ಕಾವೇರಿ ನದಿ ನೀರು ಹಂಚಿಕೆ, ಸುಪ್ರೀಂಕೋರ್ಟ್ ಪ್ರತ್ಯೇಕ ಪೀಠ ರಚನೆ ಮಾಡಿದೆ: ಡಿಸಿಎಂ ಡಿಕೆ ಶಿವಕುಮಾರ್​

ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದಕ್ಕೆ ರಾಜ್ಯದಲ್ಲಿ ಆಕ್ರೋಶ ಹೆಚ್ಚಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡಿನವರು ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್ CJI ನೇತೃತ್ವದಲ್ಲಿ ಪ್ರತ್ಯೇಕ ಪೀಠ ರಚನೆ ಮಾಡಿದೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Important Highlight‌
ಕಾವೇರಿ ನದಿ ನೀರು ಹಂಚಿಕೆ, ಸುಪ್ರೀಂಕೋರ್ಟ್ ಪ್ರತ್ಯೇಕ ಪೀಠ ರಚನೆ ಮಾಡಿದೆ: ಡಿಸಿಎಂ ಡಿಕೆ ಶಿವಕುಮಾರ್​
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on: Aug 21, 2023 | 2:51 PM

ಬೆಂಗಳೂರು, ಆಗಸ್ಟ್​ 21: ಕಾವೇರಿ (Cauvery) ನದಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡಿನವರು ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್ CJI ನೇತೃತ್ವದಲ್ಲಿ ಪ್ರತ್ಯೇಕ ಪೀಠ ರಚನೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸುಪ್ರೀಂಕೋರ್ಟ್​’ ಹೇಳಿದಂತೆ ಪೂರ್ಣ ಪ್ರಮಾಣ ನೀರು ಹರಿಸಲು ಸಾಧ್ಯವಾಗಿಲ್ಲ. ಬಿಜೆಪಿ, ಜೆಡಿಎಸ್ ನಾಯಕರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ಹಿಂದೆ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಕರ್ನಾಟಕ-ತಮಿಳುನಾಡಿನ ಜನ ಅಣ್ಣತಮ್ಮಂದಿರಿದ್ದಂತೆ ಎಂದು ಹೇಳಿದ್ದರು. ಅವರ ಮಾತನ್ನು ನಾವು ಫಾಲೋ ಮಾಡುತ್ತಿದ್ದೇವೆ. ನಮಗೆ ರಾಜ್ಯದ ಜನರ ಹಿತಾಸಕ್ತಿ ಮುಖ್ಯ ಎಂದು ಹೇಳಿದರು.

ಇದನ್ನೂ ಓದಿ: ಚಿಕ್ಕಮಗಳೂರು: ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ; ರಾಜ್ಯದ ಜನರನ್ನು ಬಲಿ ಕೊಡುವ ಕೆಲಸ ಸರ್ಕಾರ ಮಾಡ್ತಿದೆ ಎಂದ ಶೋಭಾ ಕರಂದ್ಲಾಜೆ

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲು ಬುಧವಾರ ಸರ್ವಪಕ್ಷ ಸಭೆ ಕರೆದಿದ್ದೇವೆ. ಮಾಜಿ ಸಿಎಂಗಳಿಗೆ ಮತ್ತು ಸಂಸದರಿಗೆ ಸಭೆಗೆ ಆಹ್ವಾನ ಕೊಟ್ಟಿದ್ದೇವೆ. ಸಭೆಗೆ ಬಂದು ಎಲ್ಲರೂ ತಮ್ಮಮ್ಮ ಸಲಹೆ ಕೊಡಬಹುದು. ಕಾವೇರಿ, ಮಹದಾಯಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯದ ಸದ್ಯದ ಸ್ಥಿತಿಗತಿ, ನೀರು ಸಂಗ್ರಹದ ವಸ್ತುಸ್ಥಿತಿಯನ್ನು ಸುಪ್ರೀಂಕೋರ್ಟ್​​ಗೆ ಮನವರಿಕೆ ಮಾಡಲು ಸರ್ಕಾರ ಮುಂದಾಗಿತ್ತು. ಈ ಬಗ್ಗೆ ಸುಪ್ರೀಂಕೋರ್ಟ್​​ಗೆ ಮನವಿ ಸಲ್ಲಿಸಲು ಕ್ಯಾಬಿನೆಟ್​​​​ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು ಸಂಸದೀಯ ಸಚಿವ ಹೆಚ್​​​​.ಕೆ.ಪಾಟೀಲ್​ ಹೇಳಿದ್ದರು.

ಸರ್ವಪಕ್ಷ ಸಭೆಗೆ ನಮಗೆ ಇನ್ನೂ ಆಹ್ವಾನ ಬಂದಿಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ತಮಿಳುನಾಡಿಗೆ ಕೆಆರ್​​ಎಸ್​ ಡ್ಯಾಮ್​ನಿಂದ ನೀರು ಬಿಡುವ ವಿಚಾರವಾಗಿ ನಗರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ರಾಜ್ಯದ ಜನತೆಗೆ, ಮೈಸೂರು ಭಾಗದ ರೈತರಿಗೆ ರಾಜ್ಯದ ಜಲಸಂಪನ್ಮೂಲ ಇಲಾಖೆ ಸಚಿವರು ಡಿಕೆ ಶಿವಕುಮಾರ್​ ಉತ್ತರ ಕೊಡಲಿ. ವಿರೋಧ ಪಕ್ಷವಾಗಿ ನಾವು ಪ್ರಶ್ನೆ ಮಾಡಿದ್ದೇವೆ, ಉತ್ತರ ಕೊಡಲಿ ಎಂದು ವಾಗ್ದಾಳಿ ಮಾಡಿದ್ದಾರೆ.

ರೈತರೇ ನೇರವಾಗಿ ಹೋಗಿ ಕೋರ್ಟ್​​ನಲ್ಲಿ ಪ್ರಶ್ನೆ ಮಾಡಲು ಆಗುತ್ತಾ? ಈ ವಿಚಾರದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಕಾವೇರಿ ಜಲಾಶಯ ಪ್ರದೇಶದ ಜನತೆಯ ಒಳಿತಿಗೆ ಕೆಲಸ ಮಾಡಲಿ. ಸರ್ವಪಕ್ಷ ಸಭೆಗೆ ನಮಗೆ ಇನ್ನೂ ಆಹ್ವಾನ ಬಂದಿಲ್ಲ. ಆಹ್ವಾನ ಬಂದರೆ ಸಹಕಾರ ನೀಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು