Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?

Fastest Century In Test Cricket: ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆ ಬ್ರೆಂಡನ್ ಮೆಕಲಂ ಹೆಸರಿನಲ್ಲಿದೆ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಟಾಪ್-5 ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ...

TV9 Digital Desk
| Updated By: Zahir Yusuf

Updated on: Jul 02, 2022 | 12:39 PM

ಬರ್ಮಿಂಗ್​ಹ್ಯಾಮ್​ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ದದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಷಭ್ ಪಂತ್ ಭರ್ಜರಿ ಶತಕ ಬಾರಿಸಿದ್ದಾರೆ. ಕೇವಲ 89 ಎಸೆತಗಳಲ್ಲಿ ಶತಕ ಸಿಡಿಸಿದ ಪಂತ್ ಹಲವು ದಾಖಲೆಗಳನ್ನು ಬರೆದಿರುವುದು ವಿಶೇಷ. ಆದರೆ ಇದು ಟೀಮ್ ಇಂಡಿಯಾ ಪರವಾಗಲಿ, ಟೆಸ್ಟ್ ಕ್ರಿಕೆಟ್​ನಲ್ಲಾಗಲಿ ವೇಗದ ಶತಕವಲ್ಲ. ಏಕೆಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆ ಬ್ರೆಂಡನ್ ಮೆಕಲಂ ಹೆಸರಿನಲ್ಲಿದೆ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಟಾಪ್-5 ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ...

1 / 7
1- ಬ್ರೆಂಡನ್ ಮೆಕಲಂ ( ನ್ಯೂಜಿಲೆಂಡ್): 2015 ರಲ್ಲಿ ನ್ಯೂಜಿಲೆಂಡ್​ನ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಬ್ರೆಂಡನ್ ಮೆಕಲಂ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಕೇವಲ 54 ಎಸೆತಗಳಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ಬರೆದಿದ್ದರು.

2 / 7
 2- ವಿವ್ ರಿಚರ್ಡ್ಸ್ ​(ವೆಸ್ಟ್ ಇಂಡೀಸ್): 1985 ರಲ್ಲಿ ವೆಸ್ಟ್ ಇಂಡೀಸ್ ಲೆಜೆಂಡ್ ರಿಚರ್ಡ್ಸ್ ಇಂಗ್ಲೆಂಡ್ ವಿರುದ್ದ ಕೇವಲ 56 ಎಸೆತಗಳಲ್ಲಿ ಶತಕ ಸಿಡಿಸಿದ್ದರು. 3 ದಶಕಗಳ ಕಾಲ ವಿಶ್ವ ದಾಖಲೆಯಾಗಿ ಉಳಿದಿದ್ದ ಈ ಇನಿಂಗ್ಸ್ ದಾಖಲೆಯನ್ನು 2015 ರಲ್ಲಿ ಮೆಕಲಂ ಅಳಿಸಿ ಹಾಕಿದ್ದರು.

3 / 7
3- ಮಿಸ್ಬಾ ಉಲ್ ಹಕ್ (ಪಾಕಿಸ್ತಾನ್): 2014 ರಲ್ಲಿ ಮಿಸ್ಬಾ ಉಲ್ ಹಕ್ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಪಂದ್ಯದಲ್ಲಿ 56 ಎಸೆತಗಳಲ್ಲಿ ಶತಕ ಸಿಡಿಸಿ ವಿವ್ ರಿಚರ್ಡ್ಸ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದರು.

4 / 7
4- ಆ್ಯಡಂ ಗಿಲ್​ಕ್ರಿಸ್ಟ್​ (ಆಸ್ಟ್ರೇಲಿಯಾ): 2006 ರಲ್ಲಿ ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಇನಿಂಗ್ಸ್​ನಲ್ಲಿ ಗಿಲ್​ಕ್ರಿಸ್ಟ್ ಕೇವಲ 57 ಎಸೆತಗಳಲ್ಲಿ ಶತಕ ಪೂರೈಸಿ ಅಬ್ಬರಿಸಿದ್ದರು.

5 / 7
5- ಜ್ಯಾಕ್ ಗ್ರೆಗೊರಿ (ಆಸ್ಟ್ರೇಲಿಯಾ): 1921 ರಲ್ಲಿ ಸೌತ್ ಆಫ್ರಿಕಾ ವಿರುದ್ದ ಗ್ರೆಗೊರಿ ಕೇವಲ 67 ಎಸೆತಗಳಲ್ಲಿ ಶತಕ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದರು. ಈ ದಾಖಲೆಯನ್ನು 6 ದಶಕಗಳ ಬಳಿಕ ವಿವ್ ರಿಚರ್ಡ್ಸ್ ಮುರಿದಿದ್ದರು.

6 / 7
ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಶತಕ ಬಾರಿಸಿದ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿದೆ. 1987 ರಲ್ಲಿ ಕಪಿಲ್ ದೇವ್ ಶ್ರೀಲಂಕಾ ವಿರುದ್ದ ಕೇವಲ 74 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು.

7 / 7
Follow us
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ

ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್

ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ

ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ

'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ

‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ

ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ

ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ

ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು