ನೈಸ್ ರಸ್ತೆ​ ಅಕ್ರಮದ ದಾಖಲೆ ಬಿಡುಗಡೆಗೆ ಚಂದ್ರಯಾನ ಅಡ್ಡಿ: ಹೆಚ್.​ಡಿ. ಕುಮಾರಸ್ವಾಮಿ

ನೈಸ್ ರಸ್ತೆ ಹಗರಣದ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ಅದರಲ್ಲೂ ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬರುತ್ತಿದ್ದಾರೆ. ನಾಳೆ ದಾಖಲೆ ಬಿಡುಗಡೆ ಮಾಡುವುದಾಗಿಯೂ ಹೇಳಿದ್ದರು. ಆದರೆ, ಇದಕ್ಕೆ ಚಂದ್ರಯಾನ ಅಡ್ಡಿಯಾಗುತ್ತಿದೆ ಎಂದಿದ್ದಾರೆ.

Important Highlight‌
ನೈಸ್ ರಸ್ತೆ​ ಅಕ್ರಮದ ದಾಖಲೆ ಬಿಡುಗಡೆಗೆ ಚಂದ್ರಯಾನ ಅಡ್ಡಿ: ಹೆಚ್.​ಡಿ. ಕುಮಾರಸ್ವಾಮಿ
ನೈಸ್ ರಸ್ತೆ ಹಗರಣದ ದಾಖಲೆಗೆ ಚಂದ್ರಯಾನ ಅಡ್ಡಿ ಇದೆ ಎಂದ ಹೆಚ್​ಡಿ ಕುಮಾರಸ್ವಾಮಿ
Follow us
Sunil MH
| Updated By: Rakesh Nayak Manchi

Updated on:Aug 22, 2023 | 2:31 PM

ಬೆಂಗಳೂರು, ಆಗಸ್ಟ್ 22: ನೈಸ್ ರಸ್ತೆ ಹಗರಣದ ದಾಖಲೆ ಬಿಡುಗಡೆಗೆ ಸಮಸ್ಯೆ ಇದೆ. ನಾಳೆ ಚಂದ್ರಯಾನ ಇದೆ. ಜನರ ಗಮನ ಚಂದ್ರನ ಕಡೆ ಇರುತ್ತದೆ. ಹೀಗಾಗಿ ನಾನು ದಾಖಲೆ ಬಿಡುಗಡೆ ಮಾಡಿದರೆ ಜನರಿಗೆ ತಲುಪುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.​ಡಿ ಕುಮಾರಸ್ವಾಮಿ (H.D.Kumaraswamy) ಹೇಳಿದ್ದಾರೆ.

ದಾಖಲೆ ಕೊಡುತ್ತೇನೆ ಬ್ರದರ್ ಎಂದು ಹೇಳಿದ ಕುಮಾರಸ್ವಾಮಿ, ನೈಸ್ ರಸ್ತೆ ದೇವೇಗೌಡರ ಪಾಪದ ಕೂಸು ಅಂತೀರಾ. ಆದರೆ, ನೈಸ್​ನ ಉದ್ದೇಶ ಎನು? ಟೌನ್ ಶಿಪ್ ಯಾವ ರೀತಿ ಇರಬೇಕು? ಅವರು ಮಾಡಿದ್ದೇನು? ರಸ್ತೆ ಯಾವ ರೀತಿ ಇರಬೇಕು ಅಂತ‌ ದೇವೇಗೌಡರ ಒಪ್ಪಂದ ಮಾಡಿದ್ದರು. ಆದರೆ ಇವರೆಲ್ಲ ಎನು ಮಾಡಿದ್ದಾರೆ? ಇವರ ಮಹಾನ್ ಸಾಧನೆ ಬಗ್ಗೆ ಬಿಡುಗಡೆ ಮಾಡುತ್ತೇನೆ ಎಂದರು.

ಟಿಬಿ ಜಯಚಂದ್ರ ಅವರು ಯೋಜನೆಯಲ್ಲಾದ ಅಕ್ರಮದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನೀವು ರೈತರ ಪರವಾಗಿ ಇದ್ದರೆ ಆ ಜಮೀನು ವಾಪಸ್ ಪಡೆದು ರೈತರಿಗೆ ನೀಡಿ ಎಂದು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸುತ್ತೇನೆ ಎಂದರು.

ನೈಸ್ ಹೆಸರಿನಲ್ಲಿ ಡಿಕೆ ಸಹೋದರರು ಕೊಳ್ಳೆ ಹೊಡೆದಿರುವ ರೈತರ ಭೂಮಿ ಹಾಗೂ ಅಕ್ರಮಗಳ ಬಗ್ಗೆ ಬುಧವಾರ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಡಿಕೆ ಸುರೇಶ್ ಅವರು ಸಂಸದರಾಗುವ ಮುನ್ನ ಆಸ್ತಿ ಎಷ್ಟಿತ್ತು? ಸಂಸದರಾದ ನಂತರ ಆಸ್ತಿ ಎಷ್ಟಾಯಿತು? ಎಂಬುದು ಗೊತ್ತಿದೆ ಎಂದಿದ್ದರು.

ಇದನ್ನೂ ಓದಿ: ನೈಸ್ ಅಕ್ರಮ ಆರೋಪ: ದಾಖಲೆ ಸಲ್ಲಿಸಲು ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೋರಿದ ಹೆಚ್​ಡಿ ಕುಮಾರಸ್ವಾಮಿ

ಡಿಕೆ ಸುರೇಶ್ ಸಹೋದರ ಡಿಕೆ ಶಿವಕುಮಾರ್ ಅವರು 2004 ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದು ರಾಮನಗರ ಜಿಲ್ಲೆಯ ಉದ್ಧಾರಕ್ಕೋ ಅಥವಾ ನೈಸ್ ಕಂಪನಿ ಉದ್ಧಾರ ಮಾಡಿ ರೈತರ ಭೂಮಿ ಲೂಟಿ ಹೊಡೆಯುವುದಕ್ಕೋ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು.

ಜನರ ಅನುಕೂಲಕ್ಕಾಗಿ ಬೆಂಗಳೂರು ಸುತ್ತಮುತ್ತ ರಸ್ತೆಗಳನ್ನು ನಿರ್ಮಾಣ ಮಾಡಲು ನೈಸ್ ಯೋಜನೆಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಈ ಲೂಟಿಕೋರರು ಬೆಂಗಳೂರು ಸುತ್ತಮುತ್ತಲಿನ ರೈತರ ಭೂಮಿಯನ್ನು ಕೊಳ್ಳೆ ಹೊಡೆದರು ಎಂದು ಡಿಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದರು.

ನೈಸ್ ಯೋಜನೆಗೆ ಹೆಚ್​ಡಿ ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಆಕ್ರೋಶ ಹೊರಹಾಕಿದ್ದ ಕುಮಾರಸ್ವಾಮಿ, ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ. ನೈಸ್ ರಸ್ತೆಯ ‘ತಿರುಚಿದ ಒಪ್ಪಂದ’ದ ಬಗ್ಗೆಯೂ ಅವರು ಹೇಳಬೇಕಿತ್ತಲ್ಲವೇ? ಅಂತ ಪ್ರಶ್ನಿಸಿದ್ದರು.

ನೈಸ್ ಯೋಜನೆ ಯಾರಿಗೆಲ್ಲಾ ಕಾಮಧೇನು, ಕಲ್ಪವೃಕ್ಷವಾಗಿದೆ ನನಗಿಂತ ನಿಮಗೆ ಚೆನ್ನಾಗಿ ಗೊತ್ತು. ಧನಪಿಶಾಚಿ ರಾಜಕಾರಣಿಗಳು, ಮುಖ್ಯ ಕಾರ್ಯದರ್ಶಿ ಮಟ್ಟದವರೂ ಸೇರಿ ಅನೇಕ ಅಧಿಕಾರಿಗಳ ‘ಅನೈತಿಕ ಭ್ರಷ್ಟವ್ಯೂಹ’ ಕರ್ನಾಟಕವನ್ನು ಕಂಡರಿಯದ ರೀತಿಯಲ್ಲಿ ಲೂಟಿ ಮಾಡಿದೆ. ಈ ಲೂಟಿಯ ಕಥೆಯಲ್ಲಿ ನಿಮ್ಮ ಪಾತ್ರವೇನು? ಎಂದು ಡಿಕೆ ಶಿವಕುಮಾರ್ ಅವರನ್ನು ಕುಮಾರಸ್ವಾಮಿ ಪ್ರಶ್ನಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Tue, 22 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು