ರಾಮನಗರ: ರಾಮನಗರ (Ramanagara) ಜಿಲ್ಲೆಯ ಹೊರವಲಯದಲ್ಲಿ ಮನೆಯೊಂದರಲ್ಲಿ ಕಚ್ಚಾ ಬಾಂಬ್ (Crude Bomb) ಸ್ಫೋಟಗೊಂಡು 27 ವರ್ಷದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಇತ್ತೀಚೆಗೆ ನಡೆದಿದೆ. ರಾಮನಗರ ಜಿಲ್ಲೆಯ ಹಾರೋಬೆಲೆ ಗ್ರಾಮದ ಸಚಿನ್ ಕುಮಾರ್ ಎಂಬಾತ ತನ್ನ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಸಂಗ್ರಹಿಸುತ್ತಿದ್ದರು. ಕಚ್ಚಾ ಬಾಂಬ್‌ಗಳನ್ನು ಕಾಡು ಹಂದಿಗಳನ್ನು ಬೇಟೆಯಾಡಲು ಬಳಸಲಾಗುತ್ತಿತ್ತು ಎಂದು ವರದಿಯಾಗಿದೆ. ಆಗಸ್ಟ್ 3 ರಂದು ಬಾಂಬ್ ಸ್ಫೋಟಗೊಂಡಾಗ ಸಚಿನ್ ಅವರ ಮುಖ ಮತ್ತು ಕೈಗಳಿಗೆ ತೀವ್ರ ಗಾಯಗಳಾಗಿವೆ.
ಸ್ಫೋಟದ ನಂತರ ಸಚಿನ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಚಿನ್ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ 1959ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಚಿನ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಮಧ್ಯೆ, ಜೈಪುರ ಮುಂಬೈ ಎಕ್ಸ್ಪ್ರೆಸ್ನಲ್ಲಿ ನಡೆದಿರುವ ಗುಂಡಿನ ದಾಳಿ ವಿಚಾರವಾಗಿ ರಾಮನಗರದಲ್ಲಿ ಎಸ್ಡಿಪಿಐ ಪ್ರತಿಭಟನೆ ನಡೆಸಿದೆ. ಹಿಂದೂ ಸಂಘಟೆನೆಗಳ ಕಾರಣವೇ ಕೊಲೆಯಾಗಿದೆ ಎಂದು ಆರೋಪಿಸಿದ ಎಸ್ಡಿಪಿಐ ಕಾರ್ಯಕರ್ತರು ಹಿಂದೂ ಸಂಘಟನೆಗಳ ವಿರುದ್ಧ ಘೋಷಣೆ ಕೂಗಿದ್ದಾರೆ.
ಘಟನೆ ಹಿಂದೆ ಯಾವುದೇ ಕೋಮು ದ್ವೇಷ ಇಲ್ಲ ಎಂದು ಸರ್ಕಾರಿ ಮೂಲಗಳು ಈಗಾಗಲೇ ಸ್ಪಷ್ಟಪಡಿಸಿವೆ. ಆದಾಗ್ಯೂ, ಘಟನೆ ಸಂಬಂಧ ಆರೋಪ, ಪ್ರತಿಭಟನೆಗಳು ಮುಂದುವರಿದಿವೆ. ಗುಂಡಿಕ್ಕಿ ಹತ್ಯೆ ಮಾಡಿದ ರೈಲ್ವೇ ರಕ್ಷಣಾ ಪಡೆ ಕಾನ್ಸ್ಟೆಬಲ್ ಅನ್ನು ಮಾನಸಿಕ ಆರೋಗ್ಯ ತಪಾಸಣೆಗಾಗಿ ಕಳುಹಿಸಲಾಗಿದೆ ಎಂದು ಸರ್ಕಾರಿ ಮೂಲಗಳು ಮಂಗಳವಾರ ತಿಳಿಸಿದ್ದವು.
ಕೃತ್ಯದ ಹಿಂದೆ ಕೋಮು ದ್ವೇಷವಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ವಿಡಿಯೊಗಳು ಮತ್ತು ಪೋಸ್ಟ್‌ಗಳಲ್ಲಿ ಉಲ್ಲೇಖಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ