ಶುಭ ದಿನ, ಶುಭ ಘಳಿಗೆ: ದಿ. DK ರವಿ ಪತ್ನಿ ಕುಸುಮಾ ಕಾಂಗ್ರೆಸ್​ಗೆ ಸೇರ್ಪಡೆ

|

Updated on: Oct 04, 2020 | 1:52 PM

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನ ದಿನಕ್ಕೆ ರಂಗೇರುತ್ತಿದೆ. ಇದೀಗ, ಬೈಎಲೆಕ್ಷನ್​ನಲ್ಲಿ ಸ್ಪರ್ಧಿಸಲು ಇಚ್ಛಿಸಿರುವ ಮಾಜಿ IAS ಅಧಿಕಾರಿ ದಿವಂಗತ DK ರವಿ ಪತ್ನಿ ಕುಸುಮಾ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಕುಸುಮಾ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆದರು. ಕುಟುಂಬ ಸಮೇತರಾಗಿ ಕಚೇರಿಗೆ ಬಂದಿದ್ದ ಕುಸುಮಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ರಿಂದ ಪಕ್ಷದ ಸದಸ್ಯತ್ವ ಪತ್ರ ಪಡೆದುಕೊಂಡರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ […]

ಶುಭ ದಿನ, ಶುಭ ಘಳಿಗೆ: ದಿ. DK ರವಿ ಪತ್ನಿ ಕುಸುಮಾ ಕಾಂಗ್ರೆಸ್​ಗೆ ಸೇರ್ಪಡೆ
Follow us on

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನ ದಿನಕ್ಕೆ ರಂಗೇರುತ್ತಿದೆ. ಇದೀಗ, ಬೈಎಲೆಕ್ಷನ್​ನಲ್ಲಿ ಸ್ಪರ್ಧಿಸಲು ಇಚ್ಛಿಸಿರುವ ಮಾಜಿ IAS ಅಧಿಕಾರಿ ದಿವಂಗತ DK ರವಿ ಪತ್ನಿ ಕುಸುಮಾ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಕುಸುಮಾ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆದರು. ಕುಟುಂಬ ಸಮೇತರಾಗಿ ಕಚೇರಿಗೆ ಬಂದಿದ್ದ ಕುಸುಮಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ರಿಂದ ಪಕ್ಷದ ಸದಸ್ಯತ್ವ ಪತ್ರ ಪಡೆದುಕೊಂಡರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಜಕುಮಾರ್ ಸಹ ಉಪಸ್ಥಿತರಿದ್ದರು.

ಬೆಳಗ್ಗೆ 11: 45ರ ಶುಭ ಘಳಿಗೆಗೆ ಕಾದು ಕಾಂಗ್ರೆಸ್ ಸದಸ್ಯತ್ವ ಪಡೆದ ಕುಸುಮಾ ಶುಭ ಘಳಿಗೆಗಾಗಿ ಸುಮಾರು ಒಂದು ಗಂಟೆಯ ಕಾಲ ಕಾದರು ಎಂದು ತಿಳಿದುಬಂದಿದೆ.

Published On - 1:02 pm, Sun, 4 October 20