ವಿಶ್ವವಿದ್ಯಾಲಯಗಳಲ್ಲಿ ರ‍್ಯಾಗಿಂಗ್ ತಡೆಯಲು ಹೊಸ ತಂತ್ರಜ್ಞಾನ: ಇಸ್ರೋ ಜತೆ ಪಶ್ಚಿಮ ಬಂಗಾಳ ರಾಜ್ಯಪಾಲ ಚರ್ಚೆ
ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್ ಹಾವಳಿಯನ್ನು ತಡೆಯಲು ಸೂಕ್ತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜತೆಗೆ ಮಾತನಾಡಿದ್ದಾರೆ.
ಕೋಲ್ಕತ್ತಾ, ಆ.25: ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್ (Governor) ಹಾವಳಿಯನ್ನು ತಡೆಯಲು ಸೂಕ್ತ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಪಶ್ಚಿಮ ಬಂಗಾಳದ (West Bengal) ರಾಜ್ಯಪಾಲ ಸಿವಿ ಆನಂದ ಬೋಸ್ (CV Ananda Bose) ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜತೆಗೆ ಮಾತನಾಡಿದ್ದಾರೆ ಎಂದು ರಾಜಭವನದ ಪ್ರಕಟಣೆ ತಿಳಿಸಿದೆ. ಇತ್ತೀಚೆಗೆ ಜಾದವ್‌ಪುರ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಪ್ರಥಮ ವರ್ಷದ ಪದವಿಪೂರ್ವ ವಿದ್ಯಾರ್ಥಿಯೊಬ್ಬರು ರ‍್ಯಾಗಿಂಗ್ ಮತ್ತು ಲೈಂಗಿಕ ಕಿರುಕುಳಕ್ಕೆ ಒಳಗಾಗಿ ಸಾವನ್ನಪ್ಪಿದ್ದರು. ಈ ಘಟನೆ ಪಶ್ಚಿಮ ಬಂಗಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇಂತಹ ಅನೇಕ ಘಟನೆಗಳು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ರಾಜ್ಯಪಾಲರೇ ವಿಶ್ವವಿದ್ಯಾಲಯದ ಅಧಿಕಾರಿಗಳ ಜತೆಗೆ ಮಾತನಾಡಿ, ಕ್ರಮ ಕೈಗೊಳ್ಳುವಂತೆ ಆದೇಶವನ್ನು ನೀಡಿದ್ದರು.
ಇದೀಗ ಈ ರ‍್ಯಾಗಿಂಗ್ ಹಾವಳಿಯನ್ನು ತಡೆಯಲು ಸೂಕ್ತ ತಂತ್ರಿಕಾ ಕ್ರಮವನ್ನು ತೆಗೆದುಕೊಳ್ಳಬೇಕು ಎಂಬ ಉದ್ದೇಶದಿಂದ ಪಶ್ಚಿಮ ಬಂಗಾಳದ ಗವರ್ನರ್ ಮತ್ತು ವಿಶ್ವವಿದ್ಯಾಲಯಗಳ ಕುಲಪತಿ ಸಿವಿ ಆನಂದ ಬೋಸ್ ಅವರು, ಇಸ್ರೋ ಅಧ್ಯಕ್ಷರ ಜತೆಗೆ ಮಾತನಾಡಿದ್ದಾರೆ ಎಂದು ಗುರುವಾರ ರಾತ್ರಿ ವಿಶ್ವವಿದ್ಯಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆನಂದ ಬೋಸ್ ಅವರು ಹೈದರಾಬಾದ್ ಮೂಲದ ಸಂಸ್ಥೆಯೊಂದರ ಜೊತೆ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ:ರ್ಯಾಗಿಂಗ್ನಿಂದ ಬೇಸತ್ತು 4 ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಸಾವು
ಇನ್ನು ಈ ಸಂಸ್ಥೆ ವಿಡಿಯೋ ಅನಾಲಿಟಿಕ್ಸ್, ಇಮೇಜ್ ಮ್ಯಾಚಿಂಗ್ ಸ್ವಯಂಚಾಲಿತ ಗುರಿ ಗುರುತಿಸುವಿಕೆ ಮತ್ತು ರಿಮೋಟ್ ಸೆನ್ಸಿಂಗ್‌ನಂತಹ ಬಹು ಮೂಲಗಳನ್ನು ಬಳಸಿಕೊಂಡು ಸೂಕ್ತವಾದ ತಂತ್ರಜ್ಞಾನ ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯಪಾಲರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜಾದವ್‌ಪುರ ವಿಶ್ವವಿದ್ಯಾನಿಲಯದಲ್ಲಿ ಪದವಿಪೂರ್ವ ವಿದ್ಯಾರ್ಥಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಿಯ ಮತ್ತು ಹಿರಿಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:55 am, Fri, 25 August 23