National Girl Child Day 2023: ಸ್ವತಂತ್ರ ಭಾರತದ ಅಮೃತಕಾಲದಲ್ಲಿ ಈಡೇರಲಿ ಹೆಣ್ಣುಮಕ್ಕಳ ಕನಸುಗಳು

National Girl Child Day: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಾರಂಭಿಸಿತು. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸುವ ಉದ್ದೇಶ ಸಮಾಜದಲ್ಲಿ ಪ್ರತಿದಿನವೂ ಹೆಣ್ಣುಮಕ್ಕಳು ಎದುರಿಸುತ್ತಿರುವ ತಾರತಮ್ಯವನ್ನು ಮತ್ತು ಸಮಸ್ಯೆಗಳನ್ನು ಎತ್ತಿ ತೋರಿಸುವುದಾಗಿದೆ.

Important Highlight‌
National Girl Child Day 2023: ಸ್ವತಂತ್ರ ಭಾರತದ ಅಮೃತಕಾಲದಲ್ಲಿ ಈಡೇರಲಿ ಹೆಣ್ಣುಮಕ್ಕಳ ಕನಸುಗಳು
ರಾಷ್ಟ್ರೀಯ ಹೆಣ್ಣುಮಕ್ಕಳ ದಿನImage Credit source: UNICEF
Follow us
ವಿವೇಕ ಬಿರಾದಾರ
|

Updated on:Jan 24, 2023 | 8:53 AM

ಪ್ರತಿವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನವೆಂದು (National Girl Child Day 2023) ಆಚರಿಸಲಾಗುತ್ತದೆ. ಸಮಾನತೆ ವಿಚಾರವಾಗಿ ದೇಶದಲ್ಲಿ ಹೆಣ್ಣು ಮಕ್ಕಳು (Girl Child Day) ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದು, ಈ ಕುರಿತಾಗಿ ದೇಶಾದ್ಯಂತ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರು ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳು ಅಸಮಾನತೆ, ಸಾಮಾಜಿಕ ತಾರತಮ್ಯ ಮತ್ತು ಶೋಷಣೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಗುತ್ತಿದೆ. ಈ ದಿನದಂದು ಆರೋಗ್ಯ, ಪೋಷಣೆ, ಶಿಕ್ಷಣ ಮತ್ತು ಸುರಕ್ಷತೆಯನ್ನು ಒದಗಿಸುವ ವಿಷಯದಲ್ಲಿ ಹೆಣ್ಣು ಮಕ್ಕಳ ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಇತಿಹಾಸ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಾರಂಭಿಸಿತು. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸುವ ಉದ್ದೇಶ ಸಮಾಜದಲ್ಲಿ ಪ್ರತಿದಿನವೂ ಹೆಣ್ಣುಮಕ್ಕಳು ಎದುರಿಸುತ್ತಿರುವ ತಾರತಮ್ಯವನ್ನು ಮತ್ತು ಸಮಸ್ಯೆಗಳನ್ನು ಎತ್ತಿ ತೋರಿಸುವುದಾಗಿದೆ. ಭಾರತದಲ್ಲಿ ಹೆಣ್ಣು ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಬಲವಂತವಾಗಿ ಮನೆ ಕೆಲಸಕ್ಕೆ ಕಳುಹಿಸವುದು, ಇದರಿಂದ ಶಿಕ್ಷಣದಿಂದ ವಂಚಿತರಾಗುವುದು, ಇತ್ತೀಚಿನ ವರದಿಗಳ ಪ್ರಕಾರ ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುವುದು ಮತ್ತು ಹೆಣ್ಣು ಬ್ರೂಣ ಹತ್ಯೆ ಅತಿ ದೊಡ್ಡ ಪಿಡುಗಾಗಿದೆ. ಈ ಹಿನ್ನೆಲೆ ಸರ್ಕಾರವು ಇದರ ವಿರುದ್ಧ ಜಾಗೃತಿ ಮೂಡಿಸಲು ಮತ್ತು ಪ್ರತಿ ಹೆಣ್ಣು ಮಗುವಿಗೆ ಸಮಾನತೆ ಮತ್ತು ಘನತೆಯ ಮಹತ್ವವನ್ನು ಒತ್ತಿಹೇಳಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಗುತ್ತದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ಸರ್ಕಾರವು ಈ ಸಂದೇಶವನ್ನು ದೇಶದ ಪ್ರತಿ ಮೂಲೆ ಮೂಲೆಗು ಮುಟ್ಟಿಸಲು ಜಾಗೃತಿ ಅಭಿಯಾನಗಳನ್ನು ಆಯೋಜಿಸುತ್ತದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮಹತ್ವ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವು ಬಹಳ ಮಹತ್ವದ್ದಾಗಿದೆ ಏಕೆಂದರೆ ಇದರ ಮುಖ್ಯ ಉದ್ದೇಶ ಹೆಣ್ಣುಮಕ್ಕಳ ಬಗೆಗಿನ ಸಮಾಜದ ಮನೋಭಾವವನ್ನು ಬದಲಾಯಿಸುವುದು. ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯುವುದು. ಕಡಿಮೆಯಾಗುತ್ತಿರುವ ಲಿಂಗ ಅನುಪಾತದ ಬಗ್ಗೆ ಜಾಗೃತಿ ಮೂಡಿಸುವುದು. ಸಮಾಜದಲ್ಲಿ ಹೆಣ್ಣಿನ ಬಗೆಗೆ ಇರುವ ಕೀಳಿರಮೆ ಮನೋಭಾವವನ್ನು ಬದಲಿಸುವುದು.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಉದ್ದೇಶಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಹಲವಾರು ಯೋಜನೆಗಳನ್ನು ಜಾರಿಗೆಗೆ ತಂದಿವೆ. ಹೆಣ್ಣು ಮಗುವನ್ನು ಉಳಿಸಿ, ಬೇಟಿ ಬಚಾವೋ ಬೇಟಿ ಪಢಾವೋ, ಸುಕನ್ಯಾ ಸಮೃದ್ಧಿ ಯೋಜನೆ, CBSE ಉಡಾನ್ ಯೋಜನೆ, ಹೆಣ್ಣು ಮಕ್ಕಳಿಗೆ ಉಚಿತ ಅಥವಾ ಅನುದಾನಿತ ಶಿಕ್ಷಣ ಮತ್ತು ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಮಹಿಳೆಯರಿಗೆ ಮೀಸಲಾತಿಗಳನ್ನು ನೀಡಿ ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವ ಅದ್ಭುತಗಳನ್ನು ಮಾಡುತ್ತಿವೆ.

Published On - 8:46 am, Tue, 24 January 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು