Realme C35: ಸೇಲ್ ಕಾಣುತ್ತಿದೆ ಅತಿ ಕಡಿಮೆ ಬೆಲೆಯ ರಿಯಲ್‌ ಮಿ C35: ಬಜೆಟ್ ಪ್ರಿಯರು ಕಣ್ಮುಚ್ಚಿ ಖರೀದಿಸಬಹುದು

ಕಂಪನಿ ಹೊಸ ರಿಯಲ್‌ ಮಿ ಸಿ35 (Realme C35) ಸ್ಮಾರ್ಟ್​ಫೋನ್ ಅನ್ನು ಖರೀದಿಸಲು ಅವಕಾಶ ಮಾಡಿಕೊಟ್ಟಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಕೂಡ ಹೊಂದಿದ್ದು, 5,000mAh ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಕೂಡಿದೆ. ಜೊತೆಗೆ ಅತಿ ಕಡಿಮೆ ಬೆಲೆಯನ್ನು ಹೊಂದಿದೆ.

Important Highlight‌
Realme C35: ಸೇಲ್ ಕಾಣುತ್ತಿದೆ ಅತಿ ಕಡಿಮೆ ಬೆಲೆಯ ರಿಯಲ್‌ ಮಿ C35: ಬಜೆಟ್ ಪ್ರಿಯರು ಕಣ್ಮುಚ್ಚಿ ಖರೀದಿಸಬಹುದು
Realme C35
Follow us
TV9 Digital Desk
| Updated By: Vinay Bhat

Updated on: Mar 13, 2022 | 6:28 AM

ವಿಶ್ವದ ಮೊಬೈಲ್ ಮಾರುಕಟ್ಟೆಯಲ್ಲಿ ವಿಭಿನ್ನ ಸ್ಮಾರ್ಟ್​ಫೋನ್​ಗಳನ್ನು (Smartphone) ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ರಿಯಲ್ ಮಿ ಕಂಪನಿ ಭಾರತದಲ್ಲಿ ಮೊನ್ನೆಯಷ್ಟೆ ಬಹುನಿರೀಕ್ಷಿತ ರಿಯಲ್ ಮಿ 9 ಸರಣಿಯ (Realme 9 Series) ರಿಯಲ್ ಮಿ 9 4G, ರಿಯಲ್ ಮಿ 9 5G ಮತ್ತು ರಿಯಲ್ ಮಿ 9SE ಸ್ಮಾರ್ಟ್​ಫೋನ್ ಬಿಡುಗಡೆಗೆ ಮಾಡಿತ್ತು. ಈ ಫೋನ್ ದೇಶದಲ್ಲಿ ಭರ್ಜರಿ ಸದ್ದು ಮಾಡುತ್ತಿರುವಾಗಲೇ ತನ್ನ ಮತ್ತೊಂದು ಹೊಸ ರಿಯಲ್‌ ಮಿ ಸಿ35 (Realme C35) ಸ್ಮಾರ್ಟ್​ಫೋನ್ ಅನ್ನು ಖರೀದಿಸಲು ಅವಕಾಶ ಮಾಡಿಕೊಟ್ಟಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಕೂಡ ಹೊಂದಿದ್ದು, 5,000mAh ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಕೂಡಿದೆ. ಜೊತೆಗೆ ಅತಿ ಕಡಿಮೆ ಬೆಲೆಯನ್ನು ಹೊಂದಿದೆ. ನೀವು ನೂತನ ಬಜೆಟ್ ಬೆಲೆಯ ಸ್ಮಾರ್ಟ್​ಫೋನನ್ನು ಖರೀದಿಸಬೇಕೆಂಬ ಪ್ಲಾನ್​ನಲ್ಲಿದ್ದರೆ ರಿಯಲ್‌ ಮಿ C35 ಅನ್ನು ಕಣ್ಮುಚ್ಚು ತೆಗೆದುಕೊಳ್ಳಬಹುದು.

ಬೆಲೆ ಎಷ್ಟು?:

ರಿಯಲ್‌ ಮಿ C35 ಭಾರತದಲ್ಲಿ ಎರಡು ಮಾದರಿಯಲ್ಲಿ ಖರೀದಿಗೆ ಸಿಗಲಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಬೆಲೆ ಕೇವಲ 11,999 ರೂ. ಆಗಿದೆ. 4GB RAM + 128GB ಸ್ಟೋರೇಜ್ ರೂಪಾಂತರಕ್ಕೆ 12,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಸೇಲ್ ಕಾಣುತ್ತಿದೆ. ಜೊತೆಗೆ ರಿಯಲ್ ಮಿ.ಕಾಮ್ ಮತ್ತು ರಿಟೇಲ್ ಸ್ಟೋರ್​ಗಳಲ್ಲೂ ಖರೀದಿಸಬಹುದು.

ಏನು ವಿಶೇಷತೆ?:

ಇದರ ವಿಶೇಷತೆ ಬಗ್ಗೆ ಗಮನಿಸುವುದಾದರೆ, ರಿಯಲ್‌ ಮಿ C35 ಸ್ಮಾರ್ಟ್‌ಫೋನ್‌ 1,080×2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 90.7% ಸ್ಕ್ರೀನ್-ಟು-ಬಾಡಿ ಅನುಪಾತದಿಂದ ಕೂಡಿದೆ. ಆಕ್ಟಾ-ಕೋರ್ ಯೂನಿಸೋಕ್‌ T616 SoC ಪ್ರೊಸೆಸರ್‌ ಬಲವನ್ನು ಪಡೆಉಕೊಂಡಿದ್ದು ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ರನ್ ಆಗಲಿದೆ. ಹಾಗೆಯೇ 4GB RAM ಮತ್ತು 64GB, 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿರಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ 5P ಲೆನ್ಸ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ರಿಯಲ್‌ ಮಿ C35 ಸ್ಮಾರ್ಟ್‌ಫೋನ್‌ ದೀರ್ಘ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ನೀಡುತ್ತದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಕೂಡ ಹೊಂದಿರುವುದು ವಿಶಶೇಷ. ಜೊತೆಗೆ ಈ ಸ್ಮಾರ್ಟ್‌ಫೋನ್ ಪವರ್ ಬಟನ್‌ನಲ್ಲಿ ಎಂಬೆಡ್ ಮಾಡಲಾದ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿರಲಿದೆ.

Huawei Nova 9 SE: ಬಿಡುಗಡೆ ಆಗಿದೆ 108MP ಕ್ಯಾಮೆರಾದ ಮತ್ತೊಂದು ಹೊಸ ಸ್ಮಾರ್ಟ್​ಫೋನ್: ಬೆಲೆ ಕೇವಲ …

WhatsApp: ವಾಟ್ಸ್​ಆ್ಯಪ್ ಮೂಲಕವೂ ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ತಿಳಿಯಬಹುದು: ಹೇಗೆ ಗೊತ್ತೇ?

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ