Maha Jansampark: ಇಂದಿನಿಂದ 1 ತಿಂಗಳ ಕಾಲ ಬಿಜೆಪಿಯಿಂದ ‘ಮಹಾ ಜನಸಂಪರ್ಕ’ ಅಭಿಯಾನ, ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಚಾಲನೆ

ಬಿಜೆಪಿ(BJP)ಯು ಇಂದಿನಿಂದ 1 ತಿಂಗಳುಗಳ ಕಾಲ ಜನ ಸಂಪರ್ಕ ಅಭಿಯಾನವನ್ನು ಪ್ರಾರಂಭಿಸುತ್ತಿದ್ದು, ರಾಜಸ್ಥಾನದ ಅಜ್ಮೇರ್​ನಲ್ಲಿ​ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

Important Highlight‌
Maha Jansampark: ಇಂದಿನಿಂದ 1 ತಿಂಗಳ ಕಾಲ ಬಿಜೆಪಿಯಿಂದ ‘ಮಹಾ ಜನಸಂಪರ್ಕ’ ಅಭಿಯಾನ, ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿImage Credit source: India TV
Follow us
ನಯನಾ ರಾಜೀವ್
|

Updated on: May 31, 2023 | 10:30 AM

ಬಿಜೆಪಿ(BJP)ಯು ಇಂದಿನಿಂದ 1 ತಿಂಗಳುಗಳ ಕಾಲ ‘ಮಹಾ ಜನಸಂಪರ್ಕ’ ಅಭಿಯಾನವನ್ನು ಪ್ರಾರಂಭಿಸುತ್ತಿದ್ದು, ರಾಜಸ್ಥಾನದ ಅಜ್ಮೇರ್​ನಲ್ಲಿ​ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಎಲ್ಲಾ 543 ಲೋಕಸಭಾ ಕ್ಷೇತ್ರಗಳನ್ನು ಒಳಗೊಳ್ಳುವ ಗುರಿಯನ್ನು ಈ ಪ್ರಚಾರ ಅಭಿಯಾನ ಹೊಂದಿದೆ. ಮೇ 31 ರಂದು ರಾಜಸ್ಥಾನದ ಅಜ್ಮೇರ್​ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಮೇ 31 ರಿಂದ ಜೂನ್ 30ರವರೆಗೆ ಮಹಾ ಜನ ಸಂಪರ್ಕ ಅಭಿಯಾನದಡಿ ದೇಶಾದ್ಯಂತ ವ್ಯಾಪಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. 500ಕ್ಕೂ ಹೆಚ್ಚು ಲೋಕಸಭೆ ಹಾಗೂ 4 ಸಾವಿರ ವಿಧಾನಸಭಾ ಕ್ಷೇತ್ರಗಳಲ್ಲಿ 51ಕ್ಕೂ ಹೆಚ್ಚು ಬೃಹತ್ ರ್ಯಾಲಿಗಳು, 500ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳು ಮತ್ತು 600ಕ್ಕೂ ಹೆಚ್ಚು ಪತ್ರಿಕಾಗೋಷ್ಠಿಗಳನ್ನು ನಡೆಸಲಾಗುವುದು ಹಾಗೂ 5ಲಕ್ಷಕ್ಕೂ ಹೆಚ್ಚು ಗಣ್ಯರ ಕುಟುಂಬಗಳನ್ನು ಸಂಪರ್ಕಿಸಲಾಗುವುದು ಎಂದು ಬಿಜೆಪಿ ತಿಳಿಸಿದೆ.

ಬಿಜೆಪಿ ಇತಿಹಾಸದಲ್ಲಿಯೇ ಅತಿ ದೊಡ್ಡ ಕಾರ್ಯಕ್ರಮ ಇದಾಗಿದ್ದು, ಅದರ ವಿವರಗಳನ್ನು ಬಿಜೆಪಿ ಹಂಚಿಕೊಂಡಿದೆ. ಒಟ್ಟು 288 ಬಿಜೆಪಿ ನಾಯಕರು ಮತ್ತು 16 ಲಕ್ಷ ಪಕ್ಷದ ಕಾರ್ಯಕರ್ತರ ಹತ್ತು ಲಕ್ಷ ಬೂತ್​ಗಳಲ್ಲಿ ಮತದಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಮತ್ತು ಕೇಂದ್ರದಲ್ಲಿ ಪಕ್ಷದ 9 ವರ್ಷಗಳ ಆಡಳಿತದಲ್ಲಿನ ಸಾಧನೆಗಳ ಸಂದೇಶವನ್ನು ರವಾನಿಸಲು ಎಲ್ಲಾ ಲೋಕಸಭಾ ಸ್ಥಾನಗಳನ್ನು ಒಳಗೊಂಡಿರುವ 144 ಕ್ಲಸ್ಟರ್​ಗಳನ್ನು ಸ್ಥಾಪನೆ ಮಾಡಲಾಗುತ್ತದೆ.

ಮತ್ತಷ್ಟು ಓದಿ: Karnataka Elections: ಲೋಕಸಭೆ ಚುನಾವಣೆ ಬಳಿಕ ಬಿಬಿಎಂಪಿ, ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್?

ಪ್ರಚಾರದ ಭಾಗವಾಗಿ ಪಕ್ಷದ ನಾಯಕರು ಪ್ರತಿ ಲೋಕಸಭಾ ಕ್ಷೇತ್ರದಲ್ಲಿ 1 ಸಾವಿರ ಗಣ್ಯರ ಕುಟುಂಬಗಳನ್ನು ಭೇಟಿಯಾಗಲಿದ್ದಾರೆ, ಮತ್ತು ಶಿಕ್ಷಕರು, ಸಾಮಾಜಿಕ ಮಾಧ್ಯಮ ಪ್ರಭಾವಿಗಳೊಂದಿಗೆ ಭಾರತದಾದ್ಯಂತ 51 ಮೆಗಾ ರ್ಯಾಲಿಗಳನ್ನು ನಡೆಸಲಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಹೇಗೆ ನಾಶಪಡಿಸಿತು ಎಂಬುದರ ಕುರಿತು ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗುತ್ತದೆ. ಪ್ರಮುಖ ಸಾಮಾಜಿಕ ಮಾಧ್ಯಮ ಪ್ರಭಾವಿಗಳೊಂದಿಗೆ ಸಾಮಾಜಿಕ ಮಾಧ್ಯಮ ಪ್ರಭಾವಿಗಳ ಸಭೆಯನ್ನು ಆಯೋಜಿಸಲಾಗುತ್ತದೆ. ವ್ಯಾಪಾರ ಸಮಾವೇಶ ಆಯೋಜಿಸಿ ಕೇಂದ್ರ ಸರ್ಕಾರ ಕೈಗೊಂಡಿರುವ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ತಾಣ ವಿಕಾಸ ತೀರ್ಥಕ್ಕೆ ಭೇಟಿ ನೀಡಲಾಗುವುದು.

ಜೂನ್ 20 ರಿಂದ ಜೂನ್ 30 ರವರೆಗೆ ಮನೆ-ಮನೆಗೆ ತೆರಳಿ ಸಾರ್ವಜನಿಕ ಸಭೆಗಳು ನಡೆಯಲಿದ್ದು, ಕೇಂದ್ರ ಸಚಿವರು, ರಾಷ್ಟ್ರೀಯ ಪದಾಧಿಕಾರಿಗಳು ಸೇರಿದಂತೆ ಎಲ್ಲ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಯುವ ಮೋರ್ಚಾದ ಸದಸ್ಯರು ಫಲಾನುಭವಿಗಳ ಸಂಪರ್ಕದ ಬೂತ್‌ಗಳಲ್ಲಿ ಮುದ್ರಾ ಸಾಲ ಯೋಜನೆ, ಸ್ಟಾರ್ಟ್‌ಅಪ್ ಇಂಡಿಯಾ ಇತ್ಯಾದಿ ಫಲಾನುಭವಿಗಳನ್ನು ಭೇಟಿ ಮಾಡಿ, ಕೇಂದ್ರದ ಬಿಜೆಪಿ ಸರ್ಕಾರ 9 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಿದ್ದಾರೆ.

ಮೋದಿ ಸರ್ಕಾರದ ಸಾರ್ವಜನಿಕ ಕಲ್ಯಾಣ ನೀತಿಗಳು ಮತ್ತು ಸಾಧನೆಗಳನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವ ಸಲುವಾಗಿ ಕೋಟ್ಯಂತರ ಬಿಜೆಪಿ ಕಾರ್ಯಕರ್ತರು, 300 ಕ್ಕೂ ಹೆಚ್ಚು ಸಂಸದರು ಮತ್ತು 1400 ಕ್ಕೂ ಹೆಚ್ಚು ಶಾಸಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ಸರ್ಕಾರದ ಸಾಧನೆ ಎಲ್ಲರಿಗೂ ತಲುಪಲಿದೆ. ಹೊಸ ಮತದಾರರ ಸಮಾವೇಶದಲ್ಲಿ 15931 ಮಂಡಲಗಳು 18 ರಿಂದ 25 ವರ್ಷ ವಯಸ್ಸಿನ ಮತದಾರರ ಸಮಾವೇಶವನ್ನು ಆಯೋಜಿಸುತ್ತವೆ. ದೇಶಾದ್ಯಂತ ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ಕುಟುಂಬಗಳನ್ನು ಆಹ್ವಾನಿಸಿ ರಾಷ್ಟ್ರಮಟ್ಟದಲ್ಲಿ ಆನ್‌ಲೈನ್ ರಸಪ್ರಶ್ನೆ ಆಯೋಜಿಸಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು