ಐರ್ಲೆಂಡ್ ವಿರುದ್ಧದ ಪ್ರವಾಸದಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿರುವ ಟೀಮ್ ಇಂಡಿಯಾ (India vs Ireland) ಈಗಾಗಲೇ ಇನ್ನೊಂದು ಪಂದ್ಯ ಬಾಕಿಯಿರುವಂತೆ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಾಗಿದೆ. ಜಸ್ಪ್ರಿತ್ ಬುಮ್ರಾ ನೇತೃತ್ವದ ಭಾರತದ ಯುವ ಪಡೆ ಬ್ಯಾಟಿಂಗ್-ಬೌಲಿಂಗ್ನಲ್ಲಿ ಬೊಂಬಾಟ್ ಆಟವಾಡಿದೆ. ಬುಮ್ರಾ ಅಂತೂ ಸುಮಾರು ಒಂದು ವರ್ಷಗಳ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ. ರಿಂಕು ಸಿಂಗ್ ಮೊದಲ ಬಾರಿ ಕಣಕ್ಕಿಳಿದು ಸ್ಫೋಟಕ ಬ್ಯಾಟಿಂಗ್ ನಡೆಸುವ ಮೂಲಕ ಭರವಸೆ ಮೂಡಿಸಿದ್ದಾರೆ. ಇದೀಗ ಭಾರತ ಕೊನೆಯ ಪಂದ್ಯಕ್ಕೆ ಸಜ್ಜಾಗುತ್ತಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ 3ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಐರ್ಲೆಂಡ್ ನಡುವಿನ ತೃತೀಯ ಟಿ20 ಪಂದ್ಯ ಆಗಸ್ಟ್ 23 ರಂದು ನಡೆಯಲಿದೆ
ಭಾರತ ಮತ್ತು ಐರ್ಲೆಂಡ್ ನಡುವಿನ 3ನೇ ಟಿ20 ಪಂದ್ಯ ಯಾವ ಮೈದಾನದಲ್ಲಿ ನಡೆಯಲಿದೆ?
ಭಾರತ ಮತ್ತು ಐರ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಡಬ್ಲಿನ್‌ನ ವಿಲೇಜ್ ಸ್ಟೇಡಿಯಂ ಆತಿಥ್ಯವಹಿಸಲಿದೆ.
Asia Cup 2023: ಟೀಮ್ ಇಂಡಿಯಾಗೆ ಪ್ಲೇಯಿಂಗ್ 11 ಆಯ್ಕೆಯೇ ದೊಡ್ಡ ಸವಾಲು
ಭಾರತ ಮತ್ತು ಐರ್ಲೆಂಡ್ ನಡುವಿನ 3ನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಐರ್ಲೆಂಡ್ ನಡುವಿನ ತೃತೀಯ ಟಿ20 ಪಂದ್ಯದ JioCinema ಅಪ್ಲಿಕೇಶನ್‌ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ. ಕ್ರಿಕೆಟ್ ಅಭಿಮಾನಿಗಳು Sports18 ನಲ್ಲಿ ಲೈವ್ ಆಕ್ಷನ್ ಅನ್ನು ವೀಕ್ಷಿಸಬಹುದಾಗಿದೆ.
ಉಭಯ ತಂಡಗಳು:
ಟೀಮ್ ಇಂಡಿಯಾ: ಜಸ್ಪ್ರಿತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಯಶಸ್ವಿ ಜೈಸ್ವಾಲ್ , ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ರಾಸ್ ಅಡೈರ್, ಹ್ಯಾರಿ ಟೆಕ್ಟರ್, ಗರೆಥ್ ಡೆಲಾನಿ, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಲೋರ್ಕನ್ ಟಕರ್ (ವಿಕೆಟ್ ಕೀಫರ್), ಮಾರ್ಕ್ ಅಡೈರ್, ಜೋಶುವಾ ಲಿಟಲ್, ಬ್ಯಾರಿ ಮೆಕಾರ್ಥಿ, ಥಿಯೋ ವ್ಯಾನ್‌ಕೋಮ್, ಬೆಂಜಮಿನ್ ವೈಟ್, ಕ್ರೇಗ್ ಯಂಗ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:00 am, Tue, 22 August 23