ಬೆಂಗಳೂರು, ಆಗಸ್ಟ್ 10: ನಮ್ಮ ಮೇಲೆ 40% ಅಂತ ಸುಳ್ಳು, ನಿರಾಧಾರ ಆರೋಪ ಮಾಡಿ ಅಧಿಕಾರಕ್ಕೆ ಬಂದ್ದರಲ್ಲಾ, ಈಗ ನಿಮ್ಮ ಮೇಲೆ 15% ಕಮಿಷನ್ ಆರೋಪ ಮಾಡಿದ್ದಾರೆ. ಇದಕ್ಕೆ ನಿಮ್ಮ ಉತ್ತರ ಏನು ಎಂದು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಆರ್. ಅಶೋಕ್ (Mla R Ashoka) ಪ್ರಶ್ನೆ ಮಾಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರ ಹಣ ಬಿಡುಗಡೆ ವಿಳಂಬ ಹಿನ್ನೆಲೆ ಇಂದು ಶಾಸಕ ಆರ್ ಅಶೋಕ್ ಕಛೇರಿಗೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿ ಚರ್ಚಿಸಿದ್ದಾರೆ. ಇದೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಆರ್. ಅಶೋಕ್ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಶುರುವಾಡಿದ್ದ ರೀತಿಯಲ್ಲೇ ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’ ಅಭಿಯಾನ
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ ಶಾಸಕ ಆರ್.ಅಶೋಕ್ ಕಾಂಗ್ರೆಸ್ನವರು ನಾವು ಒಂದು ರುಪಾಯಿನೂ ತಿಂದಿಲ್ಲ ಎನ್ನುತ್ತಾರೆ. 2 ತಿಂಗಳಿಂದ ಯಾವುದೇ ಯೋಜನೆಗೆ ಅನುಮೋದನೆ ನೀಡಿಲ್ಲ. ಬೆಂಗಳೂರು ಉಸ್ತುವಾರಿ ಸಚಿವರು 26 ಕಂಡಿಷನ್ ಹಾಕಿದ್ದಾರೆ. ಗಮನಕ್ಕೆ ತರದೆ ವರ್ಗಾವಣೆ ಮಾಡುವಂತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದರು.
ಇದನ್ನೂ ಓದಿ: ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ
ನಾನು ಕೂಡ 4 ಬಾರಿ ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದೇನೆ. ಒಂದು ಬಾರಿಯೂ ಕೂಡ ಹೀಗೆ ನಡೆದುಕೊಂಡಿಲ್ಲ. ಲೋಕಸಭಾ ಚುನಾವಣೆಗೆ ಕರ್ನಾಟಕವನ್ನು ಲೂಟಿ ಮಾಡ್ತಿದ್ದೀರಾ? ಕರ್ನಾಟಕವನ್ನು ಎಟಿಎಂ ರೀತಿ ಬಳಸಿಕೊಳ್ತಿದ್ದಾರೆಂದು ಅಮಿತ್ ಶಾ ಹೇಳಿದ್ದರು. ಅದೇ ರೀತಿ ಕರ್ನಾಟಕವನ್ನು ಎಟಿಎಂ ರೀತಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಹೊಸ ಸರಕಾರ ಬಂದಾಗ 6 ತಿಂಗಳು ವಿರೋಧ ಪಕ್ಷ, ಜನರು ಮಾತನಾಡುವುದಿಲ್ಲ. ಮಾಧ್ಯಮದವರು ಅವರ ತಂಟೆಗೆ ಹೋಗುವುದಿಲ್ಲ. ಇಲ್ಲಿ ಬಂದು ಎರಡೇ ತಿಂಗಳಿಗೆ ಹಗರಣಗಳೇ (ಸ್ಕ್ಯಾಂಡಲ್) ಹೆಚ್ಚುತ್ತಿದೆ. ದಿನನಿತ್ಯ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಟೀಕಿಸಿದರು. ಹಲವು ಸಚಿವರ ವಿರುದ್ಧ ಕಮಿಷನ್ ಆರೋಪ ಬಂದಿದೆ ಎಂದು ಅಶೋಕ್ ಅವರು ಆಕ್ಷೇಪಿಸಿದರು. ನೀವೇನು ಸತ್ಯಹರಿಶ್ಚಂದ್ರರೇ? 2013ರಿಂದ ತನಿಖೆ ನಡೆಸಿ ಎಂದು ಸವಾಲೆಸೆದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:54 pm, Thu, 10 August 23