ಭಾರತೀಯ ಕುಸ್ತಿ ಫೆಡರೇಷನ್ ಸದಸ್ಯತ್ವ ರದ್ದು
ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ.
ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ. ಇದು ಭಾರತೀಯ ಕುಸ್ತಿ ಆಟಗಾರರಿಗೆ ದೊಡ್ಡ ಹೊಡೆತ ಎಂದೇ ಹೇಳಬಹುದು, ವಾಸ್ತವವಾಗಿ, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಮೇ 30 ರಂದು ಭಾರತೀಯ ಕುಸ್ತಿ ಫೆಡರೇಶನ್‌ಗೆ ಪತ್ರ ಬರೆದಿತ್ತು,.
ಮುಂದಿನ 45 ದಿನಗಳಲ್ಲಿ (ಜುಲೈ 15 ರೊಳಗೆ) ಭಾರತದ ಕುಸ್ತಿ ಫೆಡರೇಶನ್‌ಗೆ ಚುನಾವಣೆ ನಡೆಯದಿದ್ದರೆ ಸದಸ್ಯತ್ವವನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು, ಮಹಿಳಾ ಕುಸ್ತಿಪಟುಗಳು ಹಿಂದಿನ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದವು. ಬಳಿಕ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಭಾರತೀಯ ಕುಸ್ತಿ ಫೆಡರೇಷನ್ ಚುನಾವಣೆ ಜುಲೈ 11 ರಂದು ನಡೆಯಬೇಕಿತ್ತು.
ಮತ್ತಷ್ಟು ಓದಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್ಗೆ ಮಧ್ಯಂತರ ಜಾಮೀನು
ಅಸ್ಸಾಂ ಕುಸ್ತಿ ಫೆಡರೇಷನ್ ಅದರ ಮಾನ್ಯತೆಗೆ ಸಂಬಂಧಿಸಿದಂತೆ ಅಸ್ಸಾಂ ಹೈಕೋರ್ಟ್ನಿಂದ ಚುನಾವಣೆಗೆ ತಡೆಯಾಜ್ಞೆ ತಂದಿತ್ತು. ಈ ವಿಚಾರದ ಬಳಿಕ ಚುನಾವಣಾಧಿಕಾರಿ ಆಗಸ್ಟ್ 12ಎಂದು ಭಾರತೀಯ ಕುಸ್ತಿ ಫೆಡರೇಷನ್ಗೆ ಚುನಾವಣೆ ದಿನಾಂಕವನ್ನು ನಿಗದಿಪಡಿಸಿದ್ದರು. ಆದರೆ ಆಗಸ್ಟ್ 11ರಂದು ಹರ್ಯಾಣ ಹೈಕೋರ್ಟ್ ಚುನಾವಣೆಗೆ ತಡೆ ನೀಡಿತ್ತು. ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:16 pm, Thu, 24 August 23