Virat Kohli: ಕಿಂಗ್ ಕೊಹ್ಲಿ ನಂ.1! 4ನೇ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ವಿರಾಟ್
T20 World Cup 2022: 15ನೇ ಓವರ್‌ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿ ಇಂಗ್ಲೆಂಡ್ ವಿರುದ್ಧ 43 ರನ್ ಗಳಿಸಿದ ಕೊಹ್ಲಿ, ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4 ಸಾವಿರ ರನ್ ಪೂರೈಸಿದರು.
1 / 5
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಅಬ್ಬರಿಸಿದ್ದಾರೆ. ಸುದೀರ್ಘ ಸಮಯದ ನಂತರ ಫಾರ್ಮ್‌ಗೆ ಮರಳಿರುವ ಕೊಹ್ಲಿಯನ್ನು ತಡೆಯುವುದು ವಿಶ್ವದ ಯಾವುದೇ ಬೌಲರ್‌ಗೆ ಸಾಧ್ಯವಾಗುತ್ತಿಲ್ಲ. ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಅರ್ಧಶತಕ ಸಿಡಿಸುವ ಮೂಲಕ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ.
2 / 5
ಇದರೊಂದಿಗೆ 15ನೇ ಓವರ್‌ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿ ಇಂಗ್ಲೆಂಡ್ ವಿರುದ್ಧ 43 ರನ್ ಗಳಿಸಿದ ಕೊಹ್ಲಿ, ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4 ಸಾವಿರ ರನ್ ಪೂರೈಸಿದರು.
3 / 5
ಈಗ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ 114 ಅಂತಾರಾಷ್ಟ್ರೀಯ ಟಿ20 ಪಂದ್ಯಗಳ 106 ಇನ್ನಿಂಗ್ಸ್‌ಗಳಲ್ಲಿ 3 ಸಾವಿರದ 958 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ಒಂದು ಶತಕ ಮತ್ತು 36 ಅರ್ಧ ಶತಕಗಳನ್ನು ಬಾರಿಸಿದ್ದಾರೆ.
4 / 5
ಈ ಟೂರ್ನಿಯಲ್ಲಿ ಕೊಹ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ವಿರಾಟ್, ಸೆಮಿಫೈನಲ್‌ಗೂ ಮುನ್ನ ಗ್ರೂಪ್ 2ರಲ್ಲಿ ಆಡಿದ 5 ಪಂದ್ಯಗಳಲ್ಲಿ 3 ಅರ್ಧಶತಕಗಳನ್ನು ಗಳಿಸಿದ್ದರು ಮತ್ತು ಎಲ್ಲಾ ಮೂರು ಪಂದ್ಯಗಳಲ್ಲಿಯೂ ಅಜೇಯರಾಗಿದ್ದರು.
5 / 5
ಕೊಹ್ಲಿ ಪಾಕಿಸ್ತಾನ ವಿರುದ್ಧ ಅಜೇಯ 82, ನೆದರ್ಲೆಂಡ್ಸ್ ವಿರುದ್ಧ 62 ಮತ್ತು ಬಾಂಗ್ಲಾದೇಶ ವಿರುದ್ಧ ಔಟಾಗದೆ 64 ರನ್ ಗಳಿಸಿದ್ದರು.