Ugadi 2023: ಯುಗಾದಿ ಹಬ್ಬಕ್ಕೆ ಬೇವು – ಬೆಲ್ಲ ಹಂಚುವುದೇಕೆ? ಇದರ ಆರೋಗ್ಯ ಪ್ರಯೋಜನಗಳೇನು?

ಯುಗಾದಿಯಂದು ನಾವು ತಿನ್ನುವ ಬೇವು - ಬೆಲ್ಲವು ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ. ಹಬ್ಬದ ಸಮಯದಲ್ಲಿ ಬೇವಿನ ಎಲೆಗಳು ಅಥವಾ ಬೇವಿನ ಹೂವಿನ ಮೊಗ್ಗುಗಳನ್ನು ತಿನ್ನುವುದು ಒಂದು ಪ್ರಮುಖ ಸಂಪ್ರದಾಯವಾಗಿದೆ.

Important Highlight‌
Ugadi 2023: ಯುಗಾದಿ ಹಬ್ಬಕ್ಕೆ ಬೇವು - ಬೆಲ್ಲ ಹಂಚುವುದೇಕೆ? ಇದರ ಆರೋಗ್ಯ ಪ್ರಯೋಜನಗಳೇನು?
ಸಾಂದರ್ಭಿಕ ಚಿತ್ರ
Follow us
Ayesha Banu
|

Updated on:Mar 22, 2023 | 7:11 AM

ಹಿಂದೂ ಪುರಾಣಗಳ ಪ್ರಕಾರ, ಯುಗಾದಿ ಹಬ್ಬದ ದಿನ, ಬ್ರಹ್ಮ ದೇವನು ಬ್ರಹ್ಮಾಂಡದ ಸೃಷ್ಟಿಯನ್ನು ಪ್ರಾರಂಭಿಸಿದನು. ಇಂದಿಗೂ ಆಂಧ್ರಪ್ರದೇಶದಂತಹ ರಾಜ್ಯದಲ್ಲಿ ಯುಗಾದಿಯಂದು ಬ್ರಹ್ಮ ದೇವನನ್ನು ಪೂಜಿಸುತ್ತಾರೆ ಮತ್ತು ಈ ದಿನದಂದು ಭಗವಾನ್ ವಿಷ್ಣುವು ಮತ್ಸ್ಯ ಅವತಾರದಲ್ಲಿ ಅವತರಿಸಿದನು. ಆ ಸಮಯವನ್ನು ಯುಗಾದಿ ಹಬ್ಬವೆಂದು ಆಚರಿಸಲಾಗುತ್ತದೆ. ಭಾರತದಲ್ಲಿ ವಸಂತ ಋತು ಉತ್ತುಂಗದಲ್ಲಿರುವಾಗ ಮತ್ತು ರೈತರು ಹೊಸ ಬೆಳೆಯನ್ನು ಪಡೆದುಕೊಳ್ಳುವ ಸಮಯದಲ್ಲಿ ಯುಗಾದಿಯನ್ನು ಆಚರಿಸಲಾಗುವುದು.

”ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ” ಎನ್ನುವ ಕನ್ನಡ ಹಾಡು ಎಲ್ಲರ ಬಾಯಲ್ಲಿ ಯಾವಾಗಲೂ ಸದ್ದು ಮಾಡುತ್ತಲೇ ಇರುತ್ತದೆ. ಈ ಹಾಡು ಎಲ್ಲರ ಮನಸ್ಸನ್ನು ಮುಟ್ಟಲು ಯುಗಾದಿ ಹಬ್ಬವೇ ಕಾರಣ.

ಯುಗಾದಿ ಹಬ್ಬದಂದು ಬೇವು – ಬೆಲ್ಲದ ಮಹತ್ವ

ಯುಗಾದಿ ಹಬ್ಬದಂದು ಬೇವು – ಬೆಲ್ಲವು ನಮ್ಮ ಜೀವನದ ಸುಖ – ದುಃಖ, ನೋವು – ನಲಿವಿನ ಸಮತೋಲನವನ್ನು ಸೂಚಿಸುತ್ತದೆ. ಯುಗಾದಿ ದಿನ ನಾವು ಬೇವು ಬೆಲ್ಲವನ್ನು ಸೇವಿಸುವುದರಿಂದ ನಮ್ಮ ಜೀವನದ ಸುಖ – ದುಃಖವನ್ನು ಸರಿದೂಗಿಸುವ ಸಾಮರ್ಥ್ಯವನ್ನು ಹೊಂದಿರುತ್ತೇವೆ ಎನ್ನುವುದನ್ನು ಇದು ಸೂಚಿಸುತ್ತದೆ. ನೀವೂ ಈ ಬಾರಿ ಯುಗಾದಿಯಂದು ಬೇವು – ಬೆಲ್ಲ ಅಂದರೆ ಸಿಹಿ – ಕಹಿಯನ್ನು ಸವಿದು ಜೀವನದ ಪ್ರತೀ ಕ್ಷಣವನ್ನು ಬೇವು – ಬೆಲ್ಲದಂತೆ ಅನುಭವಿಸಿ.

ಯುಗಾದಿ ಬೇವು – ಬೆಲ್ಲದ ಆರೋಗ್ಯ ಮಹತ್ವ

ಯುಗಾದಿಯಂದು ನಾವು ತಿನ್ನುವ ಬೇವು – ಬೆಲ್ಲವು ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ. ಹಬ್ಬದ ಸಮಯದಲ್ಲಿ ಬೇವಿನ ಎಲೆಗಳು ಅಥವಾ ಬೇವಿನ ಹೂವಿನ ಮೊಗ್ಗುಗಳನ್ನು ತಿನ್ನುವುದು ಒಂದು ಪ್ರಮುಖ ಸಂಪ್ರದಾಯವಾಗಿದೆ. ಯುಗಾದಿ ಹಬ್ಬವನ್ನು ಆಚರಿಸುವ ಜನರು ಈ ಆಚರಣೆಯನ್ನು ತಪ್ಪದೇ ಮಾಡುತ್ತಾರೆ. ಈ ದಿನಗಳಲ್ಲಿ ಬೇವು ತಿನ್ನುವುದು ವ್ಯಕ್ತಿಯ ಯೋಗಕ್ಷೇಮಕ್ಕೆ ಮುಖ್ಯವಾಗಿದೆ ಎನ್ನುವ ನಂಬಿಕೆಯಿದೆ. ಬೇವು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ವ್ಯಕ್ತಿಯ ದೇಹವನ್ನು ಬಲಪಡಿಸುತ್ತದೆ ಎನ್ನುವ ನಂಬಿಕೆಯಿದೆ. ಮತ್ತು ಹಬ್ಬದ ದಿನ ನಾವು ತಿನ್ನುವ ವಿಶೇಷ ಖಾದ್ಯಗಳು, ಬಗೆ ಬಗೆಯ ಆಹಾರಗಳು ನಮ್ಮ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುವುದು. ಈ ಸಮಯದಲ್ಲಿ ನಾವು ಬೆಲ್ಲವನ್ನು ಸೇವಿಸುವುದರಿಂದ ಚಯಾಪಚಯ ಕ್ರಿಯೆಯು ಸಮತೋಲನವಾಗುತ್ತದೆ ಮತ್ತು ದೇಹದ ಕೆಟ್ಟ ಕೊಬ್ಬನ್ನು ಕೂಡ ಕರಗಿಸುತ್ತದೆ.

ಇದನ್ನೂ ಓದಿ: Ugadi 2023: ಯುಗಾದಿ ಹಬ್ಬದ ಪೌರಾಣಿಕ ಹಿನ್ನೆಲೆ ಏನು? ಇದನ್ನು ಏಕೆ ಆಚರಿಸುತ್ತಾರೆ?

ಮನುಷ್ಯನು ಆಗಾಗ ಅನೇಕ ತೊಂದರೆಗಳು ಮತ್ತು ದುರಾದೃಷ್ಟಗಳಿಗೆ ಒಳಗಾಗುತ್ತಾನೆ. ಯುಗಾದಿಯಂದು ಬೇವಿನ ಮರದ ಕಹಿ ಹೂವುಗಳನ್ನು ನೆನಪಿಸಿಕೊಳ್ಳಬೇಕು. ಅಂದರೆ ವರ್ಷದ ಮೊದಲ ದಿನದಂದು ನಾವು ಜೀವನದ ಕಹಿಯನ್ನು ಸ್ವೀಕರಿಸಬೇಕು ಎಂಬುದನ್ನು ಸೂಚಿಸುತ್ತದೆ. ವರ್ಷದ ಆರಂಭದಲ್ಲಿ ಕೇವಲ ಸಿಹಿಯಿದ್ದರೆ ಮುಂದೆ ಕಹಿಯನ್ನು ಎದುರಿಸಬೇಕಾಗಬಹುದು. ಕಹಿಯ ಬಗ್ಗೆ ನಮಗೆ ಯಾವುದೇ ಆಕ್ಷೇಪಣೆ ಇರಬಾರದು ಆದರೆ ಅದನ್ನು ಪ್ರಕೃತಿ ಮಾತೆಯ ಅಥವಾ ಧರ್ಮದ ಔಷಧಿ ಎಂದು ಒಪ್ಪಿಕೊಳ್ಳಬೇಕು. ನಾವು ಹಾಗೆ ಮಾಡುವುದರಿಂದ ನಮ್ಮ ಜೀವನದಲ್ಲಿ ಎಷ್ಟೇ ತೊಂದರೆಗಳು, ಕಷ್ಟಗಳು ಇದ್ದರೂ ನಾವು ಅದನ್ನು ಗಾಢವಾಗಿ ತೆಗೆದುಕೊಳ್ಳುವುದಿಲ್ಲ. ಸಮಸ್ಯೆಗಳನ್ನು ಎದುರಿಸುವ ಶಕ್ತಿ ಸೃಷ್ಟಿಯಾಗುತ್ತದೆ.

ಯುಗಾದಿ ದಿನ ಬೇವು – ಬೆಲ್ಲವನ್ನು ಹೇಗೆ ಸೇವಿಸಬೇಕು?

  • ಯುಗಾದಿ ದಿನ ಮುಂಜಾನೆ ಎದ್ದಾಕ್ಷಣ ದೇವರನ್ನು ಮನಸ್ಸಿನಲ್ಲಿ ಸ್ಮರಿಸಿ.
  • ನಂತರ ಎಣ್ಣೆಯನ್ನು ಮೈಗೆ ಹಚ್ಚಿ ಸ್ನಾನ ಮಾಡಿ ಹೊಸ ಬಟ್ಟೆಯನ್ನು ಧರಿಸಬೇಕು.
  • ಬಳಿಕ ನಿಮ್ಮ ಮನೆಯ ದೇವರ ಕೋಣೆಯಲ್ಲೇ ಇರುವ ದೇವರನ್ನು ಪೂಜಿಸಿ, ಅಥವಾ ಹತ್ತಿರದ ದೇವಸ್ಥಾನಕ್ಕೆ ಭೇಟಿ ನೀಡಬಹುದು.
  • ಪೂಜೆಯ ನಂತರ ಬೇವು ಮತ್ತು ಬೆಲ್ಲವನ್ನು ಜೊತೆಯಾಗಿ ಸವಿಯಬೇಕು.
  • ಈ ದಿನ ನೀವು ಗುರು – ಹಿರಿಯರ ಆಶೀರ್ವಾದವನ್ನು ಕೂಡ ತೆಗೆದುಕೊಳ್ಳಬಹುದುಲೇಖನ: ವೇ!!ಶ್ರೀ!!ಕುಮಾರಸ್ವಾಮಿ, ಶ್ರೀ ಜ್ಯೋತಿಷ್ಯ ಸಲಹಾ ಕೇಂದ್ರ

    ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:11 am, Wed, 22 March 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು