ತಮಿಳುನಾಡುಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆ, ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಶಪಿಸಿದ ರೈತ ಮಹಿಳೆ!
ಮುಖ್ಯಮಂತ್ರಿಯವರನ್ನು ವಿಶೇಷವಾಗಿ ತರಾಟೆಗೆ ತೆಗೆದುಕೊಂಡ ಮಹಿಳೆ ಗೌರಮ್ಮ, ಬಸ್ ಫ್ರೀ, ವಿದ್ಯುತ್ ಫ್ರೀ ಅದು ಫ್ರೀ ಇದು ಫ್ರೀ ಅಂತ ಮಾಡಿದ್ದು ಯಾವ ಪುರುಷಾರ್ಥಕ್ಕಾಗಿ? ನಮ್ಮ ಮಕ್ಕಳು ಉಪವಾಸ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಯಾಕೆ ಪೆಟ್ರೋಲ್ ಬೆಲೆ ಕಡಿಮೆ ಮಾಡಲಿಲ್ಲ? ಯಾಕೆ ಡೀಸೆಲ್ ಬೆಲೆ ಕಡಿಮೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಮಂಡ್ಯ: ನಗರದ ಸಂಜಯ ಸರ್ಕಲ್ ನಲ್ಲಿ ಕಾವೇರಿ ನದಿ ನೀರನ್ನು (Cauvery River water) ತಮಿಳುನಾಡುಗೆ ಹರಿಸುತ್ತಿರುವುದನ್ನು ವಿರೋಧಿಸಿ ರೈತರ ಪ್ರತಿಭಟನೆ (farmers protest) ಜೋರಾಗುತ್ತಿದೆ. ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಿಂದ ರೈತರು ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜಿಲ್ಲೆಯ ಗ್ರಾಮವೊಂದರಿಂದ ಅಗಮಿಸಿ ಧರಣಿಯಲ್ಲಿ ಪಾಲ್ಗೊಂಡಿರುವ ಹಿರಿಯ ರೈತ ಮಹಿಳೆಯೊಬ್ಬರು (farmer woman) ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿಯವರನ್ನು ವಿಶೇಷವಾಗಿ ತರಾಟೆಗೆ ತೆಗೆದುಕೊಂಡ ಮಹಿಳೆ (ಅವರ ಹೆಸರು ಗೌರಮ್ಮ), ಬಸ್ ಫ್ರೀ, ವಿದ್ಯುತ್ ಫ್ರೀ ಅದು ಫ್ರೀ ಇದು ಫ್ರೀ ಅಂತ ಮಾಡಿದ್ದು ಯಾವ ಪುರುಷಾರ್ಥಕ್ಕಾಗಿ? ನಮ್ಮ ಮಕ್ಕಳು ಉಪವಾಸ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಯಾಕೆ ಪೆಟ್ರೋಲ್ ಬೆಲೆ ಕಡಿಮೆ ಮಾಡಲಿಲ್ಲ? ಯಾಕೆ ಡೀಸೆಲ್ ಬೆಲೆ ಕಡಿಮೆ ಮಾಡಲಿಲ್ಲ, ಯಾಕೆ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ ಅಂತೆಲ್ಲ ಪ್ರಶ್ನೆಗಳ ಸುರಿಮಳೆಗೈದರು. ಗೌರಮ್ಮ ಸರ್ಕಾರಕ್ಕೆ ದುರ್ದಾನ ಹಾಕುವಾಗ ರವಿ ಹೆಸರನ್ನು ಉಲ್ಲೇಖಿಸುತ್ತಾರೆ, ಅದು ಯಾರು ಅಂತ ಗೊತ್ತಾಗಲಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ