ಬೆಂಗಳೂರಿಗರೇ ಎಚ್ಚರ! ಸತತ 12 ಗಂಟೆ ಸುತ್ತಾಡಿದ್ರು.. ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ ಚಿಕಿತ್ಸೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ವ್ಯಕ್ತಿಗೆ ಸೋಂಕು ದೃಢಪಟ್ಟ 8 ಗಂಟೆಗಳ ಒಳಗೆ ಅವರಿಗೆ ಚಿಕಿತ್ಸೆ ನೀಡುವುದಾಗಿ ಜೂನ್ 26ರಂದು ಬೆಂಗಳೂರು ಕೊವಿಡ್ ಉಸ್ತುವಾರಿ ಆರ್. ಅಶೋಕ್ ತಿಳಿಸಿದ್ರು. ಆದರೆ ಇಲ್ಲೊಬ್ಬ ಶಂಕಿತ ವ್ಯಕ್ತಿ 12 ಗಂಟೆಗಳ ಕಾಲ ಅನೇಕ ಆಸ್ಪತ್ರೆಗಳನ್ನು ಸುತ್ತಾಡಿದ್ರು ಯಾವ ಆಸ್ಪತ್ರೆ ಕೂಡ ಆತನಿಗೆ ಚಿಕಿತ್ಸೆ ನೀಡಿಲ್ಲ. ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ರೋಗಿ ನರಕದರ್ಶನ ಕಂಡಿದ್ದಾರೆ. ಕಾಯಿಲೆ ಬಂದ್ರು ಟ್ರೀಟ್​ಮೆಂಟ್ ಕೊಡೋಕೆ ಆಸ್ಪತ್ರೆಗಳು ರೆಡಿಯಿಲ್ಲ. […]

Important Highlight‌
ಬೆಂಗಳೂರಿಗರೇ ಎಚ್ಚರ! ಸತತ 12 ಗಂಟೆ ಸುತ್ತಾಡಿದ್ರು.. ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ ಚಿಕಿತ್ಸೆ
ಸಾಂದರ್ಭಿಕ ಚಿತ್ರ
Follow us
Ayesha Banu
|

Updated on: Jun 29, 2020 | 10:05 AM

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ವ್ಯಕ್ತಿಗೆ ಸೋಂಕು ದೃಢಪಟ್ಟ 8 ಗಂಟೆಗಳ ಒಳಗೆ ಅವರಿಗೆ ಚಿಕಿತ್ಸೆ ನೀಡುವುದಾಗಿ ಜೂನ್ 26ರಂದು ಬೆಂಗಳೂರು ಕೊವಿಡ್ ಉಸ್ತುವಾರಿ ಆರ್. ಅಶೋಕ್ ತಿಳಿಸಿದ್ರು. ಆದರೆ ಇಲ್ಲೊಬ್ಬ ಶಂಕಿತ ವ್ಯಕ್ತಿ 12 ಗಂಟೆಗಳ ಕಾಲ ಅನೇಕ ಆಸ್ಪತ್ರೆಗಳನ್ನು ಸುತ್ತಾಡಿದ್ರು ಯಾವ ಆಸ್ಪತ್ರೆ ಕೂಡ ಆತನಿಗೆ ಚಿಕಿತ್ಸೆ ನೀಡಿಲ್ಲ.

ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ರೋಗಿ ನರಕದರ್ಶನ ಕಂಡಿದ್ದಾರೆ. ಕಾಯಿಲೆ ಬಂದ್ರು ಟ್ರೀಟ್​ಮೆಂಟ್ ಕೊಡೋಕೆ ಆಸ್ಪತ್ರೆಗಳು ರೆಡಿಯಿಲ್ಲ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರು ಟ್ರೀಟ್​ಮೆಂಟ್ ಸಿಗಲಿಲ್ಲ. ಇಂತಹ ಮನಕಲಕುವ, ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಂಕದಕಟ್ಟೆಯ ವ್ಯಕ್ತಿಯೊಬ್ಬರಿಗೆ ತೀವ್ರ ಉಸಿರಾಟದ ತೊಂದರೆ ಉಂಟಾಗಿದೆ. ಹೀಗಾಗಿ 45 ವರ್ಷದ ಈ ವ್ಯಕ್ತಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದ್ರೆ ಅವರಿಗೆ ಚಿಕಿತ್ಸೆ ಸಿಕ್ಕಿಲ್ಲ. ನಿನ್ನೆ ನಸುಕಿನ ಜಾವ 3 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಲೆದ್ರೂ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳಾದ ನಾಗರಬಾವಿಯ ಯುನಿಟಿ ಲೈಫ್ ಲೈನ್, ಯಶವಂತಪುರದ ಸ್ಪರ್ಶ್, ಎಂ.ಎಸ್. ರಾಮಯ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲು ನಿರಾಕರಿಸಿದ್ದಾರೆ. ಕನಿಷ್ಠ ತುರ್ತು ಚಿಕಿತ್ಸೆಯನ್ನೂ ನೀಡದೆ ಕಳಿಸಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ, ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ತೆರಳಿದ್ರೂ ಚಿಕಿತ್ಸೆ ನೀಡಿಲ್ಲ.

ವಿಕ್ಟೋರಿಯಾದಲ್ಲಿ ಪಾಸಿಟಿವ್ ರೋಗಿಗಳನ್ನು ಮಾತ್ರ ನೋಡೋದು ಅಂತಾ ವಾಪಸ್ ಕಳಿಸಿದ್ದಾರೆ. ಬಳಿಕ ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಅನಾರೋಗ್ಯ ಪೀಡಿತ ವ್ಯಕ್ತಿ ಟಿವಿ9ಬಳಿ ನೋವು ತೋಡಿಕೊಂಡಿದ್ದಾರೆ. ಕೂಡಲೇ ಕೆ.ಸಿ. ಜನರಲ್ ಆಸ್ಪತ್ರೆ ಆರ್​ಎಂಒ ಮೋಹನ್ ಜೊತೆ ಮಾತನಾಡಿ ಉಸಿರಾಟದ ತೊಂದರೆಯಿಂದ ಬಳಲ್ತಿದ್ದ ವ್ಯಕ್ತಿಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯ್ತು. ಇದಕ್ಕೂ ಮುನ್ನ ಸತತ 12 ಗಂಟೆಗಳ ಕಾಲ ರೋಗಿಯನ್ನು ಸುತ್ತಾಡಿಸಿದ ಖಾಸಗಿ, ಸರ್ಕಾರಿ ಆಸ್ಪತ್ರೆಗಳು ಅಮಾನವೀಯತೆ ಮೆರೆದಿವೆ.

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ