್ರಿಯಿಂದ ಊಟವಿಲ್ಲದೆ ಊಟಕ್ಕಾಗಿ ಶ್ವಾನಗಳು ಗೋಳಾಡುತ್ತಿವೆ. ಆಹಾರಕ್ಕಾಗಿ ಮನೆಯಿಂದ ಮನೆಗೆ ಶ್ವಾನಗಳು ಓಡಾಡುತ್ತಿವೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದ್ದು, 30ಕ್ಕೂ ಹೆಚ್ಚು ದೋಣಿಗಳು ಸಮುದ್ರ ಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದಲ್ಲಿ ನಡೆದಿದೆ. ಮೀನುಗಾರಿಕೆಗೆ ಇಟ್ಟಿದ್ದ ಬೋಟ್‌ಗಳು ಸಮುದ್ರ ಪಾಲಾಗಿದ್ದು, ಮೀನುಗಾರಿಕೆ ಬಲೆಗಳು ಸಂಪೂರ್ಣ ಹಾನಿಯಾಗಿವೆ.
ಬೆಂಗಳೂರು: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಟಿ.ದಾಸರಹಳ್ಳಿ ಭಾಗದಲ್ಲಿ ವಿದ್ಯುತ್ ಕಡಿತವಾಗಿದ್ದು, ಸರ್ಕಾರಿ ಶಾಲೆ ರಸ್ತೆ, ಪೈಪ್ಲೈನ್ ರಸ್ತೆ, ಆಂಜನೇಯ ಬಡಾವಣೆ, ಮಲ್ಲಸಂದ್ರ, ಬಾಗಲಗುಂಟೆ ಸೇರಿ ಹಲವೆಡೆ ಜನರು ಪರದಾಡುವಂತ್ತಾಗಿದೆ. ಮನವಿಗೆ ಸ್ಪಂದಿಸದ ಬೆಸ್ಕಾಂ ಸಿಬ್ಬಂದಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಯಚೂರು: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಆಟೋ ಕೊಚ್ಚಿಹೋಗಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಹಳ್ಳಿಹೊಸರು ಹಳ್ಳದಲ್ಲಿ ನಡೆದಿದೆ. ಸೇತುವೆ ಮುಳುಗಡೆಯಾಗಿದ್ರೂ ಸೇತುವೆ ದಾಟಲು ಯತ್ನಿಸಿದ್ದು, ಈ ವೇಳೆ ನೀರಿನ ರಭಸಕ್ಕೆ ಗೂಡ್ಸ್ ಆಟೋ ಕೊಚ್ಚಿ ಹೋಗಿದೆ. ಆಟೋ ಹಾಗೂ ಚಾಲಕನನ್ನ ಸ್ಥಳೀಯರು ರಕ್ಷಣೆ ಮಾಡಿದರು.
ರಾಮನಗರ: ಕಣ್ವ ಡ್ಯಾಂನಿಂದ ನೀರು ಬಿಟ್ಟ ಹಿನ್ನೆಲೆ ಕೊಂಡಾಪುರ-ಬಾಣಗನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿದೆ. ಕಣ್ವ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಜಲಾವೃತವಾಗಿದ್ದು, ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ.
ಮಂಡ್ಯ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ರಾತ್ರಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಹಲವು ಗ್ರಾಮಗಳ ಜಮೀನು ಜಲಾವೃತವಾಗಿವೆ. ಕೆರೆಕಟ್ಟೆಗಳು ತುಂಬಿರುವುದರಿಂದ ಜಮೀನುಗಳಿಗೆ ನೀರು ನುಗ್ಗಿದೆ. ಕೆಆರ್‌ಪೇಟೆ ತಾಲೂಕಿನ ದೇವರಹಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ. ನೂರು ಎಕರೆ ಜಮೀನು ಜಲಾವೃತವಾಗಿದ್ದು, ಬಾಳೆ, ಕಬ್ಬು, ತೆಂಗು, ಅಡಿಕೆ ಸೇರಿದಂತೆ ಇತರೆ ಬೆಳೆಗಳು ಜಲಾವೃತವಾಗಿವೆ. ಮಳೆಯಿಂದ ರೈತರು ಕಂಗಾಲಾಗಿದ್ದಾರೆ.
ಕೊಡಗು: ದಕ್ಷಿಣ ಕನ್ನಡ ಗಡಿ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಸುಳ್ಯ ತಾಲೂಕಿನ ಗೂನಡ್ಕ, ಕಲ್ಲುಗುಂಡಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪಯಸ್ವಿನಿ ನದಿ ಪ್ರವಾಹದಿಂದಾಗಿ ಮಡಿಕೇರಿ-ಮಂಗಳೂರು ಸಂಪರ್ಕ ಕಟ್ ಆಗಿದೆ.
ಬೆಂಗಳೂರು: ಮಳೆ ನೀರಲ್ಲೇ ಶಾಲೆಗೆ ಹೊರಟ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು. ಮನೆಯಲ್ಲಿ ಫುಲ್ ನೀರು ತುಂಬಿಕೊಂಡಿದೆ. ಇನ್ನೂ ನೀರು ಖಾಲಿ ಆಗಿಲ್ಲ ಮಂಡಿಯವರೆಗೆ ನೀರಿದೆ. ಮನೆಯಲ್ಲಿದ್ದ ವಸ್ತುಗಳು ಎಲ್ಲಾ ಹಾಳಾಗಿ ಹೋಗಿದೆ. ಎಸ್ಎಸ್ಎಲ್ಸಿ ಹಾಗಾಗಿ ಸ್ಕೂಲ್ಗೆ ಹೋಗಲೇ ಬೇಕು.
ತುಮಕೂರು: ಜಿಲ್ಲೆಯಲ್ಲಿ ಧಾರಕಾರ ಮಳೆಗೆ ಕೆರೆಗಳು ಉಕ್ಕಿ ಹರಿಯುತ್ತಿದ್ದು, ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆ ಕೋಡಿ ಬಿದ್ದಿದೆ. ಎರಡು ದಶಕಗಳ ಬಳಿಕ ಮಾವತ್ತೂರು ಕೆರೆ ಕೋಡಿ ಬಿದಿದ್ದು, ಅತಿ ರಭಸವಾಗಿ ನೀರು ಹರಿಯುತ್ತಿದೆ. ಕೊರಟಗೆರೆ ತಾಲೂಕಿನ ಅರ್ಧ ತಾಲೂಕಿಗೆ ಜೀವನ ನಾಡಿಯಾಗಿರುವ ಮಾವತ್ತೂರು ಕೆರೆ ಸಂಪೂರ್ಣ ಭರ್ತಿಯಾಗಿದ್ದು, ರೈತರಲ್ಲಿ ಮುಖದಲ್ಲಿ ಮಂದಹಾಸ ಮೂಡಿದೆ.
ಬೆಂಗಳೂರು: ನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ದೊಮ್ಮಲೂರಿನ ಆಂಧ್ರ ಕಾಲೋನಿಯಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಕಾಲೋನಿಯಲ್ಲಿ ಮನೆಗಳಿಗೆ ನೀರು ನುಗ್ಗಿ ತೀವ್ರ ಪರದಾಟ ಉಂಟಾಗಿದೆ. ಮನೆ ಬಳಿ ನಿಲ್ಲಿಸಿದ್ದ ಬೈಕ್ ಹಾಗೂ ಕಾರುಗಳು ಮುಳುಗಡೆಯಾಗಿವೆ.
Published On - 7:28 am, Wed, 3 August 22