ಸುಮಾರು ಎರಡು ಶತಮಾನಗಳ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯು 1947 ಆಗಸ್ಟ್ 15 ರಂದು ಕೊನೆಗೊಂಡಿತು. ಅಲ್ಲದೆ, ಬ್ರಿಟಿಷರು ಭಾರತ ಬಿಟ್ಟು ಹೋಗುವಂತೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಾರತೀಯರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು (Independence Day) ಆಚರಿಸಲಾಗುತ್ತದೆ. ಅದರಂತೆ ಇಂದು ದೇಶಾದ್ಯಂತ ದೇಶಪ್ರೇಮಿಗಳು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿ ಸಂಭ್ರಮಿಸುತ್ತಿದ್ದಾರೆ.
2023 ರ ಸ್ವಾತಂತ್ರ್ಯ ದಿನಾಚರಣೆಯ ಥೀಮ್ “ರಾಷ್ಟ್ರ ಮೊದಲು, ಯಾವಾಗಲೂ ಮೊದಲು” (Nation First, Always First). ಈ ದಿನದ ದೇಶದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ಈ ವಿಷಯವನ್ನು ಆಧರಿಸಿ ನಡೆಯಲಿದೆ.
ಜುಲೈ 4, 1947 ರಂದು, ಭಾರತೀಯ ಸ್ವಾತಂತ್ರ್ಯ ಮಸೂದೆಯನ್ನು ಬ್ರಿಟಿಷ್ ಹೌಸ್ ಆಫ್ ಕೊಲೊನಿಯಲ್ನಲ್ಲಿ ಪರಿಚಯಿಸಲಾಯಿತು ಮತ್ತು ಅದೇ ತಿಂಗಳ 18 ರಂದು ಕಾಯ್ದೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಯು ಭಾರತೀಯ ಸ್ವಾತಂತ್ರ್ಯ ಚಳವಳಿಗೆ ಕಾರಣವಾಯಿತು. ಅದರಂತೆ ಆಗಸ್ಟ್ 15 ರಂದು 200 ವರ್ಷಗಳ ಬ್ರಿಟಿಷ್ ಆಡಳಿತವು ಕೊನೆಗೊಂಡಿತು.
ಇದನ್ನೂ ಓದಿ: Independence Day: ಕರ್ನಾಟಕದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ, 18 ಪೊಲೀಸರಿಗೆ ವಿಶಿಷ್ಟ ಸೇವಾ ಪದಕ ಘೋಷಣೆ
ಮಹಾತ್ಮಾ ಗಾಂಧಿ, ಭಗತ್ ಸಿಂಗ್, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್ ಮುಂತಾದ ಅನೇಕ ಸ್ವಾತಂತ್ರ್ಯ ಹೋರಾಟಗಾರರು ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಹಲವಾರು ವೀರ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದರು.
ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ದಿನವು ಬ್ರಿಟಿಷ್ ಪ್ರಾಬಲ್ಯದಿಂದ ನಮ್ಮ ಸ್ವಾತಂತ್ರ್ಯವನ್ನು ಪಡೆಯಲು ಭಾರತೀಯರು ಮಾಡಿದ ತ್ಯಾಗ ಬಲಿದಾನಗಳನ್ನು ನೆನಪಿಸುತ್ತದೆ.
ಅಲ್ಲದೆ, 1947 ರ ಆಗಸ್ಟ್ 15 ರಂದು ಆಂಧ್ರಪ್ರದೇಶದ ಶಿಕ್ಷಣತಜ್ಞ ಮತ್ತು ಸ್ವಾತಂತ್ರ್ಯ ಹೋರಾಟಗಾರ ಪಿಂಗಲಿ ವೆಂಕಯ್ಯ ವಿನ್ಯಾಸಗೊಳಿಸಿದ ಧ್ವಜವನ್ನು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ದೆಹಲಿಯ ಕೆಂಪು ಕೋಟೆಯ ಲಾಹೋರಿ ಗೇಟ್ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು.
ಪ್ರಸ್ತುತ ರಾಷ್ಟ್ರಧ್ವಜವು ಮೂರು ಬಣ್ಣಗಳನ್ನು ಹೊಂದಿದೆ. ಈ ಪೈಕಿ ಕೇಸರಿ ಧೈರ್ಯ ಮತ್ತು ತ್ಯಾಗವನ್ನು ಪ್ರತಿನಿಧಿಸಿದರೆ, ಬಿಳಿ ಬಣ್ಣ ಶಾಂತಿಯನ್ನು ಪ್ರತಿನಿಧಿಸುತ್ತದೆ ಮತ್ತು ಹಸಿರು ಬಣ್ಣ ಸಮೃದ್ಧಿಯನ್ನು ಸಂಕೇತಿಸುತ್ತದೆ. ಮಧ್ಯದಲ್ಲಿರುವ ಅಶೋಕ ಚಕ್ರವು ಜೀವನ ಚಕ್ರವನ್ನು ಪ್ರತಿನಿಧಿಸುತ್ತದೆ.
ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ