ಇಸ್ರೋ ವಿಜ್ಞಾನಿಗಳ ಭೇಟಿಗೆ ಶನಿವಾರ ಬೆಂಗಳೂರಿಗೆ ಪ್ರಧಾನಿ ಮೋದಿ; ಪೀಣ್ಯದಲ್ಲಿ 1 ಕಿಮೀ ರೋಡ್​ ಶೋ ಸಾಧ್ಯತೆ

PM Narendra Modi will visit Bangalore on Saturday; ಅದ್ಧೂರಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸ್ವಾಗತಕ್ಕೆ ಎಚ್​ಎಎಲ್​​ ಏರ್​ಪೋರ್ಟ್​ನಲ್ಲಿ 5-6 ಸಾವಿರ ಜನರನ್ನು ಸೇರಿಸಲು ಉದ್ದೇಶಿಸಲಾಗಿದೆ. ಮೋದಿ ಅವರು ಏರ್​ಪೋರ್ಟ್​ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆಯೂ ಇದೆ.

Important Highlight‌
ಇಸ್ರೋ ವಿಜ್ಞಾನಿಗಳ ಭೇಟಿಗೆ ಶನಿವಾರ ಬೆಂಗಳೂರಿಗೆ ಪ್ರಧಾನಿ ಮೋದಿ; ಪೀಣ್ಯದಲ್ಲಿ 1 ಕಿಮೀ ರೋಡ್​ ಶೋ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ
Follow us
ಕಿರಣ್​ ಹನಿಯಡ್ಕ
| Updated By: ಗಣಪತಿ ಶರ್ಮ

Updated on:Aug 24, 2023 | 2:46 PM

ಬೆಂಗಳೂರು, ಆಗಸ್ಟ್ 24: ಇಸ್ರೋದ (ISRO) ಐತಿಹಾಸಿಕ ಚಂದ್ರಯಾನ-3 (Chandrayaan 3) ಯೋಜನೆ ಯಶಸ್ವಿಯಾಗಿರುವ ಕಾರಣ ಸಂಸ್ಥೆಯ ವಿಜ್ಞಾನಿಗಳನ್ನು ಅಭಿನಂದಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ  (Narendra Modi) ಶನಿವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಸದ್ಯ ದಕ್ಷಿಣ ಆಫ್ರಿಕಾದ ಜೋಹಾನ್ಸ್​​​ಬರ್ಗ್​​ನಲ್ಲಿ ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ಮೋದಿ ಅಲ್ಲಿಂದ ನೇರ ಬೆಂಗಳೂರಿಗೆ ಬರಲಿದ್ದಾರೆ. ನಂತರ ಇಸ್ರೋ ವಿಜ್ಞಾನಿಗಳನ್ನು ಭೇಟಿಯಾಗಿ ಅವರ ಜತೆ ಸಭೆ ನಡೆಸಿ ದೆಹಲಿಗೆ ತೆರಳಲಿದ್ದಾರೆ. ಈ ಮಧ್ಯೆ, ಮೋದಿ ಅವರ ಬೆಂಗಳೂರು ಭೇಟಿಯನ್ನು ಪಕ್ಷದ ದೃಷ್ಟಿಯಿಂದ ಪೂರಕವಾಗಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ.

ಪ್ರಧಾನಿ ಬೇಟಿ ವೇಳೆ ಹೆಚ್ಚಿನ ಜನ ಸೇರಿಸುವುದು ಮತ್ತು ಪೀಣ್ಯದಲ್ಲಿ ರೋಡ್ ಶೋ ನಡೆಸಲು ಬಿಜೆಪಿ ಚಿಂತನೆ ನಡೆಸಿದೆ. ಈ ವಿಚಾರವಾಗಿ ರಾಜ್ಯ ಘಟಕದ ನಾಯಕರಿಗೆ ವರಿಷ್ಠರಿಂದ ಈಗಾಗಲೇ ಸೂಚನೆ ಬಂದಿದೆ. ಅದ್ಧೂರಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸ್ವಾಗತಕ್ಕೆ ಎಚ್​ಎಎಲ್​​ ಏರ್​ಪೋರ್ಟ್​ನಲ್ಲಿ 5-6 ಸಾವಿರ ಜನರನ್ನು ಸೇರಿಸಲು ಉದ್ದೇಶಿಸಲಾಗಿದೆ. ಮೋದಿ ಅವರು ಏರ್​ಪೋರ್ಟ್​ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆಯೂ ಇದೆ.

ಪೀಣ್ಯದಲ್ಲಿ ಮೋದಿ ಅವರು ಸುಮಾರು 1 ಕಿಲೋಮೀಟರ್ ರೋಡ್​ಶೋ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಬೆಂಗಳೂರಿನ ಬಿಜೆಪಿ ಶಾಸಕರಿಗೆ ಕೂಡ ಸೂಚನೆ ನೀಡಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಚಂದ್ರಯಾನ-3 ಯಶಸ್ವಿ; ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ ಮೋದಿ

ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ. ಶನಿವಾರ ಸಂಜೆ 5.55ಕ್ಕೆ ಎಚ್​ಎಎಲ್​ ಏರ್‌ಪೋರ್ಟ್‌ಗೆ ಆಗಮಿಸಲಿರುವ ಪ್ರಧಾನಿ, ಸಂಜೆ 6.30ರವರೆಗೆ ಏರ್‌ಪೋರ್ಟ್‌ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ರಾತ್ರಿ 7 ಗಂಟೆಗೆ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ರಾತ್ರಿ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ನಂತರ ರಾತ್ರಿ 8.35ಕ್ಕೆ ಬೆಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.

ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್​​ ಬುಧವಾರ ಸಂಜೆ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಲ್ಯಾಂಡ್ ಆಗಿದೆ. ಆ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಮಹತ್ತರ ಮೈಲಿಗಲ್ಲು ಸಾಧಿಸಿದೆ. ಇದರ ಬೆನ್ನಲ್ಲೇ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿದ್ದ ಮೋದಿ ಅಭಿನಂದನೆ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Thu, 24 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು