Yadgir News: ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ: ಚಾಲಕನಿಗೆ ಗಾಯ
ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡಿರುವಂತಹ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.
ಯಾದಗಿರಿ, ಜುಲೈ 30: ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ (Ambulance) ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡಿರುವಂತಹ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಕಲಬುರಗಿ ನಗರದ ನಿವಾಸಿ ರಾಜು(45) ನಿನ್ನೆ ಮೃತಪಟ್ಟಿದ್ದರು. ಹಾಗಾಗಿ ಬೆಂಗಳೂರಿನಿಂದ ಕಲಬುರಗಿಗೆ ಮೃತದೇಹ ಸಾಗಿಸುವಾಗ ಅವಘಡ ಸಂಭವಿಸಿದೆ.
ಚಾಲಕನನ್ನು ಬಿಟ್ಟು ಇತರರು ಅದೃಷ್ಟವಶಾತ್ ಪಾರಾಗಿದ್ದಾರೆ. ಘಟನೆ ಬಳಿಕ ಬೇರೆ ವಾಹನದಲ್ಲಿ ಕುಟುಂಬಸ್ಥರು ಶವ ಸಾಗಿಸಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಸಾರ್ವಜನಿಕರೊಂದಿಗೆ ಮಂಗಳಮುಖಿಯರ ಕಿರಿಕಿರಿ: ವಶಕ್ಕೆ ಪಡೆದ ಪೊಲೀಸರು
ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಗುಂಡಿಗೆ ಬಿದ್ದ ಕಾರು: 9 ಮಂದಿ ಗಂಭೀರ ಗಾಯ
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಗುಂಡಿಗೆ ಕಾರು ಬಿದಿದ್ದು, ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ನಡೆದಿದೆ. ಮನೆಯ ಸಮೀಪಕ್ಕೆ ಕಾರು ಬಿದಿದ್ದು, ಮನೆಯವರು ಜಸ್ಟ್ ಮಿಸ್ ಆಗಿದ್ದಾರೆ. ಗಂಭೀರ ಗಾಯಳುಗಳನ್ನು ಮಂಗಳೂರಿಗೆ ರವಾನೆ ಮಾಡಲಾಗಿದೆ. ಕೋಲಾರದಿಂದ ಹೊರನಾಡಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಂಚನೆ ಪ್ರಕರಣ: ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ ಇ.ಡಿ.
ಜಲ್ಲಿಕ್ರಷರ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು
ಚಿಕ್ಕಬಳ್ಳಾಪುರ: ತಾಲೂಕಿನ ಪೆರೇಸಂದ್ರ ಬಳಿಯ ಜಲ್ಲಿ ಕ್ರಷರ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ತಿಕ್ (20) ಮೃತ ದುರ್ದೈವಿ. ಸಂತೋಷ್ ಪಾಟೀಲ್ ಎನ್ನುವವರಿಗೆ ಜಯ್ ಕ್ರಷರ್ಸ್ ಸೇರಿದೆ. ಸುರಕ್ಷಿತಾ ಕ್ರಮಗಳನ್ನು ಕೈಗೊಳ್ಳದ ಕಾರಣ ದುರಂತ ಸಂಭವಿಸಿದೆ. ಕ್ರಷರ್ಸ್ ಮಾಲಿಕರ ನಿರ್ಲಕ್ಷ್ಯದಿಂದ ಕಾರ್ಮಿಕ ಮೃತಪಟ್ಟಿದ್ದು, ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:31 pm, Sun, 30 July 23