Crime News: ಜೈಲು ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ; ಪೊಲೀಸರು ಕಂಗಾಲು!

| Updated By: Sushma Chakre

Updated on: Jul 12, 2021 | 5:00 PM

ಅರುಣಾಚಲಪ್ರದೇಶದ ಜೈಲಿನಲ್ಲಿದ್ದ 7 ಮಂದಿ ವಿಚಾರಣಾಧೀನ ಕೈದಿಗಳು ಭಾನುವಾರ ರಾತ್ರಿ ಸೆಕ್ಯುರಿಟಿ ಗಾರ್ಡ್​ಗಳ ಮುಖಕ್ಕೆ ಖಾರದ ಪುಡಿ ಎರಚಿ ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ.

Crime News: ಜೈಲು ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ; ಪೊಲೀಸರು ಕಂಗಾಲು!
ಪ್ರಾತಿನಿಧಿಕ ಚಿತ್ರ
Follow us on

ನಾನಾ ಅಪರಾಧಗಳನ್ನು ಮಾಡಿ ಜೈಲು ಸೇರಿದ್ದ ಅರುಣಾಚಲ ಪ್ರದೇಶದ 7 ಕೈದಿಗಳು ಕಾರಾಗ್ರಹದಲ್ಲೂ ತಮ್ಮ ಅಸಲಿ ಬುದ್ಧಿಯನ್ನು ತೋರಿಸಿದ್ದಾರೆ. ಜೈಲಿಗೆ ಕಾವಲಿದ್ದ ಸೆಕ್ಯುರಿಟಿ ಗಾರ್ಡ್​ಗಳ ಮುಖಕ್ಕೆ ಖಾರದ ಪುಡಿ, ಮೆಣಸಿನ ಕಾಳಿನ ಪುಡಿಯನ್ನು ಎರಚಿ ಜೈಲಿನಿಂದ ಪರಾರಿಯಾಗಿದ್ದಾರೆ. ಈ ಮೂಲಕ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಆ 7 ಕೈದಿಗಳಿಗಾಗಿ ಪೊಲೀಸರು ಮತ್ತೆ ಹುಡುಕಾಟ ನಡೆಸಿದ್ದಾರೆ.

ಅರುಣಾಚಲಪ್ರದೇಶದ ಪೂರ್ವ ಸಿಯಾಂಗ್ ಜಿಲ್ಲೆಯಲ್ಲಿರುವ ಪಾಸಿಘಾಟ್​ ಜೈಲಿನಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಈ ಜೈಲಿನಲ್ಲಿದ್ದ 7 ಮಂದಿ ವಿಚಾರಣಾಧೀನ ಕೈದಿಗಳು ಭಾನುವಾರ ರಾತ್ರಿ ಸೆಕ್ಯುರಿಟಿ ಗಾರ್ಡ್​ಗಳ ಮುಖಕ್ಕೆ ಖಾರದ ಪುಡಿ ಎರಚಿ ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ. ಆ ಜೈಲಿನಲ್ಲಿ 94 ಕೈದಿಗಳಿದ್ದರು.

ಭಾನುವಾರ ರಾತ್ರಿ 7.30ರ ವೇಳೆಗೆ 7 ಕೈದಿಗಳು ಜೈಲಿನ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅವರ ಕಣ್ಣಿಗೆ ಖಾರದ ಪುಡಿ ಹಾಕಿದ್ದಾರೆ. ಈ ದಾಳಿಯಲ್ಲಿ ಐದಕ್ಕೂ ಹೆಚ್ಚು ಸೆಕ್ಯುರಿಟಿ ಗಾರ್ಡ್​ಗಳಿಗೆ ಗಾಯಗಳಾಗಿವೆ. ಈ ದಾಳಿ ನಡೆದ ವೇಳೆ ಕೇವಲ 10 ಮಂದಿ ಸೆಕ್ಯುರಿಟಿ ಗಾರ್ಡ್​ಗಳು ಕಾರ್ಯ ನಿರ್ವಹಿಸುತ್ತಿದ್ದರು.

ಪರಾರಿಯಾಗಿರುವ ಕೈದಿಗಳ ಮಾಹಿತಿಯನ್ನು ಎಲ್ಲ ಪೊಲೀಸ್ ಠಾಣೆಗಳಿಗೂ ಕಳುಹಿಸಲಾಗಿದ್ದು, ಅವರನ್ನು ಹುಡುಕಲು ಪೊಲೀಸರು ಮುಂದಾಗಿದ್ದಾರೆ. ಅಭಿಜಿತ್ ಗೊಗೋಯ್, ತಾರೋ ಹಮಾಮ್, ಕಲಾಂ ಅಪಂಗ್, ತಾಲುಮ್ ಪನೀಯಿಂಗ್, ಸುಭಾಷ್ ಮಂಡಲ್, ರಾಜಾ ತಾಯೆಂಗ್ ಮತ್ತು ದನಿ ಗಮ್ಲಿನ್ ಜೈಲಿನಿಂದ ಪರಾರಿಯಾಗಿರುವ ಕೈದಿಗಳಾಗಿದ್ದಾರೆ.

ಇದನ್ನೂ ಓದಿ: Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!

ಇದನ್ನೂ ಓದಿ: Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?