Test Cricket Records: ಟೆಸ್ಟ್ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?
Fastest Century In Test Cricket: ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆ ಬ್ರೆಂಡನ್ ಮೆಕಲಂ ಹೆಸರಿನಲ್ಲಿದೆ. ಹಾಗಿದ್ರೆ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಟಾಪ್-5 ಬ್ಯಾಟ್ಸ್ಮನ್ಗಳು ಯಾರೆಲ್ಲಾ ನೋಡೋಣ...
1 / 7
ಬರ್ಮಿಂಗ್ಹ್ಯಾಮ್ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ದದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಭರ್ಜರಿ ಶತಕ ಬಾರಿಸಿದ್ದಾರೆ. ಕೇವಲ 89 ಎಸೆತಗಳಲ್ಲಿ ಶತಕ ಸಿಡಿಸಿದ ಪಂತ್ ಹಲವು ದಾಖಲೆಗಳನ್ನು ಬರೆದಿರುವುದು ವಿಶೇಷ. ಆದರೆ ಇದು ಟೀಮ್ ಇಂಡಿಯಾ ಪರವಾಗಲಿ, ಟೆಸ್ಟ್ ಕ್ರಿಕೆಟ್ನಲ್ಲಾಗಲಿ ವೇಗದ ಶತಕವಲ್ಲ. ಏಕೆಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆ ಬ್ರೆಂಡನ್ ಮೆಕಲಂ ಹೆಸರಿನಲ್ಲಿದೆ. ಹಾಗಿದ್ರೆ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಟಾಪ್-5 ಬ್ಯಾಟ್ಸ್ಮನ್ಗಳು ಯಾರೆಲ್ಲಾ ನೋಡೋಣ...
2 / 7
1- ಬ್ರೆಂಡನ್ ಮೆಕಲಂ ( ನ್ಯೂಜಿಲೆಂಡ್): 2015 ರಲ್ಲಿ ನ್ಯೂಜಿಲೆಂಡ್ನ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಬ್ರೆಂಡನ್ ಮೆಕಲಂ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಕೇವಲ 54 ಎಸೆತಗಳಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ಬರೆದಿದ್ದರು.
3 / 7
2- ವಿವ್ ರಿಚರ್ಡ್ಸ್ (ವೆಸ್ಟ್ ಇಂಡೀಸ್): 1985 ರಲ್ಲಿ ವೆಸ್ಟ್ ಇಂಡೀಸ್ ಲೆಜೆಂಡ್ ರಿಚರ್ಡ್ಸ್ ಇಂಗ್ಲೆಂಡ್ ವಿರುದ್ದ ಕೇವಲ 56 ಎಸೆತಗಳಲ್ಲಿ ಶತಕ ಸಿಡಿಸಿದ್ದರು. 3 ದಶಕಗಳ ಕಾಲ ವಿಶ್ವ ದಾಖಲೆಯಾಗಿ ಉಳಿದಿದ್ದ ಈ ಇನಿಂಗ್ಸ್ ದಾಖಲೆಯನ್ನು 2015 ರಲ್ಲಿ ಮೆಕಲಂ ಅಳಿಸಿ ಹಾಕಿದ್ದರು.
4 / 7
3- ಮಿಸ್ಬಾ ಉಲ್ ಹಕ್ (ಪಾಕಿಸ್ತಾನ್): 2014 ರಲ್ಲಿ ಮಿಸ್ಬಾ ಉಲ್ ಹಕ್ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಪಂದ್ಯದಲ್ಲಿ 56 ಎಸೆತಗಳಲ್ಲಿ ಶತಕ ಸಿಡಿಸಿ ವಿವ್ ರಿಚರ್ಡ್ಸ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದರು.
5 / 7
4- ಆ್ಯಡಂ ಗಿಲ್ಕ್ರಿಸ್ಟ್ (ಆಸ್ಟ್ರೇಲಿಯಾ): 2006 ರಲ್ಲಿ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಇನಿಂಗ್ಸ್ನಲ್ಲಿ ಗಿಲ್ಕ್ರಿಸ್ಟ್ ಕೇವಲ 57 ಎಸೆತಗಳಲ್ಲಿ ಶತಕ ಪೂರೈಸಿ ಅಬ್ಬರಿಸಿದ್ದರು.
6 / 7
5- ಜ್ಯಾಕ್ ಗ್ರೆಗೊರಿ (ಆಸ್ಟ್ರೇಲಿಯಾ): 1921 ರಲ್ಲಿ ಸೌತ್ ಆಫ್ರಿಕಾ ವಿರುದ್ದ ಗ್ರೆಗೊರಿ ಕೇವಲ 67 ಎಸೆತಗಳಲ್ಲಿ ಶತಕ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದರು. ಈ ದಾಖಲೆಯನ್ನು 6 ದಶಕಗಳ ಬಳಿಕ ವಿವ್ ರಿಚರ್ಡ್ಸ್ ಮುರಿದಿದ್ದರು.
7 / 7
ಇನ್ನು ಟೆಸ್ಟ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಶತಕ ಬಾರಿಸಿದ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿದೆ. 1987 ರಲ್ಲಿ ಕಪಿಲ್ ದೇವ್ ಶ್ರೀಲಂಕಾ ವಿರುದ್ದ ಕೇವಲ 74 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು.