ಹಾರಂಗಿ ಜಲಾಶಯ ಕ್ರೆಸ್ಟ್ ಗೇಟ್ ಓಪನ್, ನೀರು ಧುಮ್ಮಿಕ್ಕುವ ಮನಮೋಹಕ ದೃಶ್ಯವನ್ನು ನೋಡಿ
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ ನೀರು ಬಿಡಲಾಗಿದೆ. ಅದರ ಮನಮೋಹಕ ದೃಶ್ಯ ನೋಡಿ.
Important Highlight
ಕೊಡಗು, (ಜುಲೈ, 23): ರಾಜ್ಯದ ಪಶ್ಚಿಮ ಘಟ್ಟದಲ್ಲಿ ಮಳೆರಾಯ(Rain) ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.. ಇದ್ರಿಂದ ಜೀವನದಿಗಳಿಗೆ ಜೀವ ಕಳೆ ಬಂದಿದ್ದು, ಉಕ್ಕಿ ಹರಿಯುತ್ತಿವೆ. ಇನ್ನು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೆ(harangi reservoir) ಒಳಹರಿವು ಹೆಚ್ಚಳವಾಗಿದೆ. ಸದ್ಯ ಹಾರಂಗಿ ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದ್ದರೆ, 5 ಸಾವಿರ ಕ್ಯೂಸೆಕ್ ಹೊರಹರಿವು ಇದೆ. ಡ್ಯಾಂಗೆ ಒಳಹರಿವು ಹೆಚ್ಚಳ ಹಿನ್ನೆಲೆ ಕಾವೇರಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಕ್ರೆಸ್ಟ್ ಗೇಟ್ ಮೂಲಕ ನೀರು ಧುಮ್ಮಿಕ್ಕುವ ಮನಮೋಹಕ ದೃಶ್ಯವನ್ನು ನೋಡಿ