ಸತತವಾಗಿ ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್ (Australia Cricket) ತಂಡದ ಸೀಮಿತ ಓವರ್‌ಗಳ ನಾಯಕ ಆ್ಯರೊನ್ ಫಿಂಚ್ (Aaron Finch) ಇದೀಗ ಏಕದಿನ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಸೆಪ್ಟಂಬರ್ 11 ಭಾನುವಾರದಂದು ಫಿಂಚ್ ನ್ಯೂಜಿಲೆಂಡ್ (New Zealand) ತಂಡದ ಎದುರು ಕೊನೆಯ ಏಕದಿನ ಪಂದ್ಯ ಆಡಲಿದ್ದು, ಇದಾದ ಬಳಿಕ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ನಿಂದ ಹೊರಗುಳಿಯಲಿದ್ದಾರೆ. ಆದರೆ, ಈ ವರ್ಷ ಆಸ್ಟ್ರೇಲಿಯಾದಲ್ಲೇ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಆ್ಯರೋನ್ ಫಿಂಚ್ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಆರಂಭಿಕ ಬ್ಯಾಟರ್ಗಳಲ್ಲಿ ಒಬ್ಬರು. ಆಸ್ಟ್ರೇಲಿಯಾದ ಆರಂಭಿಕ ಬ್ಯಾಟಿಂಗ್ ವಿಭಾಗದ ಪ್ರಮುಖ ಶಕ್ತಿಯಾಗಿದ್ದರು. ಆದರೆ, ಕಳೆದ ಕೆಲವು ತಿಂಂಗಳುಗಳಿಂದ ಸತತವಾಗಿ ರನ್ ಗಳಿಸಲು ವಿಫಲವಾಗುತ್ತಿರುವುದು ಟೀಕೆಗೆ ಗುರಿಯಾಗಿತ್ತು. ಫಿಂಚ್ ತಮ್ಮ ಕೊನೆಯ 7 ಏಕದಿನ ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 26 ರನ್ ಮಾತ್ರ ಮಾತ್ರ. ಇದರಲ್ಲಿ ಮೂರು ಬಾರಿ ಡಕ್‌ಔಟ್ ಆಗಿರುವುದು ಕೂಡ ಸೇರಿದೆ.
JUST IN: Aaron Finch has announced his retirement from ODI cricket.
— cricket.com.au (@cricketcomau) September 9, 2022
ಫಿಂಚ್ ಈ ವರ್ಷ 13 ಏಕದಿನ ಇನ್ನಿಂಗ್ಸ್‌ಗಳಲ್ಲಿ ಕೇವಲ 13 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಜೊತೆಗೆ ಈ ಕ್ಯಾಲೆಂಡರ್ ವರ್ಷದಲ್ಲಿ ಫಿಂಚ್ ಬರೋಬ್ಬರಿ 5 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನದಲ್ಲಿ ಪುನಃ ಶೂನ್ಯಕ್ಕೆ ಔಟಾಗುವ ಮೂಲಕ ತಮ್ಮ ಹೆಸರಿನಲ್ಲಿ ಅನಗತ್ಯ ದಾಖಲೆಯನ್ನು ಮಾಡಿದರು. ಫಿಂಚ್ ಒಂದು ಕ್ಯಾಲೆಂಡರ್ ವರ್ಷದಲ್ಲಿ 0 ಗೆ ಹೆಚ್ಚು ಬಾರಿ ಔಟಾದ ಆಸ್ಟ್ರೇಲಿಯಾದ ನಾಯಕ ಎಂಬ ಕುಖ್ಯಾತಿಗೆ ಪಾತ್ರರಾದರು.
ಆಸ್ಟ್ರೇಲಿಯಾ ತಂಡದ ಪರ ಫಿಂಚ್ ಒಟ್ಟು 145 ಏಕದಿನ ಪಂದ್ಯಗಳನ್ನಾಡಿದ್ದು, 5401 ರನ್ಗಳಿಸಿದ್ದಾರೆ. ಇದರಲ್ಲಿ 17 ಶತಕ ಸೇರಿಕೊಂಡಿವೆ. 2020ರಲ್ಲಿ ಏಕದಿನ ಕ್ರಿಕೆಟ್ನ ಪ್ಲೇಯರ್ ಆಫ್ ದಿ ಇಯರ್ ಪ್ರಶಸ್ತಿ ಗೆದ್ದಿದ್ದರು. ಜೊತೆಗೆ 2015ರಲ್ಲಿ ಆಸ್ಟ್ರೇಲಿಯಾ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಇವರು 2013 ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದರು. ನಾಯಕನಾಗಿ 52 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿರುವ ಫಿಂಚ್ ತನ್ನ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ 52.08 ರ ಗೆಲುವಿನ ಶೇಕಡಾವಾರು ಪ್ರಮಾಣ ಹೊಂದಿದ್ದಾರೆ.
Published On - 7:55 am, Sat, 10 September 22