ಹಾರಂಗಿ ಜಲಾಶಯ ಕ್ರೆಸ್ಟ್ ಗೇಟ್ ಓಪನ್, ನೀರು ಧುಮ್ಮಿಕ್ಕುವ ಮನಮೋಹಕ ದೃಶ್ಯವನ್ನು ನೋಡಿ

|

Updated on: Jul 23, 2023 | 2:48 PM

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ ನೀರು ಬಿಡಲಾಗಿದೆ. ಅದರ ಮನಮೋಹಕ ದೃಶ್ಯ ನೋಡಿ.

ಕೊಡಗು, (ಜುಲೈ, 23): ರಾಜ್ಯದ ಪಶ್ಚಿಮ ಘಟ್ಟದಲ್ಲಿ ಮಳೆರಾಯ(Rain) ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.. ಇದ್ರಿಂದ ಜೀವನದಿಗಳಿಗೆ ಜೀವ ಕಳೆ ಬಂದಿದ್ದು, ಉಕ್ಕಿ ಹರಿಯುತ್ತಿವೆ. ಇನ್ನು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೆ(harangi reservoir) ಒಳಹರಿವು ಹೆಚ್ಚಳವಾಗಿದೆ. ಸದ್ಯ ಹಾರಂಗಿ ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್​ ನೀರು ಒಳಹರಿವು ಇದ್ದರೆ, 5 ಸಾವಿರ ಕ್ಯೂಸೆಕ್ ಹೊರಹರಿವು ಇದೆ. ಡ್ಯಾಂಗೆ ಒಳಹರಿವು ಹೆಚ್ಚಳ ಹಿನ್ನೆಲೆ ಕಾವೇರಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಕ್ರೆಸ್ಟ್ ಗೇಟ್ ಮೂಲಕ ನೀರು ಧುಮ್ಮಿಕ್ಕುವ ಮನಮೋಹಕ ದೃಶ್ಯವನ್ನು ನೋಡಿ