IPL 2023: RCB ತಂಡಕ್ಕೆ ಕನ್ನಡಿಗ ಎಂಟ್ರಿ..!

| Updated By: Zahir Yusuf

Updated on: Apr 08, 2023 | 3:57 PM

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

1 / 8
IPL 2023 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಭರ್ಜರಿಯಾಗಿ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಕೆಕೆಆರ್ ವಿರುದ್ಧ ಆಡಿದ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಿಂದ ಪ್ರಮುಖ ವೇಗದ ಬೌಲರ್ ರೀಸ್ ಟೋಪ್ಲಿ ಹೊರಬಿದ್ದಿದ್ದರು.

2 / 8
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಟೋಪ್ಲಿ ಇದೀಗ ಐಪಿಎಲ್​ನಿಂದ ಹೊರ ನಡೆದಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಟೂರ್ನಿಯಿಂದ ಹೊರಗುಳಿದಿದ್ದರು. ಇದೀಗ ಆರ್​ಸಿಬಿ ಫ್ರಾಂಚೈಸಿಯು ಈ ಇಬ್ಬರ ಬದಲಿ ಆಟಗಾರರನ್ನು​ ತಂಡಕ್ಕೆ ಆಯ್ಕೆ ಮಾಡಿದೆ.

3 / 8
ಇಲ್ಲಿ ರೀಸ್ ಟೋಪ್ಲಿ ಬದಲಿಗೆ ಸೌತ್ ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಪುಣೆ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಪರ ಕಣಕ್ಕಿಳಿದಿದ್ದ ಪಾರ್ನೆಲ್ ಇದುವರೆಗೆ 26 ಐಪಿಎಲ್​ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 26 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ವರ್ಷಗಳ ಬಳಿಕ ಮತ್ತೆ ಐಪಿಎಲ್​ನಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

4 / 8
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಐಪಿಎಲ್​ನಲ್ಲಿ ವೈಶಾಖ್ ವಿಜಯಕುಮಾರ್ ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.

5 / 8
ಕರ್ನಾಟಕ ತಂಡದ ಪ್ರಮುಖ ವೇಗ ಬೌಲರ್ ಆಗಿ ಗುರುತಿಸಿಕೊಂಡಿರುವ ವೈಶಾಖ್ 10 ಪ್ರಥಮ ದರ್ಜೆ ಪಂದ್ಯಗಳಿಂದ ಒಟ್ಟು 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹಾಗೆಯೇ 7 ಲೀಸ್ಟ್ ಎ ಪಂದ್ಯಗಳಿಂದ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೆ 14 ಟಿ20 ಪಂದ್ಯಗಳಿಂದ 22 ವಿಕೆಟ್ ಪಡೆದಿರುವ 26 ವರ್ಷದ ವೈಶಾಖ್ ಈ ಹಿಂದೆ ಕರ್ನಾಟಕ, ಮಂಗಳೂರು ಯುನೈಟೆಡ್ ಹಾಗೂ ಮೈಸೂರು ವಾರಿಯರ್ಸ್ ಪರ ಕಣಕ್ಕಿಳಿದಿದ್ದರು.

6 / 8
ಇದೀಗ ಚೊಚ್ಚಲ ಬಾರಿಗೆ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಇದರೊಂದಿಗೆ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರು ಸೇರ್ಪಡೆಯಾದಂತಾಗಿದೆ. ಇದಕ್ಕೂ ಮುನ್ನ ಹರಾಜಿನ ಮೂಲಕ ಆರ್​ಸಿಬಿ ಫ್ರಾಂಚೈಸಿಯು ಯುವ ಆಟಗಾರ ಮನೋಜ್ ಭಾಂಡಗೆ ಅವರನ್ನು ಖರೀದಿಸಿತ್ತು. ಇದೀಗ 2ನೇ ಕನ್ನಡಿಗನಾಗಿ ಆರ್​ಸಿಬಿ ತಂಡಕ್ಕೆ ವೈಶಾಖ್ ವಿಜಯಕುಮಾರ್ ಅವರ ಎಂಟ್ರಿಯಾಗಿದೆ.

7 / 8
ಈ ಬಾರಿಯ ಆರ್​ಸಿಬಿ ಬಳಗಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕರ್ನಾಟಕ ವೇಗಿ ವೈಶಾಖ್​ಗೆ ತವರು ಮೈದಾನದಲ್ಲೇ ಚೊಚ್ಚಲ ಪಂದ್ಯವಾಡುವ ಅವಕಾಶ ಲಭಿಸಿದೆ. ಈ ಹಿಂದೆ ಆರ್​ಸಿಬಿ ತಂಡದಲ್ಲಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ಕನ್ನಡಿಗನನ್ನು ಆರ್​ಸಿಬಿ ಫ್ರಾಂಚೈಸಿ ಆಯ್ಕೆ ಮಾಡಿತ್ತು.

8 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವಿಜಯಕುಮಾರ್ ವೈಶಾಖ್.