ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿಗೆ ಇನ್ನು ಕೆಲವೇ ದಿನ ಬಾಕಿ: ಇಲ್ಲಿದೆ ವಿವರ
ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2023ನೇ ಸಾಲಿನ ಮುಂಗಾರು ಹಂಗಾಮು, ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಹಾಗಾಗಿ ಬೆಳೆ ಸಾಲ ಪಡೆಯುವ ಮತ್ತು ಪಡೆಯದ ರೈತರು ವಿಮಾ ಕಂತನ್ನು ಜುಲೈ 31 ರಂದು ಪಾವತಿಸಲು ಕೊನೆಯ ದಿನವಾಗಿದೆ.
ಉತ್ತರ ಕನ್ನಡ, ಜುಲೈ 26: ಉತ್ತರ ಕನ್ನಡ ಜಿಲ್ಲೆಯಲ್ಲಿ 2023ನೇ ಸಾಲಿನ ಮುಂಗಾರು ಹಂಗಾಮು ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು (RWBCIS) ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಹಾಗಾಗಿ ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಜುಲೈ 31 ರಂದು ಪಾವತಿಸಲು ಕೊನೆಯ ದಿನವಾಗಿದೆ. ಈ ಕುರಿತಾಗಿ ತೋಟಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಮಾವು, ಶುಂಠಿ ಮತ್ತು ಕರಿಮೆಣಸು ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯ ನೀಡಲಾಗುತ್ತಿದೆ. ಈ ಪೈಕಿ ದಾಂಡೇಲಿ, ಹಳಿಯಾಳ, ಅಂಕೋಲಾ ಮತ್ತು ಮುಂಡಗೋಡ ತಾಲ್ಲೂಕಿನ ವಿಮಾ ಘಟಕಗಳಿಗೆ ಮಾವು, ಶುಂಠಿ ಮತ್ತು ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಗೆ ಶುಂಠಿ ಬೆಳೆಯನ್ನು ಹೊಸದಾಗಿ ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ.
ಇದನ್ನೂ ಓದಿ: Ballari News: ಬಳ್ಳಾರಿ; ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೊಂದಣಿಗೆ ಆಹ್ವಾನ
ರೈತರು ನಿಗದಿತ ಅರ್ಜಿ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ, ನಾಮಿನಿ ವಿವರ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂಬಂಧಿಸಿದ ಬ್ಯಾಂಕ್ ಶಾಖೆಯಲ್ಲಿ ಕೊನೆಯ ದಿನಾಂಕದ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು.
ಇದನ್ನೂ ಓದಿ: Crop Insurance: ಬೆಳೆ ವಿಮೆ ಬಗ್ಗೆ ಹತ್ತಾರು ಗೊಂದಲಗಳಿವೆಯಾ? ಹಾಗಾದ್ರೆ ಇಲ್ಲಿದೆ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ತೋಟಗಾರಿಕಾ ಇಲಾಖೆಯ ಕಚೇರಿ ಅಥವಾ ಹತ್ತಿರದ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಬಹುದಾಗಿದೆ.
ಬೆಳೆ ವಿಮೆ ಯೋಜನೆ ವಿವರ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:56 pm, Wed, 26 July 23