ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ವಿಶೇಷ ಮಾಹಿತಿ ಇದ್ದರೆ ಪೊಲೀಸರಿಂದ ತನಿಖೆ: ದಿನೇಶ್ ಗುಂಡೂರಾವ್

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

Important Highlight‌
ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ವಿಶೇಷ ಮಾಹಿತಿ ಇದ್ದರೆ ಪೊಲೀಸರಿಂದ ತನಿಖೆ: ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ
Follow us
Bhemesh Poojar
| Updated By: Rakesh Nayak Manchi

Updated on:Aug 07, 2023 | 2:53 PM

ರಾಯಚೂರು, ಆಗಸ್ಟ್ 7: ಕೃಷಿ ಸಚಿವ ಎನ್​ ಚಲುವರಾಯಸ್ವಾಮಿ (N Chaluvaraya Swamy) ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao), ಬೇರೆ ಯಾವುದೋ ಉದ್ದೇಶಕ್ಕೆ ರಾಜಕಾರಣ ಮಾಡಲು ಹೊರಟಿದ್ದಾರೆ. ಈ ಬಗ್ಗೆ ಸ್ಪಷ್ಟ ಮಾಹಿತಿ, ಉತ್ತರವನ್ನು ಸದನದಲ್ಲಿ ಸಚಿವರು ನೀಡಿದ್ದಾರೆ. ಒಂದು ವೇಳೆ ವಿಶೇಷ ಮಾಹಿತಿ ಇದ್ದರೆ ಪೊಲೀಸರು ತನಿಖೆ ಮಾಡುತ್ತಾರೆ ಎಂದರು.

ಚಲುವರಾಯ ಸ್ವಾಮಿ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಮೇಲಿಂದಮೇಲೆ ಕೇಳಿಬರುತ್ತಿವೆ. ಇತ್ತೀಚೆಗಷ್ಟೇ, ವರ್ಗಾವಣೆ ವಿಚಾರವಾಗಿ ಮಂಡ್ಯ ಜಿಲ್ಲೆಯಲ್ಲಿ ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣದಲ್ಲೂ ಕೃಷಿ ಸಚಿವರ ಹೆಸರು ಕೇಳಿಬಂದಿತ್ತು. ಇವರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಇದೀಗ ಲಂಚ ಆರೋಪ ಕೇಳಿಬಂದಿದೆ.

6 ರಿಂದ 8 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡುತ್ತಿರುವುದಾಗಿ ಆರೋಪಿಸಿ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅಲ್ಲದೆ, ಸಚಿವರ ವಿರುದ್ಧ ಕ್ರಮ ಕೈಗೊಳ್ಳಲಿದ್ದರೆ ವಿಷ ಕುಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳ ಪತ್ರವನ್ನು ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿದ್ದಾರೆ. ಸರ್ಕಾರ ಮುಖ್ಯಕಾರ್ಯದರ್ಶಿ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರದೀಪ್ ಸೂಚಿಸಿದ್ದಾರೆ.

ಇದನ್ನೂ ಓದಿ: ಲಂಚಕ್ಕೆ ಬೇಡಿಕೆ, ಚಲುವರಾಯಸ್ವಾಮಿ ವಿರುದ್ಧ ಗಂಭೀರ ಆರೋಪ: ರಾಜ್ಯಪಾಲರಿಗೆ ದೂರು

ವಿಜಯ ರಾಘವೇಂದ್ರ ಕುಟುಂಬಕ್ಕೆ ಗುಂಡೂರಾವ್ ಸಾಂತ್ವಾನ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂಧನಾ ನಿಧನ ವಿಚಾರವಾಗಿ ಮಾತನಾಡಿದ ದಿನೇಶ್ ಗುಂಡೂರಾವ್, ವಿಜಯ ರಾಘವೇಂದ್ರ ಪತ್ನಿ ಅವರಿಗೆ ಬಹಳ ಚಿಕ್ಕ ವಯಸ್ಸು. ನನಗೆ ಅವರ ಪರಿಚಯವಿದೆ. ವಿಜಯರಾಘವೇಂದ್ರ ಅವರ ಪರಿಚಯ ಕೂಡ ಇದೆ. ಸ್ಪಂದನಾ ಅವರ ತಂದೆ ಶಿವರಾಂ ನಮ್ಮ ಪಕ್ಷದ ಮುಖಂಡರು. ಸ್ಪಂದನಾ ಅವರ ನಿಧನ ದುಃಖಕರವಾಗಿದೆ. ಈ ಚಿಕ್ಕವಯಸ್ಸಿನಲ್ಲಿ ಹೃದಯಾಘಾತದಿಂದ ತೀರಿಕೊಳ್ಳುವಂತದ್ದು ಆಶ್ಚರ್ಯ ಆಗಿದೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಭಗವಂತ ಅವರಿಗೆ ದುಃಖ ಬರಿಸುವ ಶಕ್ತಿ ನೀಡಲಿ ಎಂದರು.

ಹುಟ್ಟೂರು ಬೆಳ್ತಂಗಡಿಯಲ್ಲಿ ಅಂತ್ಯಕ್ರಿಯೆ ವಿಚಾರವಾಗಿ ಮಾತನಾಡಿದ ದಿನೇಶ್ ಗುಂಡೂರಾವ್, ಅದು ಅವರ ಕುಟುಂಬದ ತೀರ್ಮಾನ. ಖಂಡಿತ ಅದಕ್ಕೆ ಎಲ್ಲ ರೀತಿ ಸಹಕಾರ, ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Mon, 7 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು