ಒಡಿಶಾ ಮಹಿಳಾ ಹೋಮ್​ ಗಾರ್ಡ್​​ಗೆ ಡಿಐಜಿ ಚಿತ್ರಹಿಂಸೆ ನೀಡಿದ್ದ ಪ್ರಕರಣ; ತನಿಖೆಗೆ ಮುಂದಾದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

Odisha woman home guard torture case; ಒಡಿಶಾ ಮಾನವ ಹಕ್ಕುಗಳ ಆಯೋಗವು ಈಗಾಗಲೇ ಈ ಪ್ರಕರಣದಲ್ಲಿ ಪೊಲೀಸರಿಂದ ವರದಿಯನ್ನು ಕೇಳಿದೆ. ಮಹಿಳಾ ಹೋಮ್​ ಗಾರ್ಡ್ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನದಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದರು. ಸದ್ಯ ಅವರಿಗೆ ಕಟಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Important Highlight‌
ಒಡಿಶಾ ಮಹಿಳಾ ಹೋಮ್​ ಗಾರ್ಡ್​​ಗೆ ಡಿಐಜಿ ಚಿತ್ರಹಿಂಸೆ ನೀಡಿದ್ದ ಪ್ರಕರಣ; ತನಿಖೆಗೆ ಮುಂದಾದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
ಚಿತ್ರಹಿಂಸೆ ನೀಡಿದ ಪ್ರಕರಣದ ತನಿಖೆ ನಡೆಸುವಂತೆ ಬಿಜೆಪಿಯ ನಿಯೋಗ ಎನ್​ಎಚ್​ಆರ್​ಸಿಗೆ ಮನಸಿ ಸಲ್ಲಿಸಿದೆ.
Follow us
ಗಣಪತಿ ಶರ್ಮ
| Updated By: Vimal Kumar

Updated on:Sep 19, 2023 | 1:52 PM

ಭುವನೇಶ್ವರ, ಆಗಸ್ಟ್ 24: ಒಡಿಶಾದಲ್ಲಿ (Odisha) ಮಹಿಳಾ ಹೋಮ್​ ಗಾರ್ಡ್​​ಗೆ (Woman Home Guard) ‘ಚಿತ್ರಹಿಂಸೆ’ ನೀಡಿದ ಘಟನೆ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ತನಿಖೆ ನಡೆಸಲಿದೆ. ಮಹಿಳಾ ಹೋಮ್​ ಗಾರ್ಡ್​​ಗೆ ಡಿಐಜಿ ಮತ್ತು ಅವರ ಪತ್ನಿ ಚಿತ್ರಹಿಂಸೆ ನೀಡಿದ ಪ್ರಕರಣದ ತನಿಖೆ ನಡೆಸುವಂತೆ ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷರಾದ ಲೇಖಾಶ್ರೀ ಸಮಂತಸಿಂಗರ್ ನೇತೃತ್ವದ ನಿಯೋಗ ದೆಹಲಿಯ ಎನ್‌ಎಚ್‌ಆರ್‌ಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿತ್ತು. ಬಿಜೆಪಿ ನಾಯಕರು ಲಿಖಿತ ದೂರನ್ನೂ ಸಲ್ಲಿಸಿದ್ದರು. ಆಯೋಗವು ತನಿಖೆಯ ಭರವಸೆ ನೀಡಿದೆ ಎಂದು ಸಮಂತಸಿಂಗರ್ ಹೇಳಿದ್ದಾರೆ.

ಏತನ್ಮಧ್ಯೆ, ಒಡಿಶಾ ರಾಜ್ಯ ಮಹಿಳಾ ಆಯೋಗವು ಈಗಾಗಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದೆ. ಅಲ್ಲದೆ, ಇಡೀ ಪ್ರಕರಣಕ್ಕೆ ಸಂಬಂಧಿಸಿ ಅಪರಾಧ ವಿಭಾಗದ ಪೊಲೀಸರಿಂದ ಈಗಾಗಲೇ ವರದಿ ಕೇಳಿದೆ. 15 ದಿನಗಳೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಮಹಿಳಾ ಆಯೋಗ ಅಪರಾಧ ವಿಭಾಗದ ಎಡಿಜಿಗೆ ಸೂಚಿಸಿದೆ. ‘ಮಹಿಳಾ ಹೋಮ್​ ಗಾರ್ಡ್ ಚೇತರಿಸಿಕೊಂಡ ನಂತರ ಆಕೆಯನ್ನು ಭೇಟಿಯಾಗಿ ವಿವರ ಪಡೆಯುವುದಾಗಿ ಆಯೋಗದ ಅಧ್ಯಕ್ಷೆ ಮಿನಾತಿ ಬೆಹೆರಾ ತಿಳಿಸಿದ್ದಾರೆ.

ಒಡಿಶಾ ಮಾನವ ಹಕ್ಕುಗಳ ಆಯೋಗವು ಈಗಾಗಲೇ ಈ ಪ್ರಕರಣದಲ್ಲಿ ಪೊಲೀಸರಿಂದ ವರದಿಯನ್ನು ಕೇಳಿದೆ. ಮಹಿಳಾ ಹೋಮ್​ ಗಾರ್ಡ್ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನದಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದರು. ಸದ್ಯ ಅವರಿಗೆ ಕಟಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯು ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಉತ್ತರ ಕೇಂದ್ರ ವಿಭಾಗದ ಪ್ರಭಾರ ಡಿಐಜಿ ಬ್ರಿಜೇಶ್ ರೈ ಅವರನ್ನು ರಾಜ್ಯ ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ಸಂತ್ರಸ್ತೆಯ ದೂರಿನಲ್ಲೇನಿದೆ?

ಡಿಐಜಿ ಪತ್ನಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ ಎಂದು ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಡಿಐಜಿ ಪತ್ನಿಯ ಬಟ್ಟೆ ಒಗೆಯುವಂತೆ ಕೇಳಿದ್ದು, ಒಪ್ಪದಿದ್ದಾಗ ಥಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಇಷ್ಟೇ ಅಲ್ಲದೆ, ಸೇವೆಯಿಂದ ವಜಾಗೊಳಿಸುವ ಬೆದರಿಕೆಯನ್ನೂ ಒಡ್ಡಲಾಗಿತ್ತು ಎನ್ನಲಾಗಿದೆ. ಆಗಸ್ಟ್ 4 ರಂದು ಕೃತ್ಯ ಎಸಗಲಾಗಿತ್ತು.

ಇದನ್ನೂ ಓದಿ: ಬಡತನದಲ್ಲಿ ಬೆಳೆದ ಬಾಲಕ ಈಗ ಚಂದ್ರಯಾನ-3 ತಂಡದಲ್ಲಿರುವ ಯುವ ವಿಜ್ಞಾನಿ; ಜಾರ್ಖಂಡ್​​ನ ಯುವಕನ ಸಾಧನೆಗೆ ಚಪ್ಪಾಳೆ

ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ನಾನು ಹತ್ತಿರದ ರೈಲು ಹಳಿಗಳಿಗೆ ಹೋಗಿ ಅಲ್ಲಿ ಆತ್ಮಹತ್ಯೆಗೆ ಯತ್ನಿಸಿದೆ. ಹಳಿಗಳ ಮೇಲೆ ನಿಂತಿದ್ದಾಗ ರೈಲು ಬರುತ್ತಿದ್ದುದರಿಂದ ಉಂಟಾದ ಕಂಪನದಿಂದಾಗಿ ನಾನು ಹೊರಗೆ ಬಿದ್ದೆ. ಆದರೆ, ಕಾಲುಗಳು ರೈಲಿನಡಿ ಸಿಲುಕಿ ನಜ್ಜುಗುಜ್ಜಾಗಿದ್ದವು. ಪ್ರಜ್ಞೆ ಮರಳಿ ಬರುವಾಗ, ನಾನು ಕಟಕ್‌ನ ಖಾಸಗಿ ಆಸ್ಪತ್ರೆಯಲ್ಲಿದ್ದೆ ಎಂದು ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Thu, 24 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು