ಕೊಡಗಿನಲ್ಲಿ ಮುಂದುವರಿದ ಮಳೆಯ ಅಬ್ಬರ, ಕುಶಾಲನಗರ ಪಟ್ಟಣಕ್ಕೆ ನುಗ್ಗಿದ ಹಾರಂಗಿ ಜಲಾಶಯದ ನೀರು

ಕೊಡಗಿನಲ್ಲಿ ಮುಂದುವರಿದ ಮಳೆಯ ಅಬ್ಬರ, ಕುಶಾಲನಗರ ಪಟ್ಟಣಕ್ಕೆ ನುಗ್ಗಿದ ಹಾರಂಗಿ ಜಲಾಶಯದ ನೀರು

Gopal AS
| Updated By: ರಮೇಶ್ ಬಿ. ಜವಳಗೇರಾ

Updated on: Jul 25, 2023 | 9:12 AM

ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ಬಿಟ್ಟ ಪರಿಣಾಮ ಕುಶಾಲನಗರ ಪಟ್ಟಣದ ಸಾಯಿ ಬಡಾವಣೆಗೆ ನೀರು ನುಗ್ಗಿ ಆತಂಕ ಸೃಷ್ಟಿಸಿದೆ.

ಕೊಡಗು, (ಜುಲೈ 25): ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಾರಂಗಿ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಹೆಚ್ಚುವರಿ ನೀರು ನದಿಯಿಂದ ಹೊರಕ್ಕೆ ಬಿಡಲಾಗಿದೆ.  ಪರಿಣಾಮ ಕುಶಾಲನಗರ ಪಟ್ಟಣದ ಸಾಯಿ ಬಡಾವಣೆಗೆ ನೀರು ನುಗ್ಗಿ ಆತಂಕ ಸೃಷ್ಟಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾಯಿ ಬಡಾವಣೆ ನಿವಾಸಿಗಳನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.