ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರಾ? ಕೋಡಿಮಠ ಸ್ವಾಮೀಜಿ ಭವಿಷ್ಯ ಹೀಗಿದೆ
Kodi Mutt Swamiji Predictions; ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೋ ಇಲ್ಲವೋ ಎಂಬುದು 2024ರ ಲೋಕಸಭೆ ಚುನಾವಣೆಯ ನಂತರ ತೀರ್ಮಾನ ಆಗಲಿದೆ ಎಂದು ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. ಇದರೊಂದಿಗೆ, ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೂ ಆಗಬಹುದು ಎಂಬ ಸುಳಿವು ನೀಡಿದ್ದಾರೆ.
ಹಾಸನ, ಆಗಸ್ಟ್ 16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಲಿದ್ದಾರೆಯೇ? ಈ ಪ್ರಶ್ನೆಗೆ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Swamiji) ಬುಧವಾರ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರಕ್ಕೆ ಏನೂ ತೊಂದರೆಯಿಲ್ಲ. ಆದರೆ, ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೋ ಇಲ್ಲವೋ ಎಂಬುದು 2024ರ ಲೋಕಸಭೆ ಚುನಾವಣೆಯ (Lok Sabha Election 2024) ನಂತರ ತೀರ್ಮಾನ ಆಗಲಿದೆ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ, ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೂ ಆಗಬಹುದು ಎಂಬ ಸುಳಿವು ನೀಡಿದ್ದಾರೆ.
ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಬರಲಿದೆ, ಏನಾಗಲಿದೆ ಎಂಬುದನ್ನು ಚುನಾವಣೆ ಸಮೀಪಿಸಿದಾಗ ತಿಳಿಸುತ್ತೇನೆ ಎಂದು ಸ್ವಾಮಿಜಿ ಹೇಳಿದ್ದಾರೆ.
ಭೂಮಿ ಬಿರುಕು ಆಗುವುದು, ದ್ವೇಷ, ಅಪಮೃತ್ಯು ಹೆಚ್ಚಲಿದೆ; ಕೋಡಿಮಠ ಶ್ರೀ
ರಾಜ್ಯದಲ್ಲಿ ಮಳೆ ಬರಲಿದೆ ತೊಂದರೆ ಏನಿಲ್ಲ. ಹಿಂದೆ ಒಂದು ಬಾರಿ ಮಳೆ ಬಂದಂತೆ ಇನ್ನೊಂದು ಸಾರಿ ಮಳೆಯಾಗಲಿದೆ. ಮಳೆಗೇನು ತೊಂದರೆ ಆಗಲ್ಲ. ಕಾಲ ಹೇಳ್ತಿನಿ ಅಷ್ಟೇ, ಮಳೆ ಬರಲಿದೆ. ಅನ್ನಕ್ಕೆ ತೊಂದರೆಯಾಗದು ಎಂದು ಕೋಡಿ ಶ್ರೀ ಭವಿಷ್ಯ ನುಡಿದಿದ್ದಾರೆ. ವಿಪರೀತ ಮಳೆಯಾಗುವ ಲಕ್ಷಣ ಇದೆ, ಬೇಕಾದಷ್ಟು ಮಳೆ ಬರಲಿದೆ ಎಂದೂ ಅವರು ಹೇಳಿದ್ದಾರೆ.
ಮಳೆ, ಗುಡುಗು, ಭೂಮಿ ಬಿರುಕು ಬಿಡುವುದು, ದ್ವೇಷ ಹೆಚ್ಚಾಗುವುದು, ಅಪಮೃತ್ಯು ಎಲ್ಲ ಹೆಚ್ಚಾಗಲಿವೆ. ಪ್ರಕೃತಿಯಿಂದಲೂ ಹಾನಿ ಇದೆ. ಶ್ರಾವಣದಲ್ಲೇ ಮಳೆಯ ಬಗ್ಗೆ ಎಲ್ಲರಿಗೂ ಗೊತ್ತಾಗಲಿದೆ. ಶ್ರಾವಣದ ಮಧ್ಯಭಾಗದ ನಂತರ ಕಾರ್ತಿಕದವರೆಗೂ ಮಳೆಯಾಗಲಿದೆ. ಮತ್ತೆ ಮಳೆಯಿಂದ ಅಪಾಯ ಆಗುವ ಲಕ್ಷಣಗಳಿವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ; Kodi Mutt Swamiji: ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ; ಕೋಡಿಮಠ ಶ್ರೀ ಭವಿಷ್ಯ
ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗುತ್ತಾ ಇದೆ. ಆದರೆ ಏನೂ ಆಗುವುದಿಲ್ಲ. ನೋಡೋರಿಲ್ಲ, ಕೇಳೋರಿಲ್ಲ, ಆನಂದ ಪಡುವವರಿಲ್ಲ ಎಂದು ಸ್ವಾಮೀಜಿ ಮಾರ್ಮಿಕವಾಗಿ ನುಡಿದಿದ್ದಾರೆ.
ಜೂನ್ನಲ್ಲಿಯೂ ಆಘಾತಕಾರಿ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀ
ಕೆಲವುನ ದಿನಗಳ ಹಿಂದೆಯೂ ಕೋಡಿಮಠ ಶ್ರೀ ಆಘಾತಕಾರಿ ಭವಿಷ್ಯ ನುಡಿದಿದ್ದರು. ಕೋಲಾರ ತಾಲ್ಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಜೂನ್ನಲ್ಲಿ ಭೇಟಿ ನೀಡಿದ್ದ ಅವರು, ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಈ ವರ್ಷ ಅಚನಕ್ಕಾಗಿ ಗುಡುಗು ಮಿಂಚು, ಮಳೆ, ಬರಲಿದೆ. ಎರಡು ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿವೆ. ಎಲ್ಲೋ ನಡೆದ ಬಾಂಬ್ ದಾಳಿಯಿಂದ ನಮಗೆ ಸಾಕಷ್ಟು ಅನಾಹುತ ಸಂಭವಿಸಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದರು. ಅಧ್ಯಾತ್ಮಿಕವಾಗಿ ನಡೆದುಕೊಂಡರೆ ತೊಂದರೆ ಇಲ್ಲೆ. ಆಧ್ಯಾತ್ಮ ಬಿಟ್ಟು ಹೋದರೆ ಅವರಿಗೆ ದೈವವೇ ಉತ್ತರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:01 pm, Wed, 16 August 23