ಕಿಮ್ಸ್ ವೈದ್ಯರ ಆ ಮಹಾ ಎಡವಟ್ಟು ಏನು? ಅಂತ್ಯಕ್ರಿಯೆ ವೇಳೆ ಗ್ರಾಮಸ್ಥರ ಆತಂಕ ಏನು?

ಹುಬ್ಬಳ್ಳಿ: ಕಿಮ್ಸ್ ವೈದ್ಯರಿಂದ ಮತ್ತೊಂದು ಮಹಾ ಎಡವಟ್ಟಾಗಿದೆ. ಕೊರೊನಾ ರಿಪೋರ್ಟ್ ಬರೋ ಮುನ್ನವೇ ಸೋಂಕಿತ ವೃದ್ಧನ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ವೃದ್ಧನ ಅಂತ್ಯಕ್ರಿಯೆಯಲ್ಲಿ ಇಡೀ ಊರಿನ ಜನರು ಭಾಗಿಯಾಗಿದ್ದಾರೆ. ಈಗ ಊರಿಗೆ ಊರೇ ಕಂಗಾಲಾಗಿದೆ. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ 73 ವರ್ಷದ ವೃದ್ಧ ಜೂನ್ 22ರಂದು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ವೃದ್ಧನ ಗಂಟಲು ದ್ರವ ತೆಗೆದುಕೊಂಡು ಕೊರೊನಾ ಪರೀಕ್ಷೆಗೆ ಕಳುಹಿಸಿದ್ದರು. ಆದರೆ ಅನಾರೋಗ್ಯದಿಂದ ಜೂನ್ 24ರಂದು ವೃದ್ಧ ಮೃತಪಟ್ಟಿದ್ದಾರೆ. ಕೂಡಲೇ […]

Important Highlight‌
ಕಿಮ್ಸ್ ವೈದ್ಯರ ಆ ಮಹಾ ಎಡವಟ್ಟು ಏನು? ಅಂತ್ಯಕ್ರಿಯೆ ವೇಳೆ ಗ್ರಾಮಸ್ಥರ ಆತಂಕ ಏನು?
Follow us
Ayesha Banu
| Updated By: ಸಾಧು ಶ್ರೀನಾಥ್​

Updated on:Jun 29, 2020 | 11:13 AM

ಹುಬ್ಬಳ್ಳಿ: ಕಿಮ್ಸ್ ವೈದ್ಯರಿಂದ ಮತ್ತೊಂದು ಮಹಾ ಎಡವಟ್ಟಾಗಿದೆ. ಕೊರೊನಾ ರಿಪೋರ್ಟ್ ಬರೋ ಮುನ್ನವೇ ಸೋಂಕಿತ ವೃದ್ಧನ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ವೃದ್ಧನ ಅಂತ್ಯಕ್ರಿಯೆಯಲ್ಲಿ ಇಡೀ ಊರಿನ ಜನರು ಭಾಗಿಯಾಗಿದ್ದಾರೆ. ಈಗ ಊರಿಗೆ ಊರೇ ಕಂಗಾಲಾಗಿದೆ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ 73 ವರ್ಷದ ವೃದ್ಧ ಜೂನ್ 22ರಂದು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ವೃದ್ಧನ ಗಂಟಲು ದ್ರವ ತೆಗೆದುಕೊಂಡು ಕೊರೊನಾ ಪರೀಕ್ಷೆಗೆ ಕಳುಹಿಸಿದ್ದರು. ಆದರೆ ಅನಾರೋಗ್ಯದಿಂದ ಜೂನ್ 24ರಂದು ವೃದ್ಧ ಮೃತಪಟ್ಟಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ವೃದ್ಧನ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.

ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿರುವ ಬಗ್ಗೆ ಮಾಹಿತಿ ನೀಡಿಲ್ಲ. ಕೊರೊನಾ ಬಗ್ಗೆ ಯೋಚಿಸದೆ ಕುಟುಂಬಸ್ಥರು ಅಂತ್ಯಕ್ರಿಯೆ ಮಾಡಿದ್ದಾರೆ. ಅಂತ್ಯಕ್ರಿಯೆಯಲ್ಲಿ ಊರಿನ ಜನ ಸೇರಿದಂತೆ ಅನೇಕ ಮಂದಿ ಭಾಗಿಯಾಗಿದ್ದರು. ಶನಿವಾರ ಸೋಂಕಿತರ ಪಟ್ಟಿ ಬಿಡುಗಡೆಯಾದಾಗ ವರದಿಯಲ್ಲಿ ಮೃತ ವೃದ್ಧನಿಗೆ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ರೋಗಿ ನಂಬರ್ 11406 ಎಂದು ವೃದ್ಧನನ್ನ ಗುರುತಿಸಲಾಗಿದೆ. ವೃದ್ಧನ ಅಂತ್ಯಕ್ರಿಯೆಯಲ್ಲಿ ಸಾಕಷ್ಟು ಜನರು ಭಾಗಿಯಾಗಿದ್ರು. ಕಿಮ್ಸ್ ವೈದ್ಯರ ಎಡವಟ್ಟಿನಿಂದ ಗ್ರಾಮಸ್ಥರಿಗೆಲ್ಲಾ ಕೊರೊನಾ ಭೀತಿ ಶುರುವಾಗಿದೆ.

Published On - 10:47 am, Mon, 29 June 20

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ