ರಾಮನಗರ: ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಗ್ರಾಮಸ್ಥರಿಂದ ಮುತ್ತಿಗೆ
ಮನೆಗಳ ಹಕ್ಕುಪತ್ರ ನೀಡಿಲ್ಲವೆಂದು ಅನಿತಾ ಕುಮಾರಸ್ವಾಮಿ ಕಾರಿಗೆ ಹನುಮಂತೇಗೌಡನದೊಡ್ಡಿ ಗ್ರಾಮಸ್ಥರಿಂದ ಮುತ್ತಿಗೆ
ರಾಮನಗರ: ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ಕಾರಿಗೆ ಹನುಮಂತೇಗೌಡನದೊಡ್ಡಿ ಗ್ರಾಮಸ್ಥರು ಮುತ್ತಿಗೆ ಹಾಕಿದ್ದಾರೆ. ರಾಮನಗರ (Ramnagar)ತಾಲೂಕಿನ ಹುಣಸನಹಳ್ಳಿಯಲ್ಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಶಂಕುಸ್ಥಾಪನೆಗೆ ಅನಿತಾ ಅನಿತಾ ಕುಮಾರಸ್ವಾಮಿ ಬಂದಿದ್ದರು. ಈ ವೇಳೆ ಹನುಮಂತೇಗೌಡನದೊಡ್ಡಿ ಗ್ರಾಮಸ್ಥರು ತಮಗೆ ಮನೆಗಳ ಹಕ್ಕುಪತ್ರ ನೀಡಿಲ್ಲ, ಗ್ರಾಮಕ್ಕೆ ರಸ್ತೆ ನಿರ್ಮಾಣ ಮಾಡಿಕೊಟ್ಟಿಲ್ಲವೆಂದು ಅನಿತಾ ಕುಮಾರಸ್ವಾಮಿ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಒಂದು ಬಾರಿಯೂ ಗ್ರಾಮಕ್ಕೆ ಬಂದಿಲ್ಲ ಎಂದು ಶಾಸಕರ ಬೆಂಬಲಿಗರು, ಗ್ರಾಮಸ್ಥರ ನಡುವೆ ವಾಗ್ವಾದ ನಡೆದಿದೆ.