ಕೊಪ್ಪಳ: ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಎರಡು ಗುಂಪುಗಳ ಗಲಾಟೆ
ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ಜಿಲ್ಲೆ ಕಾರಟಗಿ ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ನಡೆದಿದೆ. ಸದ್ಯ ಕೊಪ್ಪಳ ಎಸ್ಪಿ, ಐಜಿಪಿ ಬೂದಗುಂಪಾ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಗಲಾಟೆ ಸಂಬಂಧ ಕೆಲವರನ್ನು ವಶಕ್ಕೆ ಪಡೆಯಲಾಗಿದೆ.
ಕೊಪ್ಪಳ: ಗ್ರಾಮ ಪಂಚಾಯಿತಿ (Gram Panchayat) ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ಜಿಲ್ಲೆ ಕಾರಟಗಿ (Kartagi) ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳು ಕಟ್ಟಿಗೆ, ಕಲ್ಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿವೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೊಲೀಸರ ನಿಯೋಜಿಸಲಾಗಿದೆ.
ಬೂದಗುಂಪಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ಬಂದಿತ್ತು. ಇದನ್ನು ಪ್ರಶ್ನಿಸಿ ಇತರೆ ಸಮುದಾಯಗಳು ಕೋರ್ಟ್ ಮೆಟ್ಟಿಲೇರಿದ್ದವು. ಈ ಹಿನ್ನೆಲೆಯಲ್ಲಿ ನಿನ್ನೆ (ಆ.12) ರಾತ್ರಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ವಾಗ್ವಾದ ವಿಕೋಪಕ್ಕೆ ತಿರುಗಿ ಎರಡು ಸಮುದಾಯಗಳ ನಡುವೆ ನಡೆದ ಗಲಾಟೆ ನಡೆದಿದೆ.
ಇದನ್ನೂ ಓದಿ: ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿ
ಸದ್ಯ ಕೊಪ್ಪಳ ಎಸ್ಪಿ, ಐಜಿಪಿ ಬೂದಗುಂಪಾ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಗಲಾಟೆ ಸಂಬಂಧ ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:39 am, Sun, 13 August 23