ಲೋಕಸಭೆಯಲ್ಲಿ ಹೆಚ್ಚು ಸೀಟ್​ ಗೆಲ್ಲದಿದ್ರೆ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ: ಮಾಜಿ ಸಿಎಂ ಬೊಮ್ಮಾಯಿ

ಮುಂದಿನ ಆರೇಳು ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್​ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಬಲ ನಾಯಕರನ್ನು ಕಣಕ್ಕಿಳಿಸಲು ಮುಂದಾಗಿದೆ. ಹೀಗಾಗಿ ಪ್ರತಿಪಕ್ಷಗಳಲ್ಲಿನ ಕೆಲ ನಾಯಕರಿಗೆ ಗಾಳ ಹಾಕಿದೆ. ಈ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ಆಪರೇಷನ್​ ಹಸ್ತ ಯಶಸ್ವಿ ಆಗುವುದಿಲ್ಲ ಎಂದಿದ್ದಾರೆ.

ಲೋಕಸಭೆಯಲ್ಲಿ ಹೆಚ್ಚು ಸೀಟ್​ ಗೆಲ್ಲದಿದ್ರೆ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ: ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Follow us
| Updated By: Vimal Kumar

Updated on:Oct 31, 2023 | 11:38 AM

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ (Loksabha Election) ಕಾಂಗ್ರೆಸ್​​ಗೆ (Congress) ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲದಿದ್ದರೇ ಕಾಂಗ್ರೆಸ್ ಸರ್ಕಾರದ (Congress Government) ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭವಿಷ್ಯ ನುಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಮಳೆ ಬಾರದೆ, ಬೆಳೆಗಳಿಗೆ ನೀರಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕು. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ಬೆಳೆ ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮಕೈಗೊಂಡಿಲ್ಲ. ಕುಡಿಯುವ ನೀರು, ಬೆಳೆ ಸಮೀಕ್ಷೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಕ್ಷಾಮ ಉಂಟಾಗುವ ಸಾಧ್ಯತೆ ಇದೆ. ನೀರಿನ ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ಕಡಿಮೆ ಆಗಿದೆ. ಇದರಿಂದ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗಿ ರೈತರಿಗೆ ಸಮಸ್ಯೆಯಾಗಲಿದೆ. ಯಾವುದೇ ಕ್ರಮಕ್ಕೆ ಮುಂದಾಗದೆ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ರಾಜ್ಯದಲ್ಲಿ ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ. ಇದರ‌ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು. ಆಗಸ್ಟ್​​ನಲ್ಲೂ ಮಳೆ ಬಾರದೆ ರೈತರು ಸಂಕಷ್ಟದಲ್ಲಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಕಹಳೆ, ಜೋರಾಯ್ತು ಟಿಕೆಟ್​ಗೆ ಲಾಬಿ: ಯಾರು-ಯಾವ ಕ್ಷೇತ್ರಕ್ಕೆ? ಇಲ್ಲಿದೆ ವಿವರ

ವರ್ಗಾವಣೆ ದಂದೆ ಸೇರಿದಂತೆ ಹಲವು ವಿಚಾರದಲ್ಲಿ ತಮ್ಮ ಸ್ವಹಿತಾಸಕ್ತಿಗಾಗಿ ಕಾಂಗ್ರೆಸ್​ನವರು ಬಡಿದಾಡುತ್ತಿದ್ದಾರೆ. ಇದು ರಾಜ್ಯದ ದುಸ್ಥಿತಿ ಹಾಗೂ ವಿಪರ್ಯಾಸ. ಸರ್ಕಾರದ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಧಮನ ಮಾಡುವ ಕೆಲಸ ನಡೆದಿದೆ. ಪತ್ರಕರ್ತರು ಶಾಸಕರ ಪತ್ರ ಹೊರಗೆ ತಂದರೇ ಪತ್ರಕರ್ತರಿಗೆ ನೋಟಿಸ್ ಕೊಡುತ್ತಾರೆ. ಪತ್ರಿಕಾ ಸ್ವಾತಂತ್ರ್ಯ ಧಮನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:30 am, Fri, 25 August 23

ತಾಜಾ ಸುದ್ದಿ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ