IND vs ENG: ಭಾರತ- ಇಂಗ್ಲೆಂಡ್ ಸೆಮಿ ಫೈನಲ್ ಪಂದ್ಯದ ರೋಚಕ ಫೋಟೋಗಳು ನೋಡಿ
ಐಸಿಸಿ ಟಿ20 ವಿಶ್ವಕಪ್ 2022ರ ದ್ವಿತೀಯ ಸೆಮಿ ಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಅನುಭವಿಸಿದ ಸೋಲು ಭಾರತ (India vs England) ತಂಡಕ್ಕೆ ದೊಡ್ಡ ಆಘಾತವಾಗಿದೆ. ಇಡೀ ಟೂರ್ನಿಯಲ್ಲಿ ಕೇವಲ ಒಂದು ಸೋಲನ್ನು ಕಂಡು ಸೆಮೀಸ್ಗೆ ಲಗ್ಗೆಯಿಟ್ಟಿದ್ದ ರೋಹಿತ್ ಪಡೆ ಫೈನಲ್ಗೇರುವ ಪಂದ್ಯದಲ್ಲಿ ಹೀನಾಯ ಪ್ರದರ್ಶನ ತೋರಿತು.
1 / 7
ಇಂಗ್ಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಹೀನಾಯವಾಗಿ ಸೋಲು ಕಾಣುವ ಮೂಲಕ ಭಾರತ ಕ್ರಿಕೆಟ್ ತಂಡ (India vs England) ಐಸಿಸಿ ಟಿ20 ವಿಶ್ವಕಪ್ 2022 ರಿಂದ (T20 World Cup) ಹೊರಬಿದ್ದಾಗಿದೆ.
2 / 7
ಬ್ಯಾಟಿಂಗ್ನಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ವಿರಾಟ್ ಕೊಹ್ಲಿ ಬಿಟ್ಟರೆ ಮತ್ಯಾರು ಅಬ್ಬರಿಸಲಿಲ್ಲ. ಬೌಲಿಂಗ್ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಟೀಮ್ ಇಂಡಿಯಾ ಆಂಗ್ಲರ ಒಂದು ವಿಕೆಟ್ ಕೂಡ ಕೀಳಲು ಸಾಧ್ಯವಾಗಲಿಲ್ಲ.
3 / 7
10 ವಿಕೆಟ್ಗಳ ಭರ್ಜರಿ ಜಯದೊಂದಿಗೆ ಇಂಗ್ಲೆಂಡ್ ಫೈನಲ್ಗೆ ಎಂಟ್ರಿ ಕೊಟ್ಟಿದೆ. ಟಾರ್ಗೆಟ್ ಬೆನ್ನಟ್ಟಲು ಬಂದ ಇಂಗ್ಲೆಂಡ್ ತಂಡ ಆರಂಭದಿಂದಲೇ ಸ್ಫೋಟಕ ಆಟವಾಡಿತು.
4 / 7
ಭಾರತ ನೀಡಿದ್ದ 169 ರನ್ಗಳ ಸವಾಲಿನ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಪರ ನಾಯಕ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಮನಬಂದಂತೆ ಬ್ಯಾಟ್ ಬೀಸುತ್ತಿದ್ದರು. ಭಾರತದ ಬೌಲರ್ಗಳು ಪವರ್ ಪ್ಲೇನಲ್ಲಿ 63 ರನ್ಗಳನ್ನು ನೀಡಿದರು.
5 / 7
ಕೊಹ್ಲಿ 40 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 4 ಬೌಂಡರಿಗಳ ಸಮೇತ 50 ರನ್ ಗಳಿಸಿದರೆ, ಹಾರ್ದಿಕ್ ಕೇವಲ 33 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 4 ಬೌಂಡರಿಗಳನ್ನು ಬಾರಿಸಿ 63 ರನ್ ಗಳಿಸಿದರು.
6 / 7
ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಮಾಡಿದ ಅನೇಕ ಪ್ರಯೋಗವನ್ನು ಭಾರತ ವಿಶ್ವಕಪ್ ಮಧ್ಯೆ ಮಾಡಲೇಯಿಲ್ಲ. ವೈಫಲ್ಯ ಅನುಭವಿಸುತ್ತಿದ್ದರೂ ಅದೇ ಆಟಗಾರರನ್ನು ಕಣಕ್ಕಿಳಿಸಿದರು.
7 / 7
ಇಡೀ ಟೂರ್ನಿಯಲ್ಲಿ ಭಾರತ ಪರ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಆಗಿದ್ದಾರೆ.