ಶುಭ ದಿನ, ಶುಭ ಘಳಿಗೆ: ದಿ. DK ರವಿ ಪತ್ನಿ ಕುಸುಮಾ ಕಾಂಗ್ರೆಸ್ಗೆ ಸೇರ್ಪಡೆ
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನ ದಿನಕ್ಕೆ ರಂಗೇರುತ್ತಿದೆ. ಇದೀಗ, ಬೈಎಲೆಕ್ಷನ್ನಲ್ಲಿ ಸ್ಪರ್ಧಿಸಲು ಇಚ್ಛಿಸಿರುವ ಮಾಜಿ IAS ಅಧಿಕಾರಿ ದಿವಂಗತ DK ರವಿ ಪತ್ನಿ ಕುಸುಮಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಕುಸುಮಾ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆದರು. ಕುಟುಂಬ ಸಮೇತರಾಗಿ ಕಚೇರಿಗೆ ಬಂದಿದ್ದ ಕುಸುಮಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ರಿಂದ ಪಕ್ಷದ ಸದಸ್ಯತ್ವ ಪತ್ರ ಪಡೆದುಕೊಂಡರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ […]
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನ ದಿನಕ್ಕೆ ರಂಗೇರುತ್ತಿದೆ. ಇದೀಗ, ಬೈಎಲೆಕ್ಷನ್ನಲ್ಲಿ ಸ್ಪರ್ಧಿಸಲು ಇಚ್ಛಿಸಿರುವ ಮಾಜಿ IAS ಅಧಿಕಾರಿ ದಿವಂಗತ DK ರವಿ ಪತ್ನಿ ಕುಸುಮಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಕುಸುಮಾ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆದರು. ಕುಟುಂಬ ಸಮೇತರಾಗಿ ಕಚೇರಿಗೆ ಬಂದಿದ್ದ ಕುಸುಮಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ರಿಂದ ಪಕ್ಷದ ಸದಸ್ಯತ್ವ ಪತ್ರ ಪಡೆದುಕೊಂಡರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಜಕುಮಾರ್ ಸಹ ಉಪಸ್ಥಿತರಿದ್ದರು.
ಬೆಳಗ್ಗೆ 11: 45ರ ಶುಭ ಘಳಿಗೆಗೆ ಕಾದು ಕಾಂಗ್ರೆಸ್ ಸದಸ್ಯತ್ವ ಪಡೆದ ಕುಸುಮಾ ಶುಭ ಘಳಿಗೆಗಾಗಿ ಸುಮಾರು ಒಂದು ಗಂಟೆಯ ಕಾಲ ಕಾದರು ಎಂದು ತಿಳಿದುಬಂದಿದೆ.
ಕೆಪಿಸಿಸಿ ಅಧ್ಯಕ್ಷ @DKShivakumar ಅವರ ನೇತೃತ್ವದಲ್ಲಿ ಕುಸುಮಾ .ಹೆಚ್ ಅವರು ಪಕ್ಷಕ್ಕೆ ಸೇರ್ಪಡೆಯಾದರು.
ವಿಪಕ್ಷ ನಾಯಕ @siddaramaiah, ಕಾರ್ಯಾಧ್ಯಕ್ಷ @SaleemAhmadINC, ಮಾಜಿ ಉಪಮುಖ್ಯಮಂತ್ರಿ @DrParameshwara, ಸಂಸದ @DKSureshINC, ಹನುಮಂತರಾಯಪ್ಪ, ಜಿಲ್ಲಾಧ್ಯಕ್ಷ ರಾಜ್ ಕುಮಾರ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು. pic.twitter.com/DpVRYvtACW
— Karnataka Congress (@INCKarnataka) October 4, 2020
Published On - 1:02 pm, Sun, 4 October 20