ಉಡುಪಿ: ಪೊಲೀಸರ ಮೇಲೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಲು ಯತ್ನಿಸಿದ ಮಹಿಳೆ

ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ಅಂಗಡಿ ತೆರೆದ ಮಹಿಳೆ ವಿರುದ್ಧ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪ್ರಶ್ನಿಸಲು ಬಂದ ಪೊಲೀಸ್ ಸಿಬ್ಬಂದಿ ಮೇಲೆ ಅಂಗಡಿ ಮಾಲಕಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.

Important Highlight‌
ಉಡುಪಿ: ಪೊಲೀಸರ ಮೇಲೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಲು ಯತ್ನಿಸಿದ ಮಹಿಳೆ
ಸಾಂದರ್ಭಿಕ ಚಿತ್ರ
Follow us
Rakesh Nayak Manchi
|

Updated on:Aug 21, 2023 | 8:58 PM

ಕುಂದಾಪುರ, ಆಗಸ್ಟ್ 21: ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ಅಂಗಡಿ ವಸ್ತುಗಳನ್ನು ಇಟ್ಟುಕೊಂಡು ಜನರ ಓಡಾಟಕ್ಕೆ ತೊಂದರೆ ನೀಡುತ್ತಿದ್ದಾರೆ ಎಂಬ ದೂರಿನ ಅನ್ವಯ ಪ್ರಶ್ನಿಸಲು ಬಂದ ಪೊಲೀಸರ ಮೇಲೆ ಅಂಗಡಿ ಮಾಲಕಿ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಉಡುಪಿ (Udupi) ಜಿಲ್ಲೆಯ ಕುಂದಾಪುರದ ಬೈಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಕೋಟೇಶ್ವರ ಮುಖ್ಯರಸ್ತೆಯಲ್ಲಿ ಸರೋಜಾ ದಾಸ್ ಎಂಬ ಮಹಿಳೆ ಟೈಲರ್ ಮತ್ತು ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದರು. ಆದರೆ ಅಂಗಡಿಯ ಸಾಮಾನುಗಳನ್ನು ರಸ್ತೆಗೆ ಹರಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ಥಳೀಯರು ಆಕೆಯ ವಿರುದ್ಧ ದೂರಿದ್ದಾರೆ.

ಇದನ್ನೂ ಓದಿ: ಉಡುಪಿ: 7 ವರ್ಷಗಳಿಂದ ಶಾಲೆಗೆ ಗೈರಾಗಿ ಸಂಬಳ ಪಡೆಯುತ್ತಿದ್ದ ಆನಗಳ್ಳಿ ಸರ್ಕಾರಿ ಶಾಲೆಯ ಸಹಶಿಕ್ಷಕ ಅಮಾನತು

ತನಿಖೆಗೆ ಆಗಮಿಸಿದ ಪೊಲೀಸರನ್ನು ಮಹಿಳೆ ನಿಂದಿಸಿ ಬಾಟಲಿಯಲ್ಲಿದ್ದ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾಳೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ವಿರುದ್ಧ ಅಮಾಸೆಬೈಲು ಹಾಗೂ ಶಂಕರನಾರಾಯಣ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಾರಂಟ್ ಜಾರಿ ಮಾಡಲಾಗಿದೆ.

ಇತ್ತೀಚೆಗೆ, ಆಟೋ ವ್ಹೀಲಿಂಗ್ ಮಾಡುತ್ತಿದ್ದ ಚಾಲಕನನ್ನು ಹಿಡಿಯಲು ಮುಂದಾದಾಗ ಪೊಲೀಸರ ಮೇಲೆಯೇ ಆಟೋ ಹತ್ತಿಸಲು ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿತ್ತು. ಆಟೋವನ್ನು ಚಾಲಕ ಐ.ಕೆ.ರಸ್ತೆ ಕಡೆಯಿಂದ ವ್ಹೀಲಿಂಗ್ ಮಾಡಿಕೊಂಡು ಬರುತ್ತಿದ್ದನು. ಇದನ್ನು ನೋಡಿದ ಗಸ್ತು ತಿರುಗುತ್ತಿದ್ದ ಪೊಲೀಸರು, ಆಟೋವನ್ನು ತಡೆಯಲು ಮುಂದಾಗಿದ್ದರು. ಈ ವೇಳೆ ಇನ್​​ಸ್ಪೆಕ್ಟರ್ ಮೇಲೆಯೇ ಆಟೋ ಹತ್ತಿಸಲು ಚಾಲಕ ಯತ್ನಿಸಿದ್ದನು. ಕೂಡಲೇ ಇನ್​​ಸ್ಪೆಕ್ಟರ್ ಪಕ್ಕಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಆದರೆ ಚಾಲಕ ಆಟೋವನ್ನು ಪೊಲೀಸ್ ಜೀಪಿನ ಮುಂಭಾಗಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಪ್ರಯತ್ನಿಸಿದ್ದನು. ಸುಮಾರು 2 ಕಿ.ಮೀ. ದೂರದವರೆಗೆ ಚೇಸ್ ಮಾಡಿದ ಪೊಲೀಸರು ಸಾರ್ವಜನಿಕರ ಸಹಾಯದಿಂದ ಆರೋಪಿ ರೋಷನ್​​ನನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Mon, 21 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು