ಚೆನ್ನೈನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ (Asian Champions Trophy 2023) ಸೆಮಿಫೈನಲ್ ಪಂದ್ಯದಲ್ಲಿ ಜಪಾನ್ ತಂಡವನ್ನು (India vs Japan Hockey Match) 0-5 ಗೋಲುಗಳಿಂದ ಮಣಿಸಿದ ಭಾರತ ಹಾಕಿ ತಂಡ ಇದೀಗ ಫೈನಲ್ ಟಿಕೆಟ್ ಖಚಿತಪಡಿಸಿಕೊಂಡಿದೆ. ಇಂದು ಅಂದರೆ ಆಗಸ್ಟ್ 12 ರಂದು ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಮಲೇಷ್ಯಾ (India vs Malaysia) ತಂಡವನ್ನು ಎದುರಿಸುತ್ತಿದೆ. ಶುಕ್ರವಾರ ನಡೆದ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ, ಹಾಲಿ ಚಾಂಪಿಯನ್ ಕೊರಿಯಾ ತಂಡವನ್ನು 2-6 ಗೋಲುಗಳಿಂದ ಮಣಿಸಿದ ಮಲೇಷ್ಯಾ ಫೈನಲ್ಗೆ ಲಗ್ಗೆ ಇಟ್ಟರೆ, ಇತ್ತ ಜಪಾನ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ ಭಾರತ ಐದನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ಗೆ ಎಂಟ್ರಿಕೊಟ್ಟಿದೆ.
ರೌಂಡ್ ರಾಬಿನ್ ಮಾದರಿಯಲ್ಲಿ ನಡೆದ ಗುಂಪು ಹಂತದಲ್ಲಿ ಒಂದೇ ಒಂದು ಪಂದ್ಯದಲ್ಲಿ ಸೋಲು ಕಾಣದ ಭಾರತ, ಜಪಾನ್ ವಿರುದ್ಧ ಮಾತ್ರ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಹಾಗೆಯೇ ಗುಂಪು ಹಂತದಲ್ಲಿ ಇದೇ ಮಲೇಷ್ಯಾ ತಂಡವನ್ನು ಎದುರಿಸಿದ್ದ ಭಾರತ ಈ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು 5-0 ಗೋಲುಗಳಿಂದ ಮಣಿಸಿತ್ತು. ಹೀಗಾಗಿ ಫೈನಲ್ ಪಂದ್ಯದಲ್ಲಿ ಭಾರತದ್ದೆ ಮೇಲುಗೈ ಇದ್ದರು ಎದುರಾಳಿಯನ್ನು ನಿರ್ಲಕ್ಷಿಸುವಂತಿಲ್ಲ.
ಜಪಾನ್ ಮಣಿಸಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ಗೆ ಲಗ್ಗೆ ಇಟ್ಟ ಭಾರತ ಹಾಕಿ ತಂಡ..!
ಭಾರತ ಮತ್ತು ಮಲೇಷ್ಯಾ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಮಲೇಷ್ಯಾ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಆಗಸ್ಟ್ 12 ರ ಶನಿವಾರದಂದು ನಡೆಯಲಿದೆ.
ಭಾರತ ಮತ್ತು ಮಲೇಷ್ಯಾ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಮಲೇಷ್ಯಾ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಮಲೇಷ್ಯಾ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ಭಾರತ ಮತ್ತು ಮಲೇಷ್ಯಾ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ರಾತ್ರಿ 8.30 ರಿಂದ ಆರಂಭವಾಗಲಿದೆ.
ಭಾರತ ಮತ್ತು ಮಲೇಷ್ಯಾ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಈ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಭಾರತ ಮತ್ತು ಮಲೇಷ್ಯಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವನ್ನು ಯಾವ OTT ಪ್ಲಾಟ್‌ಫಾರ್ಮ್‌ನಲ್ಲಿ ವೀಕ್ಷಿಸಬಹುದು?
ವೀಕ್ಷಕರು ಭಾರತ ಮತ್ತು ಮಲೇಷ್ಯಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವನ್ನು ಫ್ಯಾನ್‌ಕೋಡ್ ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ