ವಿಜಯಪುರ: ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) (Siddheshwar Swamiji) ಅವರು ಇಂದು (ಜನವರಿ 02) ದೈವಾಧೀನರಾಗಿದ್ದಾರೆ. ಈ ಹಿನ್ನೆಲೆ ವಿಜಯಪುರ ಜಿಲ್ಲೆಯಾದ್ಯಂತ ನಾಳೆ (ಜ.3) ರಂದು ಶಾಲಾ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಸಿದ್ದೇಶ್ವರ ಸ್ವಾಮಿಗಳು ಶಿವೈಕ್ಯರಾಗಿದ್ದರಿಂದ ದಿನಾಂಕ 3-1-2023 ರಂದು ವಿಜಯಪುರ ಜಿಲ್ಲೆಯಲ್ಲಿ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿಲಾಗಿದೆ. ಅಲ್ಲದೇ ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂರತವನ್ನು ಕಾಪಾಡಿಕೊಂಡು ಕೋವಿಡ್-19 ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ಆದೇಶಿಸಿದೆ.
ಖ್ಯಾತ ಪ್ರವಚನಕಾರರು, ನಡೆದಾಡುವ ದೇವರು, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿ ವೈಕುಂಠ ಏಕಾದಶಿ ದಿನದಂದೇ(ಜನವರಿ 02) ಅದು ಸೂರ್ಯನ ಜೊತೆಗೆ ಅಸ್ತಂಗತರಾಗಿದ್ದಾರೆ.
ಹೌದು…ಇಂದು (ಜನವರಿ 2) ಎಲ್ಲೆಡೆ ವೈಕುಂಠ ಏಕಾದಶಿ ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ ಪುಷ್ಯ ಮಾಸದ ಶುಕ್ಲ ಪಕ್ಷದ ಏಕಾದಶಿಯಂದು ವೈಕುಂಠ ಏಕಾದಶಿ ಆಚರಿಸಲಾಗುತ್ತದೆ. ಇದನ್ನು ಮುಕ್ಕೋಟಿ ಏಕಾದಶಿ, ಸ್ವರ್ಗ ವತ್ತಿಲ ಏಕಾದಶಿ ಎಂದೂ ಕರೆಯುತ್ತಾರೆ. ಈ ದಿನವೇ ಸಿದ್ದೇಶ್ವರ ಸ್ವಾಮೀಜಿ ಲಿಂಗಕೈರಾಗಿದ್ದಾರೆ. ಅಲ್ಲದೇ ಸೂರ್ಯಾಸ್ತ ಸಮಯ 6-05 ಗಂಟೆಗೆ ಇದೇ ಸಮಯದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿವನ ಪಾದೈಕ್ಯರಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:56 pm, Mon, 2 January 23