ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿವೈ ವಿಜಯೇಂದ್ರ, ಸಿಎಂ ಜೊತೆ ಕುಶಲೋಪರಿ

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರು ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು.

Important Highlight‌
ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿವೈ ವಿಜಯೇಂದ್ರ, ಸಿಎಂ ಜೊತೆ ಕುಶಲೋಪರಿ
ಸಿದ್ದರಾಮಯ್ಯನವರನ್ನ ಭೇಟಿಯಾದ ವಿಜಯೇಂದ್ರ
Follow us
ರಮೇಶ್ ಬಿ. ಜವಳಗೇರಾ
|

Updated on:May 23, 2023 | 1:21 PM

ಬೆಂಗಳೂರು: ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa)ನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರು ಪ್ರಮಾಣ ವಚನ ಸ್ವೀಕರಿಸಿದರು. ಇಂದು(ಮೇ 23) ವಿಧಾನಸಭೆಯಲ್ಲಿ ಶಿಕಾರಿಪುರದ ನೂತನ ಶಾಸಕ ಬಿ.ವೈ. ವಿಜಯೇಂದ್ರ ಅವರು ಹುಚ್ಚೂರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿರುವ ವಿಜಯೇಂದ್ರ, ಎಲ್ಲಾ ಪಕ್ಷದ ನಾಯಕರನ್ನು ಭೇಟಿ ಮಾಡಿ ಕೈಕುಲುಕಿದರು. ಇನ್ನು ವಿಧಾನಸಭೆಯಲ್ಲಿ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ಸಿದ್ದರಾಮಯ್ಯ ಸಹ ವಿಜಯೇಂದ್ರ ಅವರಿಗೆ ಶುಭಾಶಯ ಕೋರಿದರು. ಶಾಸಕನಾಗಿ ಆಯ್ಕೆಯಾಗಿ ಬಂದಿದ್ದಕ್ಕೆ ಶುಭಾಶಯ ಹೇಳಿದ ಸಿದ್ದರಾಮಯ್ಯ, ನಿಮ್ಮ ತಂದೆ(ಬಿಎಸ್ ಯಡಿಯೂರಪ್ಪ) ಫೋನ್ ಮಾಡಿದ್ದರು ಎಂದರು. ಹೌದು, ನಾನೇ ನೇರವಾಗಿ ಭೇಟಿ ಮಾಡುತ್ತೇನೆ ಎಂದು ಸುಮ್ಮನಾದೆ ಎಂದ ವಿಜಯೇಂದ್ರ‌ ಹೇಳಿದರು.

ಇದನ್ನೂ ಓದಿ: Karnataka Breaking Kannada News Live: ವಿಶೇಷ ಅಧಿವೇಶನ, ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ

ಇಂದು ಪ್ರಮಾಣವಚನ ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ ವಿಜಯೇಂದ್ರ ಒಳ ಪ್ರವೇಶಿಸುವ ಮುನ್ನ ಶಕ್ತಿಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದರು. ಬಳಿಕ ವಿಧಾನಸಭೆ ಪ್ರವೇಶಿಸಿ, ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಶಿಕಾರಿಪುರ ಕ್ಷೇತ್ರವನ್ನು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಪ್ರತಿನಿಧಿಸುತ್ತಿದ್ದರು. ಆದರೆ, ಚುನಾವಣಾ ರಾಜಕೀಯದಿಂದ ಬಿಎಸ್​ವೈ ನಿವೃತ್ತಿ ಪಡೆದುಕೊಂಡು ಪುತ್ರ ವಿಜಯೇಂದ್ರ ಅವರಿಗೆ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು.  ಅದರಂತೆ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವಿಜಯೇಂದ್ರ  ಸುಮಾರು 11,008 ಮತಗಳ ಅಂತರದಿಂದ ಗೆದ್ದು ವಿಧಾನಸಭೆಗೆ ಪ್ರವೇಶಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:58 pm, Tue, 23 May 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು