My India My Life Goals: ಹೊಸ ತಂತ್ರಜ್ಞಾನ ಬಳಸಿಕೊಂಡು ನಮ್ಮ ಭೂಮಿಯನ್ನು ಹಚ್ಚ ಹಸುರಿನಿಂದ ಕಂಗೊಳಿಸುವಂತೆ ಮಾಡಬೇಕಿದೆ: ಸಚಿವ ಭೂಪೇಂದ್ರ ಯಾದವ್

ಕೇಂದ್ರ ಸರ್ಕಾರವು 'ಮೈ ಇಂಡಿಯಾ ಮೈ ಲೈಫ್ ಗೋಲ್ಸ್' ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದು ಈ ಬಗ್ಗೆ ಸಚಿವ ಭೂಪೇಂದ್ರ ಯಾದವ್ ಅವರು ಕೆಲವು ವಿಚಾರಗಳನ್ನು ವ್ಯಕ್ತಪಡಿಸಿದ್ದಾರೆ.

Important Highlight‌
My India My Life Goals: ಹೊಸ ತಂತ್ರಜ್ಞಾನ ಬಳಸಿಕೊಂಡು ನಮ್ಮ ಭೂಮಿಯನ್ನು ಹಚ್ಚ ಹಸುರಿನಿಂದ ಕಂಗೊಳಿಸುವಂತೆ ಮಾಡಬೇಕಿದೆ: ಸಚಿವ ಭೂಪೇಂದ್ರ ಯಾದವ್
ಸಚಿವ ಭೂಪೇಂದ್ರ ಯಾದವ್
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 24, 2023 | 3:58 PM

ಕೇಂದ್ರ ಸರ್ಕಾರವು ಪ್ರಕೃತಿಯನ್ನು ಸಂರಕ್ಷಿಸುವ ಉದ್ದೇಶದಿಂದ ಆಯೋಜನೆ ಮಾಡಿರುವ, ‘ಮೈ ಇಂಡಿಯಾ ಮೈ ಲೈಫ್ ಗೋಲ್ಸ್‘ (My India My Life Goals) ಎಂಬ ವಿಶೇಷ ಕಾರ್ಯಕ್ರಮಕ್ಕೆ ಟಿವಿ 9 ಸಂಸ್ಥೆ ಕೂಡ ಪಾಲುದಾರನಾಗಿ ಕೈ ಜೋಡಿಸಿದೆ. ಈ ಬಗ್ಗೆ ಹಲವಾರು ಜನರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಟಿವಿ 9 ಅನ್ನು ಅಭಿನಂದಿಸಿದ್ದರು.

ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಭೂಪೇಂದ್ರ ಯಾದವ್ “ಮಿಷನ್ ಲೈಫ್ ಅಂದರೆ ನಾವು ಪರಿಸರ ಜಾಗೃತಿಯನ್ನು ಮೂಡಿಸಬೇಕು. ನೈಸರ್ಗಿಕ ಸಂಪನ್ಮೂಲಗಳನ್ನು ಹಿತಮಿತವಾಗಿ ಬಳಸುವತ್ತ ಗಮನ ಕೋಡಬೇಕು. ನಮ್ಮ ವೈಯಕ್ತಿಕ ಬದುಕಿನಲ್ಲಿಯೇ ಬದಲಾವಣೆ ತಂದುಕೊಳ್ಳಬೇಕು. ಅದು ವಿದ್ಯುತ್ ಬಳಕೆ ಇರಬಹುದು, ನೀರು, ಆಹಾರದ ಬಳಕೆ ಇರಬಹುದು, ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡವುದಿರಬಹುದು, ಇದೆಲ್ಲವೂ ನಮ್ಮ ವ್ಯಯಕ್ತಿಕ ಬದುಕಿಗೆ ಸಂಬಂಧ ಪಟ್ಟಿದೆ” ಎಂದಿದ್ದಾರೆ.

ಇದನ್ನೂ ಓದಿ: ಸತತ 9 ವರ್ಷಗಳಿಂದ ಗಂಗಾನದಿಯನ್ನು ಸ್ವಚ್ಛಗೊಳಿಸುತ್ತಿರುವ ರಾಜೇಶ್ ಶುಕ್ಲಾ

“ಮಿಷನ್ ಲೈಫ್ ಅಡಿಯಲ್ಲಿ “ಮೇರಿ ಲೈಫ್” ಪೋರ್ಟಲ್ ಅನ್ನು ಆರಂಭಿಸಿದ್ದೇವೆ. 2 ಕೋಟಿ ಅಧಿಕ ಮಂದಿ ಅದರಲ್ಲಿ ಸಹಭಾಗಿತ್ವವನ್ನು ತೆಗೆದುಕೊಂಡಿದ್ದಾರೆ. ಸಮಾಜದಲ್ಲಿ ನಾವು ಒಂದು ಒಳ್ಳೆಯ ವಿಚಾರವನ್ನು ಜಾಗೃತಿಯ ರೂಪದಲ್ಲಿ ಮುಂದೆ ತೆಗೆದುಕೊಂಡು ಹೋದರೆ ಆದ್ದರಿಂದ ಅನೇಕ ಜನ ಪ್ರೇರಣೆ ಪಡೆದುಕೊಳ್ಳುತ್ತಾರೆ. ಆಗ ಪರಿಸರ ಪ್ರೇಮ ಬೆಳೆಯುತ್ತದೆ. ಜೊತೆಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸಲು ಮಾನ್ಯ ಪ್ರಧಾನ ಮಂತ್ರಿಗಳು ಮಿಷನ್ ಲೈಫ್ ಅನ್ನು ಜಾರಿಗೆ ತಂದಿದ್ದಾರೆ. ಅದಲ್ಲದೆ ನಾವು ಬಳಸುವ ತಂತ್ರಜ್ಞಾನ ಅದು ಪರಿಸರ ಸ್ನೇಹಿ ಆಗಬೇಕು. ನಮ್ಮ ಜೀವನ ಪದ್ಧತಿ ನಮ್ಮ ಪರಿಸರಕ್ಕೆ ಹೊಂದುಕೊಳ್ಳುವಂತಿರಬೇಕು, ಹಾಗಾಗಿ ಸರಕಾರ ಸಹ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಜೊತೆಗೆ ನವೀಕರಿಸಬಹುದಾದ ಸಂಪನ್ಮೂಲಗಳ ಬಗ್ಗೆ ವಿಶೇಷ ಗಮನ ನೀಡುತ್ತಿದೆ. ಸರಕಾರದ ತ್ಯಾಜ್ಯ ನಿರ್ವಹಣೆ ನೀತಿಯು ಸಹ ಸುರಕ್ಷಿತ ಪರಿಸರಕ್ಕೆ ಕೂಡುಗೆ ನೀಡುವುದೇ ಆಗಿದೆ. ಹೊಸ ತಂತ್ರಜ್ಞಾನ ಬಳಸಿಕೊಂಡು ನಮ್ಮ ಭೂಮಿಯನ್ನು ಹಚ್ಚ ಹಸುರಿನಿಂದ ಕಂಗೊಳಿಸುವಂತೆ ಮಾಡಬೇಕಿದೆ ಎಂದರು.

ಮೈ ಇಂಡಿಯಾ ಮೈ ಲೈಫ್ ಗೋಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:11 pm, Mon, 17 July 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು