Chandrayaan-3: ಚಂದ್ರಯಾನ-3 ಯಶಸ್ವಿಗಾಗಿ ಉಪವಾಸ ಮಾಡುತ್ತಿರುವ ಪಾಕ್ ಮಹಿಳೆ ಸೀಮಾ ಹೈದರ್

ಅಕ್ರಮವಾಗಿ ಭಾರತ ಪ್ರವೇಶಿಸಿದ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಚಂದ್ರಯಾನ-3 ಯಶಸ್ಸಿಗೆ ಉಪವಾಸ ಮಾಡುವ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಇದೀಗ ಈ ವಿಡಿಯೊ ಎಲ್ಲರ ಗಮನ ಸೆಳೆದಿದೆ.

Chandrayaan-3: ಚಂದ್ರಯಾನ-3 ಯಶಸ್ವಿಗಾಗಿ ಉಪವಾಸ ಮಾಡುತ್ತಿರುವ ಪಾಕ್ ಮಹಿಳೆ ಸೀಮಾ ಹೈದರ್
ವಿಡಿಯೋ ವೈರಲ್​
Follow us
|

Updated on: Aug 23, 2023 | 4:58 PM

ದೆಹಲಿ, ಆ.23: ದೇಶವೇ ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 (Chandrayaan-3) ಇಂದು (ಆ.23) ಸಂಜೆ 6:04ಕ್ಕೆ ಚಂದ್ರನ ಮೇಲೆ ಇಳಿಯಲಿದೆ. ಇಸ್ರೋ ವಿಜ್ಞಾನಿಗಳ ಅದೆಷ್ಟೋ ಸಮಯಗಳ ಪ್ರಯತ್ನ ಇಂದು ಫಲಿಸಲಿದೆ. ಅದಕ್ಕಾಗಿ ದೇಶದ್ಯಾಂತ ಪೂಜೆ, ಪ್ರಾರ್ಥನೆಗಳು ನಡೆಯುತ್ತಿದೆ. ಧರ್ಮ ಭೇದಗಳಿಲ್ಲದೆ, ಎಲ್ಲರೂ ಕೂಡ ಚಂದ್ರಯಾನ-3 ಯಶಸ್ಸಿಗೆ ಬೇಡಿಕೊಳ್ಳುತ್ತಿದ್ದಾರೆ. ಇದರ ನಡುವೆ ಅಕ್ರಮವಾಗಿ ಭಾರತ ಪ್ರವೇಶಿಸಿದ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ (Seema Haider) ಚಂದ್ರಯಾನ-3 ಯಶಸ್ಸಿಗೆ ಉಪವಾಸ ಮಾಡುವ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಇದೀಗ ಈ ವಿಡಿಯೊ ಎಲ್ಲರ ಗಮನ ಸೆಳೆದಿದೆ.

ಸಚಿನ್ ಮೀನಾ ಅವರೊಂದಿಗೆ ನೋಯ್ಡಾದಲ್ಲಿ ವಾಸಿಸುತ್ತಿರುವ ಸೀಮಾ ಹೈದರ್ ಅವರು ಚಂದ್ರಯಾನ -3ರ ಯಶಸ್ವಿ ಲ್ಯಾಂಡಿಂಗ್‌ಗಾಗಿ ಉಪವಾಸವನ್ನು ಆಚರಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಚಂದ್ರಯಾನ-3 ಚಂದ್ರನ ಮೇಲ್ಮೈಯಲ್ಲಿ ವಿಜಯ ಸಾಧಿಸುವವರೆಗೆ ತಾನು ಉಪವಾಸವನ್ನು ಮುಂದುವರೆಸುತ್ತೇನೆ ಎಂದು ಅವರು ಹೇಳಿದ್ದಾರೆ. ಇದೀಗ ಈ ವೀಡಿಯೊ ವೈರಲ್ ಆಗಿದ್ದು, ಎಲ್ಲ ಕಡೆದ ಈ ಸುದ್ದಿ ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ಮೊದಲ ಬಾರಿಗೆ ಭಾರತದ ತ್ರಿವರ್ಣ ಧ್ವಜ ಹಾರಿಸಿ, ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿದ ಸೀಮಾ ಹೈದರ್

ಈ ವೀಡಿಯೊದಲ್ಲಿ, ಸೀಮಾ ಹೈದರ್ ಹಿಂದೂ ದೇವತೆಗಳ ವಿಗ್ರಹಗಳ ಮುಂದೆ ಗೌರವದಿಂದ ಪ್ರಾರ್ಥನೆ ಮಾಡುತ್ತಿರುವುದನ್ನು ಕಾಣಬಹುದು. ”ನನ್ನ ಆರೋಗ್ಯ ಸ್ಥಿತಿ ಸರಿ ಇಲ್ಲದಿದ್ದರು. ಚಂದ್ರಯಾನ -3ರ ಯಶಸ್ವಿ ಲ್ಯಾಂಡಿಂಗ್ ಆಗುವಂತೆ ನಾನು ಉಪವಾಸವನ್ನು ಆಚರಿಸುತ್ತಿದ್ದೇನೆ. ಈ ಸಾಧನೆಯು ಭಾರತದ ಭವಿಷ್ಯಕ್ಕೆ ದೊಡ್ಡ ಭರವಸೆ. ನನ್ನ ಈ ಉಪವಾಸ ಚಂದ್ರಯಾನ 3 ಯಶಸ್ವಿ ಆಗುವವರೆಗೆ ನಾನು ಮುಂದುವರಿಸುವೇ ಎಂದು ಹೇಳಿದ್ದಾರೆ. ಇನ್ನು ನಾನು ನಂಬಿರುವ ರಾಧೆ ಕೃಷ್ಣ, ಶ್ರೀರಾಮ ಖಂಡಿತ ನನ್ನ ಉಪವಾಸಕ್ಕೆ ಫಲ ನೀಡುತ್ತಾರೆ ಎಂದು ಹೇಳಿದ್ದಾರೆ.

ಚಂದ್ರಯಾನ-3ಗೆ ಯಶಸ್ಸಿಗೆ ಉಪವಾಸ ಮಾಡುತ್ತಿರುವ ಸೀಮಾ ಹೈದರ್ ವಿಡಿಯೋ

ನಮ್ಮ ಪ್ರಧಾನಿಯವರು (ನರೇಂದ್ರ ಮೋದಿ) ಈ ಯೋಜನೆಗಾಗಿ ಶ್ರಮಿಸಿದ್ದಾರೆ. ಚಂದ್ರಯಾನದ ಯಶಸ್ವಿ ಲ್ಯಾಂಡಿಂಗ್​​ನಿಂದ ಜಾಗತಿಕವಾಗಿ ಭಾರತದ ಮಹತ್ವ ಸಾಧನೆಗೆ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಿಂದ ಬಂದಿರುವ ಸೀಮಾ ಹೈದರ್, 2019-20ರಲ್ಲಿ ಆನ್‌ಲೈನ್ ಗೇಮ್ PUBGಯಿಂದ 22 ವರ್ಷದ ಸಚಿನ್ ಮೀನಾ ಅವರೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದರು. ನಂತರ ಇಬ್ಬರು ಪರಸ್ಪರ ಪ್ರೀತಿಸಿ, Whatsapp ಮತ್ತು Instagram ನಲ್ಲಿ ಸಂಪರ್ಕ ಸಾಧಿಸಿಕೊಂಡು. ಮೇ 13 ರಂದು ಪಾಕಿಸ್ತಾನದ ಮೂಲಕ ಬಸ್‌ನಲ್ಲಿ ತನ್ನ ನಾಲ್ಕು ಮಕ್ಕಳೊಂದಿಗೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆಕೆಯನ್ನು ಬಂಧಿಸಲಾಯಿತು. ಆದರೆ, ಜುಲೈ 7ರಂದು ಸ್ಥಳೀಯ ನ್ಯಾಯಾಲಯ ಆಕೆಗೆ ಜಾಮೀನು ನೀಡಿತ್ತು. ದಂಪತಿಗಳು ಈಗ ದೆಹಲಿ ಸಮೀಪದ ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ, ಅಲ್ಲಿ ಅವರು ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ