Karnataka Breaking Kannada News Live: ಲೋಕಸಭೆ ಚುನಾವಣೆಗೆ ಟಿಕೆಟ್‌ಗಾಗಿ ಲಾಭಿ; ಬೆಳಗಾವಿ, ಚಿಕ್ಕೋಡಿ ಕ್ಷೇತ್ರಗಳಿಗೆ ಟವೆಲ್ ಹಾಕಿದ ಮಾಜಿ ಬಿಜೆಪಿ ಎಂಎಲ್ಸಿ
Breaking News Today Live: ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಇದರಿಂದ ಅಗತ್ಯ ವಸ್ತುಗಳ ಬೆಲೆ ಕೊಂಚ ಏರಿಕೆಯಾಗಿದೆ. ಇನ್ನು ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ವಿಚಾರವಾಗಿ ಸುಪ್ರಿಂ ಕೋರ್ಟ್ನಲ್ಲಿ ಇಂದು ವಿಚಾರವಣೆ ನಡೆಯಲಿದ್ದು ತೀರ್ಪು ನಮ್ಮ ಪರವಾಗಿ ಬರಲೆಂದು ಕಾವೇರಿ ತೀರದ ರೈತರು ಮತ್ತು ಕನ್ನಡಿಗರ ಪ್ರಾರ್ಥಿಸುತ್ತಿದ್ದಾರೆ.
LIVE NEWS & UPDATES
-
Karnataka News Live: ಲೋಕಸಭೆ ಚುನಾವಣೆಗೆ ಟಿಕೆಟ್‌ಗಾಗಿ ಲಾಭಿ; ಬೆಳಗಾವಿ, ಚಿಕ್ಕೋಡಿ ಕ್ಷೇತ್ರಗಳಿಗೆ ಟವೆಲ್ ಹಾಕಿದ ಮಾಜಿ ಬಿಜೆಪಿ ಎಂಎಲ್ಸಿ
ಚಿಕ್ಕೋಡಿ: ಬೆಳಗಾವಿ, ಚಿಕ್ಕೋಡಿ ಎರಡು ಕ್ಷೇತ್ರಗಳ ಪೈಕಿ ಎಲ್ಲಿಯಾದರೂ ಸ್ಪರ್ಧಿಸಲು ನಾನು ಸಿದ್ಧನಿಂದ್ದೇನೆ. ನಾನೇನು ಸನ್ಯಾಸಿ ಅಲ್ಲ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋತು ಒಂದೂವರೆ ವರ್ಷ ಆಗಿದೆ ಎಂದು ಮಾಜಿ ವಿಧಾನ್ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
-
Karnataka News Live: ಬೆಳಗಾವಿ ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಸರ್ಕಾರಕ್ಕೆ ಬಿಜೆಪಿ ಒತ್ತಾಯ
ಬೆಳಗಾವಿ: ರೈತರಿಗೆ 7 ಗಂಟೆ ಅನಿಯಮಿತ ವಿದ್ಯುತ್ ಹಾಗೂ ಬೆಳಗಾವಿ ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಚಿಕ್ಕೋಡಿ ಉಪವಿಭಾಗಧಿಕಾರಿ ಮಾಧವ್ ಗಿತ್ತೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
-
Karnataka News Live: ಕೋಲಾರಮ್ಮ ದೇವಾಲಯದಲ್ಲಿ ಮಹಿಳೆಯರಿಗೆ ಬಾಗಿನ ವಿತರಣೆ
ಕೋಲಾರ: ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ, ಕೋಲಾರದ ನಗರ ದೇವತೆ ಕೋಲಾರಮ್ಮ ದೇವಾಲಯದಲ್ಲಿ ಮಹಿಳೆಯರಿಗೆ ಮುಜರಾಯಿ ಇಲಾಖೆ ವತಿಯಿಂದ ಅರಿಶಿಣ ಕುಂಕುಮ ಬಾಗಿನ ವಿತರಣೆ ಮಾಡಲಾಗಿದೆ. ಕೋಲಾರಮ್ಮ ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದಾರೆ.
Karnataka News Live: ಚಿತ್ರದುರ್ಗದಲ್ಲಿ ಕಳೆಕಟ್ಟಿದ ವರಮಹಾಲಕ್ಷ್ಮಿ ಹಬ್ಬ
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ನಗರದಲ್ಲಿನ ವಿವಿಧ ಲಕ್ಷ್ಮಿ ದೇವಸ್ಥಾನ ಮತ್ತು ಮನೆಗಳಲ್ಲಿ ವಿಶೇಷ ಪೂಜೆ ನೆರವೇರಿದೆ. ಚಂದ್ರಯಾನ 3 ಮಾದರಿಯಲ್ಲಿ ವರಮಹಾಲಕ್ಷ್ಮಿಗೆ ಅಲಂಕರಿಸಿ ಪೂಜೆ ಮಾಡಲಾಗಿದೆ. ಕಮಲದ ಹೂಗಳಲ್ಲಿ ವರ ಮಹಾಲಕ್ಷ್ಮಿಗೆ ವಿಶೇಷ ಅಲಂಕಾರ ಮಾಡಲಾಗಿದೆ.
Karnataka News Live: ಬೆಂಗಳೂರಿನ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ದೇವಿಯ ದರ್ಶನ ಮಾಡಲು ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.
Karnataka News Live: ಹಬ್ಬದ ಹಿನ್ನೆಲೆ ದೇವಾಲಯಗಳಲ್ಲಿ ಮಹಿಳೆಯರಿಗೆ ಅರಿಶಿಣ ಕುಂಕುಮ ಬಾಗಿನ
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮೀ ಹಬ್ಬ ಹಿನ್ನಲೆಯಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳಲ್ಲಿ ಮಹಿಳೆಯರಿಗೆ ಅರಿಶಿಣ ಕುಂಕುಮ ಬಾಗಿನ ನೀಡಲಾಗುತ್ತಿದೆ. ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ಅರಿಶಿನ ಕುಂಕುಮ ವಿತರಿಸಲಾಗುತ್ತಿದೆ. ಹಬ್ಬದ ಪ್ರಯುಕ್ತ ಸುಬ್ರಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದೆ.
Karnataka News Live: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ; ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಸೀಟ್ ಗೆಲ್ಲದಿದ್ದರೇ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈಹಾಕಿದೆ. ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Karnataka News Live: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಧಾರವಾಡದಲ್ಲಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಬಾಗಿನ
ಧಾರವಾಡ: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ನಗರದ ಮರಾಠಾ ಕಾಲನಿಯಲ್ಲಿರುವ ದುರ್ಗದೇವಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಅರಿಶಿನ ಕುಂಕುಮದ ಬಾಗಿನ ನೀಡಲಾಗುತ್ತಿದೆ. ಜಿಲ್ಲೆಯ 880 ದೇವಸ್ಥಾನಗಳಲ್ಲಿ ಬಾಗಿನ ವಿತರಣೆ ಮಾಡಲಾಗುತ್ತಿದೆ.
Karnataka News Live: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪ; ನೌಕಾನೆಲೆಯ ಭೂಸ್ವಾಧೀನ ಅಧಿಕಾರಿ ಬಂಧನ
ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪದಡಿ ಕಾರವಾರ ಸೀಬರ್ಡ್ ನೌಕಾನೆಲೆಯ ಭೂಸ್ವಾಧೀನ ಅಧಿಕಾರಿಯನ್ನು ಪೊಲೀಸರು ಬಂಧಸಿದ್ದಾರೆ.
Karnataka News Live: ಇಸ್ರೋಗೆ ಪ್ರಧಾನಿ ಮೋದಿ ಭೇಟಿ, ಬೆಂಗಳೂರಿನಲ್ಲಿ ಮಾರ್ಗ ಬದಲಾವಣೆ
ಬೆಂಗಳೂರು: ನಾಳೆ (ಆ.26) ಬೆಂಗಳೂರಿನಲ್ಲಿರುವ ಇಸ್ರೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 4.30ರಿಂದ ಬೆಳಗ್ಗೆ 9.30ರವರೆಗೆ ಸಂಚಾರ ಬದಲಾವಣೆ ಮಾಡಲಾಗಿದೆ. ಹಳೇ ಏರ್ಪೋರ್ಟ್ ರಸ್ತೆ, ಹಳೇ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ(ಮೇಖ್ರಿ ಸರ್ಕಲ್) ಸಿ.ವಿ.ರಾಮನ್ ರಸ್ತೆ, ಯಶವಂತಪುರ ಫ್ಲೈಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ) ಮಾಗಡಿ ರಸ್ತೆ, ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ನಾಳೆ ಬೆಳಗ್ಗೆ 4ರಿಂದ ಬೆಳಗ್ಗೆ 11ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ನಗರ ಪೊಲೀಸರ ಮನವಿ ಮಾಡಿದ್ದಾರೆ.
Karnataka News Live: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಖರೀದಿ ಜೋರು
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಕೆಆರ್ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿ ನಡೆದಿದೆ. ಹಣ್ಣು ಹೂವು, ತರಕಾರಿ ಪೂಜಾ ಸಾಮಗ್ರಿಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಸಾವಿರಾರು ಜನರು ಇಂದು ಕೆ ಆರ್ ಮಾರ್ಕೆಟ್ನಲ್ಲಿ ಖರೀದಿ ಮಾಡ್ತಿದ್ದಾರೆ.
Karnataka News Live: ಗದಗ ನಗರದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಬಲು ಜೋರು
ಗದಗ: ಜಿಲ್ಲೆಯಲ್ಲಿ ಶ್ರೀ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಬಲು ಜೋರಾಗಿದೆ. ಶ್ರೀ ವರಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರುತ್ತಿವೆ. ನಗರದ ಹಾತಲಗೇರಿ ನಾಕಾ ಬಳಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಅಪರಾ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಮಹಾಲಕ್ಷ್ಮಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿದೆ.
Karnataka News Live: ಇಂದು ರಾಜ್ಯದೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬ ಸಂಭ್ರಮ
ಬೆಂಗಳೂರು: ಇಂದು ರಾಜ್ಯದೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚಾರಿಸಲಾಗುತ್ತದೆ. ಹೀಗಾಗಿ ನಗರದ ಲಕ್ಷ್ಮಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಅದರಲ್ಲಂತೂ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಬೆಳ್ಳಗ್ಗೆ 5 ಗಂಟೆಯಿಂದಲೇ ಅಮ್ಮನವರಿಗೆ ಪಂಚಾಭಿಷೇಕ, ಪುಷ್ಪಭಿಷೇಕ ನೇರೆವೇರುತ್ತಿದ್ದು ವಿಶೇಷ ಅಲಂಕಾರದ ನಂತರ ಬರುವ ಭಕ್ತದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮತ್ತೊಂದೆಡೆ ನಗರದ ಬನಶಂಕರಿ, ಮಹಾಲಕ್ಷ್ಮಿ ಲೇಔಟ್ನ ಲಕ್ಷ್ಮಿ ದೇವಸ್ಥಾನ, ಕೆಆರ್ಮಾರ್ಕೆಟ್ನ ಕೋಟೆ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಇನ್ನು ಮುನ್ನುರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಭಾಗಿನ ನೀಡುವ ವ್ಯವಸ್ಥೆ ಮಾಡಲಾಗಿದೆ.
ಕರ್ನಾಟಕದಲ್ಲಿ ಇಂದು ವರಮಹಾಲಕ್ಷ್ಮಿ ಹಬ್ಬವನ್ನು ಭಕ್ತಿ, ಭಾವ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಹುಬ್ಬದ ನಿಮಿತ್ತ ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿಯೇ ನಡೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳ ಮಾರುಕಟ್ಟೆಗಳಲ್ಲಿ ಜನಜಂಗುಳಿ ಇದೆ. ಅಲ್ಲದೇ ಬೆಲೆ ಏರಿಕೆ ಕೂಡ ಗ್ರಾಹಕರಿಗೆ ಬಿಸಿ ತಟ್ಟಿದೆ. ಇನ್ನು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರವಾಗಿ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಇಂದು ಸುಪ್ರಿಂ ಕೋರ್ಟ್ನಲ್ಲಿ ವಿಚಾರಣೆ ಬರಲಿದೆ. ಇನ್ನು ರಾಜ್ಯ ಸರ್ಕಾರ ಕೂಡ 26 ಪುಟಗಳ ಅಫಿಡವಿಟ್ ಸಲ್ಲಿಸಿದೆ. ಇನ್ನು ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಸ್ವಲ್ಪಮಟ್ಟಿಗೆ ತೆರೆ ಮರೆಗೆ ಸರಿದಿದ್ದರೂ, ಮತ್ತೆ ಮುಖ್ಯ ವೇದಿಕೆ ಬರಲಿದೆ. ಅಲ್ಲದೇ ಕಳೆದ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮಮೂರ್ತಿಗೆ ಹೈಕೋರ್ಟ್ ಸಮನ್ಸ್ ನೀಡಲು ಸೂಚಿಸಿದೆ. ಇದರೊಂದಿಗೆ ಇಂದಿನ ಲೇಟೆಸ್ಟ್ ಅಪ್ಡೆಟ್ಸ್ ಇಲ್ಲಿದೆ.
Published On - Aug 25,2023 8:11 AM