ಆಪರೇಷನ್ ಹಸ್ತದ ಜತೆಗೆ ಆಪರೇಷನ್ ಬಿಬಿಎಂಪಿ ಶುರು, ಸಾಲು-ಸಾಲು ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ

| Updated By: ರಮೇಶ್ ಬಿ. ಜವಳಗೇರಾ

Updated on: Aug 21, 2023 | 1:29 PM

ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತದ ಜತೆಗೆ ಆಪರೇಷನ್ ಬಿಬಿಎಂಪಿ ಶುರು ಮಾಡಿಕೊಂಡಿದೆ. ಹೀಗಾಗಿ ಬೇರೆ ಬೇರೆ ಪಕ್ಷಗಳ ನಾಯಕರಿಗೆ ಗಾಳ ಹಾಕಿದೆ. ಆರ್​​ಆರ್​ ನಗರ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೆ ಇದೀಗ ಕೆಆರ್​ ಪುರ ಬಿಜೆಪಿ ಮಾಜಿ ಕಾರ್ಪೋರೇಟರ್​ಗಳು ಕೈ ಹಿಡಿದಿದ್ದಾರೆ. ಇದರಿಂದ ಬಿಜೆಪಿಗೆ ದಿಕ್ಕುತೋಚದಂತಾಗಿದೆ.

ಆಪರೇಷನ್ ಹಸ್ತದ ಜತೆಗೆ ಆಪರೇಷನ್ ಬಿಬಿಎಂಪಿ ಶುರು, ಸಾಲು-ಸಾಲು ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ
ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಕಾರ್ಪೋರೇಟರ್​ಗಳು
Follow us on

ಬೆಂಗಳೂರು, (ಆಗಸ್ಟ್ 21): ಮುಂಬರುವ ಲೋಕಸಭಾ (Loksabha Elctions 2024) ಹಾಗೂ ಬಿಬಿಎಂಪಿ ಚುನಾವಣೆಗೆ (BBMP Elections ) ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ (Congress)​, ಸದ್ದಿಲ್ಲದೇ ಬೇರೆ ಪಕ್ಷದ ನಾಯಕರಿಗೆ ಗಾಳ ಹಾಕಿದ್ದು,ಇದೀಗ ಆಪರೇಷನ್​​​ ಹಸ್ತದ (Opeation Hasta) ಜೊತೆ ಆಪರೇಷನ್ ಬಿಬಿಎಂಪಿ ಶುರು ಮಾಡಿಕೊಂಡಿದೆ. ಮತ್ತೊಂದೆಡೆ ಕಾಂಗ್ರೆಸ್​ನ ಅಸ್ತ್ರದಿಂದ ತಮ್ಮ ನಾಯಕರನ್ನು ಹಿಡಿದಿಟ್ಟುಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ. ಆದರೂ ಸಹ ಇಂದು (ಆಗಸ್ಟ್ 21) ಹಲವು ಮಾಜಿ ಕಾರ್ಪೊರೇಟರ್​ಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. KR ಪುರ ಕ್ಷೇತ್ರದ ಮಾಜಿ ಕಾರ್ಪೊರೇಟರ್‌ಗಳಾದ ವೀರಣ್ಣ, ಶ್ರೀನಿವಾಸ ಅವರು ಇಂದು (ಆಗಸ್ಟ್ 21) ಕುಮಾರಕೃಪಾ ಗೆಸ್ಟ್​​​ಹೌಸ್​​​ನಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಆರ್.ಆರ್ ನಗರದ ಕ್ಷೇತ್ರದ ಬಿಜೆಪಿ ಮಾಜಿ ಕಾರ್ಪೊರೇಟರ್‌ಗಳು ಕಾಂಗ್ರೆಸ್​ ಸೇರ್ಪಡೆಯಾದ ಬಳಿಕ ಇದೀಗ ಕೆ.ಆರ್ ಪುರ ಕ್ಷೇತ್ರದ ಮಾಜಿ ಕಾರ್ಪೋರೇಟ್​ಗಳು ಕೈ ಹಿಡಿದರು.

ವಿಜಿನಾಪುರ ವಾರ್ಡ್ ಮಾಜಿ ಕಾರ್ಪೋರೇಟರ್​ ರಾಜಣ್ಣ (ಬಂಡೆ) , ಕೆ.ಆರ್ ಪುರ ವಾರ್ಡ್ ಮಾಜಿ ಕಾರ್ಪೋರೇಟರ್​ ವೀರಣ್ಣ ಅವರು ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಈ ವೇಳೆ ಸಚಿವ ಬೈರತಿ ಸುರೇಶ್ ಕೂಡ ಉಪಸ್ಥಿತರಿದ್ದರು. ಕೆಲ ದಿನಗಳಿಂದ ಅಷ್ಟೇ ಆರ್​ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಕೆಆರ್ ಪುರಂ ಕ್ಷೇತ್ರದಲ್ಲೂ ಸದ್ದಿಲ್ಲದೇ ಬಿಜೆಪಿ ಶಾಸಕರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಬಿಜೆಪಿಗೆ ಆತಂಕ ಶುರುವಾಗಿದೆ.

ಇದನ್ನೂ ಓದಿ: ಬಿಜೆಪಿಯತ್ತ ಮುಖ ಮಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಇತ್ತ ಡಿಕೆ ಶಿವಕುಮಾರ್​ ಭೇಟಿಯಾದ ಬಿಜೆಪಿ ಹಿರಿಯ ನಾಯಕ

ಇನ್ನು ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್​, ಬಿಜೆಪಿ ಮುಖಂಡರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಆಯನೂರು ಮಂಜುನಾಥ್, ಶಿಕಾರಿಪುರ ನಾಗರಾಜ್ ಗೌಡ ಅಧಿಕೃತವಾಗಿ ಕೈ ಹಿಡಿಯಲಿದ್ದಾರೆ. ಇನ್ನು ಆಪರೇಷನ್​ ಹಸ್ತದಲ್ಲಿ ಭಾರೀ ಸುದ್ದಿಯಾಗಿರುವ ಯಶವಂತಪುರ ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೊದಲು ತಮ್ಮ ಬೆಂಬಲಿಗರನ್ನು ಕಾಂಗ್ರೆಸ್​​ ಪಕ್ಷಕ್ಕೆ ಕಳಿಸುವುದು. ಬಳಿಕ ಕಾಂಗ್ರೆಸ್ ಸೇರುವ ಲೆಕ್ಕಾಚಾರದಲ್ಲಿ ಎಸ್​.ಟಿ.ಸೋಮಶೇಖರ್​ ಇದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ನಡೆ ನಿಗೂಢವಾಗಿದ್ದು, ಅವರ ಮುಂದಿನ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

ಸದ್ಯ ಆರ್​ಆರ್​ ನಗರ, ಕೆಆರ್​ ಪುರ ಕ್ಷೇತ್ರದಲ್ಲಿ ಆಪರೇಷನ್ ಸಕ್ಸಸ್ ಆಗಿದೆ. ಇದೀಗ ಎಸ್​​ಟಿ ಸೋಮಶೇಖರ್​ ಅವರ ಯಶವಂತಪುರ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿದೆ.  ಹೀಗೆ ಬೆಂಗಳೂರು ನಗರದಲ್ಲಿ ಒಂದೊಂದೇ ಏರಿಯಾದ ಬಿಜೆಪಿ ನಾಯಕರನ್ನು ಕಾಂಗ್ರೆಸ್​ ಸರಳೆಯುತ್ತಿದ್ದು, ಬಿಜೆಪಿಗೆ ದಿಕ್ಕುತೋಚದಂತಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:20 pm, Mon, 21 August 23