ನವದೆಹಲಿ, ಆಗಸ್ಟ್ 20: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (Congress Working Committee) ರಚಿಸಿ 39 ಸದಸ್ಯರುಳ್ಳ ಪಟ್ಟಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಬಿಡುಗಡೆ ಮಾಡಿದ್ದಾರೆ. ಸಮಿತಿಯಲ್ಲಿ ಕರ್ನಾಟಕದಿಂದ ಖರ್ಗೆ ಅಲ್ಲದೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ಹಾಗೂ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರಿಗೆ ಸ್ಥಾನ ನೀಡಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಸಮಿತಿಯಲ್ಲಿದ್ದಾರೆ.
ಇದನ್ನೂ ಓದಿ: ಬೈಕ್ ಏರಿ ಪಾಂಗಾಂಗ್ ಸರೋವರಕ್ಕೆ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏನಂದರು ಗೊತ್ತಾ!?
ಇವರಲ್ಲದೆ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಸಚಿನ್ ಪೈಲೆಟ್, ದಿಗ್ವಿಜಯ್ ಸಿಂಗ್, ಶಶಿ ತರೂರ್, ಆನಂದ ಶರ್ಮಾ, ಜೈರಾಮ್ ರಮೇಶ್, ಅಧೀರ್ ರಂಜನ್ ಚೌಧರಿ, ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಒಟ್ಟು 39 ನಾಯಕರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
ಇನ್ನು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಖಾಯಂ ಆಹ್ವಾನಿತರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಆಯ್ಕೆ ನೀಡಲಾಗಿದೆ.
ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ