ಜಮ್ಮು-ಕಾಶ್ಮೀರ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಟ್ರಕ್, ಮೂವರು ಸಾವು
ಟ್ರಕ್ವೊಂದು ಸ್ಕಿಡ್ ಆಗಿ ಕಮರಿಗೆ ಬಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ದುಡು ಪ್ರದೇಶದಲ್ಲಿ ನಡೆದಿದೆ. ಈ ಘಟನೆಯಿಂದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಧಮ್‌ಪುರ, ಆ.24: ಟ್ರಕ್ವೊಂದು ಸ್ಕಿಡ್ ಆಗಿ ಕಮರಿಗೆ ಬಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ (Jammu and Kashmir) ಉಧಮ್‌ಪುರ ಜಿಲ್ಲೆಯ ದುಡು ಪ್ರದೇಶದಲ್ಲಿ ನಡೆದಿದೆ. ಈ ಘಟನೆಯಿಂದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ರಕ್ ಉಧಂಪುರದಿಂದ ದುಡು ಕಡೆಗೆ ಹೋಗುತ್ತಿದ್ದಾಗ ದುಡು ಸೆಕ್ಟರ್‌ನ ಬಟ್ಟು ನಾಲಾ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.
ವರದಿಗಳ ಪ್ರಕಾರ, ಗಾಯಾಳು ಇನ್ನೂ ವಾಹನದ ಅಡಿಯಲ್ಲಿ ಸಿಲುಕಿಕೊಂಡಿದ್ದು, ಪೊಲೀಸರು ಮತ್ತು ಸ್ಥಳೀಯ ಜನರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಕಳೆದ ವಾರ, ಉಧಂಪುರ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿಬಸ್ ಕಮರಿಗೆ ಬಿದ್ದು,10 ಮಹಿಳೆಯರು ಸೇರಿದಂತೆ ಹದಿಮೂರು ಯಾತ್ರಿಕರು ಗಾಯಗೊಂಡಿದ್ದರು.
ಇದನ್ನೂ ಓದಿ:ಜಮ್ಮು-ಕಾಶ್ಮೀರದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿತ , 4 ಜನರಿಗೆ ಗಾಯ
ಮಿನಿಬಸ್ ಕಿಶ್ತ್ವಾರ್ ಜಿಲ್ಲೆಯ ಪದ್ದರ್ ಬೆಲ್ಟ್‌ನಿಂದ ಜಮ್ಮುವಿಗೆ ಮಚೈಲ್ ಮಾತಾ ಯಾತ್ರೆಯ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು ಎಂದು ಹೇಳಲಾಗಿತ್ತು. ಗಾಯಾಳುಗಳನ್ನು ಉಧಂಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರನ್ನು ಜಮ್ಮುವಿನ ಜಿಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ