ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಬಾಗಿನ ವ್ಯವಸ್ಥೆ
Goravanahalli Maha Lakshmi Temple: ರಾಜ್ಯದ ಇತರೆ ಕಡೆಗಳಲ್ಲೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ವರಮಹಾಲಕ್ಷ್ಮಿ ಹಬ್ಬ/ವ್ರತವನ್ನು ಶ್ರಾವಣ ಮಾಸದ ಎರಡನೇ ಶುಕ್ರವಾರವಾದ ಇಂದು ಆಚರಿಸಲಾಗುತ್ತದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಕ್ಷೇತ್ರದಲ್ಲೂ ಸರತಿ ಸಾಲಿನಲ್ಲಿ ನಿಂತು ಭಕ್ತರು (Devotees) ಶ್ರೀ ಮಹಾಲಕ್ಷ್ಮಿ ದೇವಿಯ ದರ್ಶನ/ ಆಶಿರ್ವಾದ ಪಡೆಯುತ್ತಿದ್ದಾರೆ. ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಬಾಗಿನ ನೀಡುವ ವ್ಯವಸ್ಥೆ ಮಾಡಲಾಗಿದೆ.
ತುಮಕೂರು, ಆಗಸ್ಟ್ 25: ಇಂದು ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬ ಬಲು ಜೋರಾಗಿದೆ ನಡೆದಿದೆ. ಕೊರೊನಾ ಕಾಟದ ನಂತರ ಈ ಬಾರಿ ಹಬ್ಬಗಳಿಗೆ ಕಳೆಕಟ್ಟಿದೆ. ಇನ್ನು ತುಮಕೂರು (Tumkur) ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಕ್ಷೇತ್ರದಲ್ಲೂ (Goravanahalli Maha Lakshmi Temple) ಸರತಿ ಸಾಲಿನಲ್ಲಿ ನಿಂತು ಭಕ್ತರು (Devotees) ಶ್ರೀ ಮಹಾಲಕ್ಷ್ಮಿ ದೇವಿಯ ದರ್ಶನ/ ಆಶಿರ್ವಾದ ಪಡೆಯುತ್ತಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ಅರ್ಚಕರಾದ ಸುಬ್ರಹ್ಮಣ್ಯ ಟಿವಿ9 ಗೆ ತಿಳಿಸಿದ್ದಾರೆ. ಗೊರವನಹಳ್ಳಿ ಕ್ಷೇತ್ರದ ಮಹಾಲಕ್ಷ್ಮಿ ಸಕಲ ಸಿದ್ದಿಯನ್ನ ಕೊಡುವ ತಾಯಿ ಎಂದು ಜನಜನಿತ.
ರಾಜ್ಯದ ಇತರೆ ಕಡೆಗಳಲ್ಲೂ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ವರಮಹಾಲಕ್ಷ್ಮಿ ಹಬ್ಬ/ವ್ರತವನ್ನು ಶ್ರಾವಣ ಮಾಸದ ಎರಡನೇ ಶುಕ್ರವಾರವಾದ ಇಂದು ಆಚರಿಸಲಾಗುತ್ತದೆ. ರಾಜಧಾನಿ ಬೆಂಗಳೂರು ನಗರದ ಲಕ್ಷ್ಮಿ ದೇವಸ್ಥಾನಗಳಲ್ಲಿಯೂ ವಿಶೇಷ ಪೂಜೆ ನಡೆದಿದೆ. ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಬೆಳ್ಳಗ್ಗೆ 5 ಗಂಟೆಯಿಂದಲೇ ಅಮ್ಮನವರಿಗೆ ಪಂಚಾಭಿಷೇಕ, ಪುಷ್ಪಭಿಷೇಕ ನೇರೆವೇರುತ್ತಿದ್ದು ವಿಶೇಷ ಅಲಂಕಾರದ ನಂತರ ಬರುವ ಭಕ್ತದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮತ್ತೊಂದೆಡೆ ನಗರದ ಬನಶಂಕರಿ, ಮಹಾಲಕ್ಷ್ಮಿ ಲೇಔಟ್ನ ಲಕ್ಷ್ಮಿ ದೇವಸ್ಥಾನ, ಕೆ ಆರ್ ಮಾರ್ಕೆಟ್ನ ಕೋಟೆ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಇನ್ನು ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಬಾಗಿನ ನೀಡುವ ವ್ಯವಸ್ಥೆ ಮಾಡಲಾಗಿದೆ.
ಮತ್ತಷ್ಟು ಕನ್ನಡ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ