‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Gandhada Gudi | Tax Free: ‘ಗಂಧದ ಗುಡಿ’ ಅ.28ರಂದು ರಿಲೀಸ್ ಆಗಲಿದೆ. ಪುನೀತ್ ರಾಜ್ಕುಮಾರ್ ಅವರ ಈ ಕನಸಿನ ಸಾಕ್ಷ್ಯಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಪರಿಸರ ಕಾಳಜಿ ಇರುವ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರಕ್ಕೆ ತೆರಿಗೆ ವಿನಾಯಿತಿ (Tax Free) ನೀಡಬೇಕು ಎಂದು ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಅಭಿಯಾನ ಶುರು ಮಾಡಿದ್ದರು. ಅದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ಯುವ ಜನತೆಗೆ ಮಾದರಿ ಆಗುವಂತಹ ಸಾಕ್ಷ್ಯಚಿತ್ರ ಆದ್ದರಿಂದ ಅದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಇದು ಪುನೀತ್ ರಾಜ್ಕುಮಾರ್ ಅವರ ಕನಸಿನ ಪ್ರಾಜೆಕ್ಟ್. ಅ.28ರಂದು ‘ಗಂಧದ ಗುಡಿ’ ರಿಲೀಸ್ ಆಗಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Oct 21, 2022 10:02 PM
Latest Videos