ರಾಜ್ಯದಲ್ಲಿ ಪಕ್ಷ ಕಟ್ಟಿದ ಪ್ರಮುಖರಲ್ಲಿ ಒಬ್ಬರಾದ ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ: ಬಿಎಸ್​ವೈ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಅವರ ಕಾರ್ಯಕ್ರಮಕ್ಕೆ ಆಹ್ವಾನಿಸಿರಲಿಲ್ಲ. ವಿರೋಧ ಪಕ್ಷಗಳು ಇದನ್ನೇ ಮುಂದಿಟ್ಟುಕೊಂಡು ಟೀಕೆ ಮಾಡಲು ಆರಂಭಿಸಿದಾಗ ಕೊನೆಗೆ ಬಿಎಸ್​ವೈಗೆ ಆಹ್ವಾನ ನೀಡಿದರು. ನಂತರ ವಿಪಕ್ಷಗಳ ಟೀಕೆ ಬಗ್ಗೆ ಬಿಎಸ್​ವೈ ತಿರುಗೇಟು ನೀಡಿದರು.

Important Highlight‌
ರಾಜ್ಯದಲ್ಲಿ ಪಕ್ಷ ಕಟ್ಟಿದ ಪ್ರಮುಖರಲ್ಲಿ ಒಬ್ಬರಾದ ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ: ಬಿಎಸ್​ವೈ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
TV9 Digital Desk
| Updated By: Rakesh Nayak Manchi

Updated on: Dec 15, 2022 | 2:05 PM

ಕೊಪ್ಪಳ: ರಾಜ್ಯದಲ್ಲಿ ಪಕ್ಷ ಕಟ್ಟಿದ ಪ್ರಮುಖ ನಾಯಕರಲ್ಲಿ ನಾನೂ ಒಬ್ಬನಾಗಿದ್ದು, ರಾಜ್ಯಾದ್ಯಂತ ಹಗಲಿರುಳು ಓಡಾಡಿ ಪಕ್ಷವನ್ನು ಕಟ್ಟಿಬೆಳೆಸಿದ್ದೇವೆ. ಹೀಗಾಗಿ ಪಕ್ಷದಲ್ಲಿ ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಸ್ಪಷ್ಟನೆ ನೀಡಿದ್ದಾರೆ. ಕೊಪ್ಪಳ (Koppala)ದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ಪಕ್ಷವನ್ನ ನೋಡಿಕೊಳ್ಳಲಿ. ನಮ್ಮ ಬಗ್ಗೆ ಅವರಿಗೇಕೆ ಚಿಂತೆ. ನಮ್ಮ ಪಕ್ಷದಲ್ಲಿ ಎಲ್ಲವೂ ಸರಿಯಿದೆ. ರಾಜ್ಯ ಬಿಜೆಪಿ ನಾಯಕರು ಒಗ್ಗಟ್ಟಾಗಿದ್ದೇವೆ, ಯಾವುದೇ ಗೊಂದಲಗಳಿಲ್ಲ. ನಾನು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು. ನಿನ್ನೆಯವರೆಗೂ ಕಾರ್ಯಕ್ರಮಕ್ಕೆ ಬಿಎಸ್​ವೈ ಅವರಿಗೆ ಆಹ್ವಾನ ಇರಲಿಲ್ಲ. ಕೊನೇ ಕ್ಷಣದಲ್ಲಿ ನಿನ್ನೆ ಆಹ್ವಾನಿಸಿದ ಹಿನ್ನಲೆ ಹೆಲಿಕಾಪ್ಟರ್ ಮೂಲಕ ಯಡಿಯೂರಪ್ಪ ಅವರು ಕೊಪ್ಪಳಕ್ಕೆ ಬಂದಿಳಿದರು. ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ತಮ್ಮ ನಾಯಕನಿಗೆ ಸ್ವಾಗತ ಕೋರಿದರು. ಬಳಿಕ ಸುದ್ದಿಗಾರರೊಂದಿಗೆ ಮಾಜಿ ಮುಖ್ಯಮಂತ್ರಿಯವರು ಮಾತನಾಡಿದರು.

ಇದನ್ನೂ ಓದಿ: ವರ್ಚ್ಯೂವಲ್ ಮೂಲಕ ಜಿಲ್ಲಾ ಬಿಜೆಪಿ ಕಾರ್ಯಾಲಯಗಳ ಉದ್ಘಾಟನೆ; ಮಧ್ಯಾಹ್ನ ಕೊಪ್ಪಳಕ್ಕೆ ಜೆಪಿ ನಡ್ಡಾ ಆಗಮನ

ಹಗುರವಾಗಿ ಮಾತನಾಡಿ ಪ್ರಚಾರ ಪಡೆಯುತ್ತೇನೆಂಬುದು ಭ್ರಮೆಯಲ್ಲಿದ್ದಾರೆ. ಕಾಂಗ್ರೆಸ್​​ನಲ್ಲಿ ಬಣಗಳನ್ನು ಕೂಡಿಸಲು ಹರಸಾಹಸ ಪಡುತ್ತಿದ್ದಾರೆ. ಭಿನ್ನಮತ ಶಮನ ಮಾಡಲು ಮಲ್ಲಿಕಾರ್ಜುನ ಖರ್ಗೆ ಯತ್ನಿಸುತ್ತಿದ್ದಾರೆ. ಕಾಂಗ್ರೆಸ್​​ನವರು ಹೀಗೆ ಹಗುರವಾಗಿ ಮಾತನಾಡುತ್ತಲೇ ಇರಲಿ ಎಂದು ಮನೆಯೊಂದು ನೂರು ಬಾಗಿಲಾಗಿದೆ ಎಂಬ ಹೇಳಿಕೆ ನೀಡಿದ ಖರ್ಗೆಗೆ ಬಿಎಸ್​ವೈ ತಿರುಗೇಟು ನೀಡಿದರು.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ. ರಾಜ್ಯದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ತರಲು ನಾವು ಶ್ರಮಿಸುತ್ತೇವೆ. ಪಕ್ಷದೊಳಗೆ ಕಡೆಗಣನೆ ಮಾಡಿದ್ದಾರೆ ಎಂಬುವುದು ಸುಳ್ಳು. ಜನಾರ್ಧನರಡ್ಡಿ ನನಗೆ ಸಿಕ್ಕಿದ್ದರೂ ಅವರನ್ನು ಕಡೆಗಣನೆ ಮಾಡುವ ಪ್ರಶ್ನೆ ಇಲ್ಲ. ಅವರ ಪ್ರಕರಣಗಳಿವೆ, ಅವುಗಳು ಮುಗಿದ ನಂತರ ಅವರು ಬಿಜೆಪಿಯಲ್ಲಿರುತ್ತಾರೆ. ಅವರನ್ನು ಕರೆದುಕೊಳ್ಳುತ್ತೇವೆ. ಈಗ ಗಂಗಾವತಿಯಲ್ಲಿ ಮನೆ ಮಾಡಿದ್ದರಿಂದ ಈ ಗೊಂದಲವಿದೆ. ಆದರೆ ಅವರು ನಮ್ಮೊಂದಿಗೆ ಇರುತ್ತಾರೆ ಎಂದರು.

ಇದನ್ನೂ ಓದಿ: ಜನಾರ್ಧನ ರೆಡ್ಡಿ ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ, ಪಕ್ಷದ ಟಿಕೆಟ್​ನಿಂದಲೇ ಸ್ಪರ್ಧಿಸುತ್ತಾರೆ: ಬಿ ಎಸ್ ಯಡಿಯೂರಪ್ಪ

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವುದೊಂದಿಗೆ ನನ್ನ ಆಸೆಯಾಗಿದೆ. ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕು ಎನ್ನುವುದು ಪಕ್ಷ ನಿರ್ಧರಿಸುತ್ತದೆ. ಕಾಂಗ್ರೆಸ್ ಪ್ರತ್ಯೇಕ ಯಾತ್ರೆ ಬಗ್ಗೆ ನಾನೇನು ಹೇಳುವುದಿಲ್ಲ, ಅದು ಅವರ ಪಕ್ಷದ ವಿಚಾರ ಎಂದರು.

ಬಿಎಸ್​ವೈ ಕಡೆಗಣನೆ; ಶಿಷ್ಯ ಬಳಗದಿಂದ ಹೈಕಮಾಂಡ್​ಗೆ ದೂರು ಸಾಧ್ಯತೆ

ರಾಜ್ಯ ಬಿಜೆಪಿಯಲ್ಲಿ ಬಿಎಸ್​​ವೈ ಅವರನ್ನು ರಾಜ್ಯ ಬಿಜೆಪಿ ನಾಯಕರು ನಡೆದುಕೊಳ್ಳುವ ರೀತಿ ವಿರುದ್ಧ ಯಡಿಯೂರಪ್ಪ ಶಿಷ್ಯ ಬಳಗ ಹೈಕಮಾಂಡ್​ಗೆ ದೂರು ನೀಡುವ ಸಾಧ್ಯತೆ ಇದೆ. ಕೊಪ್ಪಳದಲ್ಲಿ ಕಾರ್ಯಕ್ರಮಕ್ಕೆ ಕೊನೇ ಕ್ಷಣದವರೆಗೆ ಆಹ್ವಾನ ನೀಡದಿರುವ ಹಿನ್ನಲೆ ಎಚ್ಚೆತ್ತ ಶಾಸಕ ಎಂ.ಪಿ‌.ರೇಣುಕಾಚಾರ್ಯ ನೇತೃತ್ವದ ತಂಡ ಭಾನುವಾರದಂದು ದೆಹಲಿಗೆ ತೆರಳಿ ವರಿಷ್ಠರ ಗಮನಕ್ಕೆ ತರಲು ಮುಂದಾಗಿದ್ದಾರೆ. ಚುನಾವಣೆ ಹತ್ತಿರಕ್ಕೆ ಬಂದಾಗ ನಾಯಕರ ಈ ರೀತಿಯ ವರ್ತನೆಯು ಪಕ್ಷಕ್ಕೆ ತೀವ್ರ ಪೆಟ್ಟು ಕೊಡುವ ಬಗ್ಗೆ ಹೈಕಮಾಂಡಗೆ ಮನವರಿಕೆ ಮಾಡಿಕೊಡುವ ಸಾದ್ಯತೆ ಇದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ದೆಹಲಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ ಶಾಸಕ ಎಂ.ಪಿ‌.ರೇಣುಕಾಚಾರ್ಯ, ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಅಭಿವೃದ್ಧಿ ವಿಚಾರದ ಬಗ್ಗೆ ಪಕ್ಷದ ವರಿಷ್ಠರನ್ನ ಭೇಟಿ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಸಹೋದರ‌‌ನ ಪುತ್ರನ ಸಾವು ಸಂಭವಿಸಿದ ದಿನದಿಂದ ಹೊನ್ನಾಳಿಯಲ್ಲಿಯೇ ಇರುವ ರೇಣುಕಾಚಾರ್ಯ, ದಿಢೀರ್ ದೆಹಲಿ ಪ್ರವಾಸ ಕೈಗೊಂಡ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಆರಂಭವಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ